No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಶಿವಮೊಗ್ಗದಲ್ಲಿ ಪೈಪ್ ಕಾಂಪೋಸ್ಟ್‌ ಕ್ರಾಂತಿ: ಇದನ್ನು ಮಾಡುವುದು ಹೇಗೆ? ಪ್ರಯೋಜನವೇನು? ಇಲ್ಲಿದೆ ಮಾಹಿತಿ

kalpa News by kalpa News
February 18, 2020
in Special Articles
0
ಶಿವಮೊಗ್ಗದಲ್ಲಿ ಪೈಪ್ ಕಾಂಪೋಸ್ಟ್‌ ಕ್ರಾಂತಿ: ಇದನ್ನು ಮಾಡುವುದು ಹೇಗೆ? ಪ್ರಯೋಜನವೇನು? ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮಲೆನಾಡಿನ ಹೆಬ್ಬಾಗಿಲು ಎಂದಾಕ್ಷಣ ಥಟ್ ಅಂತಾ ನೆನಪಿಗೆ ಬರುವುದು ನಮ್ಮ ಶಿವಮೊಗ್ಗ ದಿನೇ ದಿನೇ ಅತ್ಯಂತ ಸುಂದರವಾಗಿ ಬೆಳೆಯುತ್ತಿರುವ ಸಿಟಿಯು ತನ್ನ ಮಡಿಲಲ್ಲಿ ಸಂಗ್ರಹವಾಗಿರುವ ಕಸದ ರಾಶಿಯನ್ನೇ ಮರೆತು ಬಿಟ್ಟಿದೆ. ಇದಕ್ಕಾಗಿ ಹಸಿ ಕಸ, ಒಣ ಕಸ ಇದನ್ನು ಬೇರ್ಪಡಿಸಿ ಅವರವರ ಮನೆಯಲ್ಲಿಯೆ ಕಸದಿಂದ ಗೊಬ್ಬರವನ್ನು ತಯಾರಿಸುವ ಪೈಪ್ ಕಾಂಪೋಸ್ಟ್‌ ಯೋಜನೆಗೆ ಮಹಾನಗರ ಪಾಲಿಕೆ ಮುಂದಾಗಿದ್ದು, ಸ್ವಚ್ಚತೆಯ ಕಡೆಗೆ ಮತ್ತೊಂದು ಹೆಜ್ಜೆ ಇದಾಗಿದೆ.

ನಗರದಲ್ಲಿ ಸಂಗ್ರಹವಾಗುವ ಕಸದ ಸಮಸ್ಯೆಗೆ ಮುಕ್ತಿ ನೀಡಲು ಮಹಾನಗರ ಪಾಲಿಕೆಯು ವಿನೂತನ ಪ್ರಯೋಗಕ್ಕೆ ಕೈ ಹಾಕಿದೆ. ನಗರದಲ್ಲಿ ಎಲ್ಲೆಂದರಲ್ಲಿ ಕಸ ಕಂಡು ಬರುತ್ತಿರುವುದರಿಂದ ಇದನ್ನು ವಿಲೇವಾರಿ ಮಾಡಲು ಪಾಲಿಕೆಯು ತೀವ್ರವಾಗಿ ಪ್ರಯತ್ನಿಸುತ್ತಿದ್ದರೂ ಸಮಸ್ಯೆ ಬಗೆಹರಿಯುತ್ತಿರಲಿಲ್ಲ. ಹೀಗಾಗಿ ಪೈಪ್ ಕಾಂಪೋಸ್ಟ್‌ ಎನ್ನುವ ಹೊಸ ಹೊಸ ಪ್ರಯತ್ನಗಳನ್ನು ಮಾಡುವುದಕ್ಕೆ ಪಾಲಿಕೆಯು ಮುಂದಾಗಿದೆ.

