ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಅವರು, ಯಾವುದೇ ಕಾರಣಕ್ಕೂ ಕಲ್ಯಾಣ ಮಂಟಪಗಳಲ್ಲಿ ಮದುವೆ ನಡೆಸಲು ಅವಕಾಶ ನೀಡಬಾರದು. ಮನೆಯಲ್ಲಿ ಕೇವಲ 50 ಮಂದಿ ಮಿತಿಗೆ ಒಳಪಟ್ಟು ಮದುವೆ ನಡೆಸಲು ಸ್ಥಳೀಯ ಸಂಸ್ಥೆಯಿಂದ ಅನುಮತಿ ಪಡೆದಿರಬೇಕು ಎಂದರು.
ಇನ್ನು, ಮದುವೆಯ ಬಳಿಕ ಕಡ್ಡಾಯವಾಗಿ ಮದುವೆಯಲ್ಲಿ ಭಾಗವಹಿಸಿದವರ ಹೆಸರು, ವಿಳಾಸ, ಮೊಬೈಲ್ ಸಂಖ್ಯೆಯನ್ನು ಸ್ಥಳೀಯಾಡಳಿತಕ್ಕೆ ಸಲ್ಲಿಸಬೇಕು. ಜಾತ್ರೆ, ಸಂತೆಗಳಿಗೆ ಅನುಮತಿಯನ್ನು ನೀಡಬಾರದು ಎಂದವರು ಸ್ಪಷ್ಟಪಡಿಸಿದರು.
Get In Touch With Us info@kalpa.news Whatsapp: 9481252093

