ವ್ಯವಸ್ಥಿತ ಘನ ತ್ಯಾಜ್ಯ ನಿರ್ವಹಣೆಯಿಂದ ಸುತ್ತಮುತ್ತಲಿನ ಪರಿಸರದ ನೈರ್ಮಲ್ಯವನ್ನು ಕಾಪಾಡಿಕೊಳ್ಳುವುದರ ಜೊತೆಗೆ ಆರೋಗ್ಯ ಪೂರ್ಣ ವಾತಾವರಣ ನಿರ್ಮಿಸಬಹುದಾಗಿದೆ. ಕೊಳೆತು ಹೋಗುವ ತ್ಯಾಜ್ಯಗಳಾದ ತರಕಾರಿ, ಹೂ, ಹಣ್ಣು ಮೊದಲಾದ ವಸ್ತುಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ ಉತ್ತಮ ಸಾವಯವ ಗೊಬ್ಬರವನ್ನು ಪಡೆಯುವುದಕ್ಕೆ ಹಾಗೂ ಕಸದ ಸಮಸ್ಯೆಯ ನಿರ್ವಹಣೆಗೆ ಪೈಪ್ ಕಾಂಪೋಸ್ಟ್‌ ಎಂಬ ಸಾಧನವು ಒಂದು ಉತ್ತಮವಾದ ಪ್ರಯೋಗವೆಂದರೆ ತಪ್ಪಾಗಲಾರದು.

ಪೈಪ್ ಕಾಂಪೋಸ್ಟ್‌ ಅಳವಡಿಸುವ ವಿಧಾನ…?
ಮನೆಯಲ್ಲಿ ಪ್ರತಿದಿನ ಸಂಗ್ರಹವಾಗುವ ಅಡುಗೆ ತ್ಯಾಜ್ಯ, ಹಣ್ಣಿನ ಸಿಪ್ಪೆ ಇತ್ಯಾದಿ ಹಸಿ ಕಸವನ್ನು ಕಸದ ಗಾಡಿಗೆ ನೀಡದೆ, ಮನೆಯ ಆವರಣದಲ್ಲಿ ಅಳವಡಿಸಲಾಗುವ ಪೈಪ್‌ನಲ್ಲಿ ಪ್ರತಿದಿನ ತುಂಬಿಸಿ ಗೊಬ್ಬರವನ್ನಾಗಿ ಪರಿವರ್ತಿಸುವ ವಿಧಾನವೇ ಪೈಪ್ ಕಾಂಪೋಸ್ಟ್‌.

ಪೈಪ್ ಕಾಂಪೋಸ್ಟ್‌ ತಯಾರಿಗೆ 6 ಅಡಿ ಉದ್ದದ ಪೈಪ್ ಒಂದು ಅಡಿ ಜಾಗ ಸಾಕು. ಇಷ್ಟು ಪ್ರಮಾಣದ ವಸ್ತುಗಳಿಂದಲೇ ಮನೆ ಬಳಿಯೇ ಕೈತೋಟಕ್ಕೆ ಬೇಕಾಗುವ ಗೊಬ್ಬರ ಉತ್ಪಾದಿಸಬಹುದಾಗಿದೆ.

ಮೊದಲಿಗೆ 1 ಅಡಿ ಗುಂಡಿ ತೆಗೆದು 6 ಅಡಿ ಪೈಪ್‌ನ್ನು 1 ಅಡಿ ಗುಂಡಿ ಒಳಗೆ ಹಾಕಿ ಭದ್ರಪಡಿಸಬೇಕು. ನಂತರ ಅದಕ್ಕೆ ಒಂದು ಕೆಜಿ ಬೆಲ್ಲ, ಸಗಣಿ ನೀರು ಹಾಕಿದರೆ ಮುಗಿಯಿತು, ಅರ್ಧ ಕೆಲಸ ಮುಗಿದಂತೆ. ಪ್ಲಾಸ್ಟಿಕ್ ಹೊರತುಪಡಿಸಿ ಮನೆಯಲ್ಲಿ ಪ್ರತಿದಿನ ಉತ್ಪಾದನೆಯಾಗುವ ಭೂಮಿಯಲ್ಲಿ ಕರಗುವ ಎಲ್ಲ ಉತ್ಪನ್ನ ಮತ್ತು ಅಡುಗೆ ತ್ಯಾಜ್ಯ ಹಾಗೂ ಹಣ್ಣಿನ ಸಿಪ್ಪೆ ಸೇರಿದಂತೆ ಹಸಿ ತ್ಯಾಜ್ಯವನ್ನು ಇದರಲ್ಲಿ ಹಾಕಬಹುದು. ವಾರಕ್ಕೆ ಒಂದು ಬಾರಿ ಬೊಗಸೆ ಮಣ್ಣು, ಒಂದು ತಂಬಿಗೆ ನೀರು ಹಾಕಿ ಮುಚ್ಚಳ ಮುಚ್ಚಿದರೆ ಸಾಕು. ಗೊಬ್ಬರ ತನ್ನಷ್ಟಕ್ಕೆ ತಾನೇ ಉತ್ಪತ್ತಿ ಆಗುತ್ತದೆ. ಸಾರ್ವಜನಿಕರು ತಮ್ಮ ಕುಟುಂಬದ ಸದಸ್ಯರನ್ನು ಗಮನದಲ್ಲಿಟ್ಟುಕೊಂಡು ಕಸ ಉತ್ಪಾದನೆಯ ಸಾಮರ್ಥ್ಯಕ್ಕೆನುಗುಣವಾಗಿ ಪೈಪ್ ಕಾಂಪೋಸ್ಟ್‌ ಘಟಕ ಅಳವಡಿಸಿಕೊಳ್ಳಬಹುದಾಗಿದೆ.

ಪ್ರತಿ ಮೂರು ತಿಂಗಳಿಗೊಮ್ಮೆ ಇದರಿಂದ ಉತ್ಕೃಷ್ಟ ಗೊಬ್ಬರ ಸಿಗುವುದರಲ್ಲಿ ಯಾವುದೇ ಅನುಮಾನವೇ ಬೇಡ. ಪಾಲಿಕೆಯ ಕಸ ಸಂಗ್ರಹ ವಾಹನಕ್ಕೆ ಕಾಯುವುದು ಇದರಿಂದ ತಪ್ಪುತ್ತದೆ ಹಾಗೂ ಉತ್ತಮವಾದ ಗೊಬ್ಬರ ಮನೆ ಬಳಿಯೇ ತಯಾರಾಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಕಸವನ್ನು ಎಲ್ಲೆಂದರಲ್ಲಿ ಎಸೆಯುವುದು ತಪ್ಪುತ್ತದೆ. ಈಗಾಗಲೇ ವಿವಿಧ ಜಿಲ್ಲೆಗಳಲ್ಲಿ ಪೈಪ್ ಕಾಂಪೋಸ್ಟ್‌’ನ ಪ್ರಯೋಗ ಮಾಡಲಾಗುತ್ತಿದ್ದು, ಇದರಿಂದ ಉತ್ತಮ ಫಲಿತಾಂಶ ಬಂದಿದೆ. ಹೀಗೆ ಉತ್ಪತ್ತಿಯಾಗುವ ಗೊಬ್ಬರ ಉತ್ಕೃಷ್ಟವಾಗಿದ್ದು, ಇದು ಕೈತೋಟ ಮತ್ತು ರಸ್ತೆ ಬದಿಯಲ್ಲಿ ಬೆಳೆಯುವ ಮರಗಳಿಗೆ ಉತ್ತಮ ಗೊಬ್ಬರವಾಗುತ್ತದೆ.

ಈ ಕಸ ಕೆಲವೇ ತಿಂಗಳುಗಳಲ್ಲಿ ಸಾವಯವ ಗೊಬ್ಬರವಾಗಿ ಪಡೆಯಬಹುದಾಗಿದೆ. ಮಣ್ಣಿನ ಫಲವತ್ತತೆಯನ್ನು ಹೆಚ್ಚಿಸಲು ಕಾಂಪೋಸ್ಟ್‌’ನ ಗೊಬ್ಬರ ಸಹಾಯವಾಗುವುದು. ಗಿಡಗಳಿಗೆ ಬಳಸುವ ಕೀಟನಾಶಕಗಳಿಂದ ಹಲವಾರು ಕಾಯಿಲೆಗಳು ಬರುತ್ತದೆ. ಅದ್ದರಿಂದ ನಮ್ಮ ಮನೆಯ ಕೈತೋಟದಲ್ಲಿ ಬೆಳೆಯುವ ಗಿಡಗಳಿಗೆ ಗೊಬ್ಬರ ಹಾಕಲು ಇರುವ ಮತ್ತೊಂದು ಮಾರ್ಗವೆಂದರೆ ಅದು ಪೈಪ್ ಕಾಂಪೋಸ್ಟ್‌ನ ಗೊಬ್ಬರ. ಇದು ನೀವು ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ಹಾಳು ಮಾಡುವ ಅಪಾಯವನ್ನು ಕಡಿಮೆ ಮಾಡುತ್ತದೆ. ಅದರಲ್ಲೂ ಕಾಂಪೋಸ್ಟ್‌ ಗೊಬ್ಬರವು ವಾಣಿಜ್ಯ ಉದ್ದೇಶಗಳಿಗಾಗಿ ತಯಾರಿಸಲಾಗುವ ಗೊಬ್ಬರವೆಂದೇ ಹೇಳಬಹುದು.

ಕೈ ತೋಟಗಳನ್ನು ಬೆಳೆಸಲು ನಾವು ಬಳಸುವ ಮಣ್ಣಿನಲ್ಲಿ ತರಕಾರಿಗೆ ಅಗತ್ಯವಾಗಿರುವ ಪೋಷಕಾಂಶಗಳು ಇಲ್ಲದೆ ಇರಬಹುದು. ಆದ್ದರಿಂದಲೆ ಈ ಮಣ್ಣಿಗೆ ನಾವು ಗೊಬ್ಬರದ ರೂಪದಲ್ಲಿ ಪೋಷಕಾಂಶಗಳನ್ನು ಒದಗಿಸಬೇಕಾಗಿ ಬರುತ್ತದೆ. ಅದರಲ್ಲೂ ಮಣ್ಣಿಗೆ ಪೋಷಕಾಂಶಗಳನ್ನು ಮತ್ತು ಸಾವಯವ ಅಂಶಗಳು ತುಂಬಿರುವಂತಹ ಗೊಬ್ಬರಗಳನ್ನು ಬಳಕೆ ಮಾಡಿ ಬೆಳೆದ ಹಣ್ಣು ಮತ್ತು ತರಕಾರಿಗಳನ್ನು ಸೇವಿಸುವುದರಿಂದ ಆರೋಗ್ಯದಲ್ಲಿ ಯಾವುದೇ ರೀತಿಯ ಸಮಸ್ಯೆಯು ಕಂಡುಬರುವುದಿಲ್ಲ. ಹಾಗೂ ಸುತ್ತಮುತ್ತಲಿನ ವಾತಾವರಣವು ಕೂಡ ಸ್ವಚ್ಛವಾಗಿ ಕಾಪಾಡಬಹುದು.

ಪೈಪ್ ಕಾಂಪೋಸ್ಟ್‌ ಉಪಯೋಗ…?
ಪ್ರತಿಯೊಬ್ಬರು ಕೂಡ ಪೈಪ್ ಕಾಂಪೋಸ್ಟ್‌ ಬಳಕೆ ಮಾಡುವುದರಿಂದ ವಾತಾವರಣದಲ್ಲಿ ಇರುವಂತಹ ತ್ಯಾಜ್ಯಗಳ ನಿರ್ಮೂಲನೆಗೆ ಸಹಾಯಕವಾಗಿದೆ. ಹಾಗೂ ಸರಳ ರೀತಿಯಲ್ಲಿ ಕಸ ನಿರ್ವಹಣೆ ಮಾಡಬಹುದಾಗಿದೆ. ಇದರಿಂದ ಸಹಜವಾಗಿ ಆರೋಗ್ಯ ಪೂರ್ಣ ಪರಿಸರ ನಿರ್ಮಾಣ ಸಾಧ್ಯವಾಗಲಿದೆ. ಅತ್ಯಂತ ಕಡಿಮೆ ಜಾಗ ಮತ್ತು ಕಡಿಮೆ ವೆಚ್ಚದ ಯೋಜನೆ ಇದಾಗಿದ್ದು, ನಗರ ಮತ್ತು ಗ್ರಾಮಾಂತರ ಪ್ರದೇಶಗಳ ಕಸ ವಿಲೇವಾರಿ ಸಮಸ್ಯೆಯನ್ನು ಬಹುತೇಕ ಪರಿಹರಿಸಬಹುದು. ಉತ್ತಮ ಗುಣಮಟ್ಟದ ಸಾವಯವ ಗೊಬ್ಬರ ಪಡೆದು ಕೈ ತೋಟಗಳಿಗೆ ಬಳಸಿಕೊಳ್ಳಬಹುದು.

ನಗರದಲ್ಲಿ ಸಂಗ್ರಹವಾಗುವ ಕಸದ ಸಮಸ್ಯೆಗೆ ಪೈಪ್ ಕಾಂಪೋಸ್ಟ್‌ ಒಂದು ಉತ್ತಮ ಸಾಧನವೆಂದು ಭಾವಿಸಬೇಕಾಗಿದೆ. ಈ ಪೈಪ್ ಕಾಂಪೋಸ್ಟ್‌ ಘಟಕಗಳಿಂದ ತ್ಯಾಜ್ಯ ಪ್ರಮಾಣ ಇಳಿಕೆ ಮಾಡುವುದರ ಜೊತೆಗೆ ಉತ್ತಮವಾದ ಪರಿಸರವನ್ನು ನಿರ್ಮಾಣ ಮಾಡಬಹುದಾಗಿದೆ. ಹಾಗೂ ಫಲವತ್ತಾದ ಗೊಬ್ಬರಕ್ಕೆ ಪೈಪ್ ಕಾಂಪೋಸ್ಟ್‌ ಒಂದು ಉತ್ತಮವಾದ ಸಾಧನ ಎಂದು ಹೇಳಬಹುದು.
-ಕೆ.ಬಿ. ಶಿವಕುಮಾರ್, ಜಿಲ್ಲಾಧಿಕಾರಿಗಳು, ಶಿವಮೊಗ್ಗ

ಮೊದಲ ಹಂತದಲ್ಲಿ ಎಲ್ಲಾ ಸರ್ಕಾರಿ ವಸತಿಗೃಹಗಳಲ್ಲಿ ಪೈಪ್ ಕಾಂಪೋಸ್ಟ್‌ ಘಟಕಗಳನ್ನು ಅಳವಡಿಸಲಾಗಿದೆ. ಕೆಲವು ಲೇಔಟ್‌ಗಳ ಎಲ್ಲಾ ಮನೆಗಳಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ಪೈಪ್ ಕಾಂಪೋಸ್ಟ್‌ ಘಟಕಗಳನ್ನು ಅಳವಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಆಂದೋಲನದ ರೀತಿಯಲ್ಲಿ ಇಡೀ ಶಿವಮೊಗ್ಗ ನಗರದಲ್ಲಿ ಅನುಷ್ಠಾನಗೊಳಿಸಲಾಗುವುದು.
-ಚಿದಾನಂದ ವಟಾರೆ, ಆಯುಕ್ತರು, ಶಿವಮೊಗ್ಗ ಮಹಾನಗರ ಪಾಲಿಕೆ


Get in Touch With Us info@kalpa.news Whatsapp: 9481252093

Tags: AgricultureKannada News WebsiteLatestNewsKannadaMalnad ArticleOrchardPipe CompostSandhya SihimogeShivamoggaShivamogga DC Sivakumarಕಸ ಸಂಗ್ರಹಕೈತೋಟತ್ಯಾಜ್ಯಪೈಪ್ ಕಾಂಪೋಸ್ಟ್‌ಮಹಾನಗರ ಪಾಲಿಕೆಶಿವಮೊಗ್ಗಸಾವಯವ ಗೊಬ್ಬರ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಹಸ್ರಾಕ್ಷ ಪರಮೇ ವ್ಯೋಮನ್: ನಮ್ಮ ಪ್ರಧಾನಿ ಮೋದಿಗಿದೆ ಸಹಸ್ರಾಕ್ಷ ವೀಕ್ಷಣೆ

Next Post

ಕೃಷಿ, ಕೈಗಾರಿಕೆ, ಕಾನೂನು ಸುವ್ಯವಸ್ಥೆ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ: ರಾಜ್ಯಪಾಲ ವಾಲಾ

kalpa News

kalpa News

Next Post
ಕೃಷಿ, ಕೈಗಾರಿಕೆ, ಕಾನೂನು ಸುವ್ಯವಸ್ಥೆ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ: ರಾಜ್ಯಪಾಲ ವಾಲಾ

ಕೃಷಿ, ಕೈಗಾರಿಕೆ, ಕಾನೂನು ಸುವ್ಯವಸ್ಥೆ ಸೇರಿ ರಾಜ್ಯದ ಸಮಗ್ರ ಅಭಿವೃದ್ಧಿಗೆ ಬದ್ಧ: ರಾಜ್ಯಪಾಲ ವಾಲಾ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL