ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಕೃಷಿ ಕಾಯ್ದೆ ಹಿಂಪಡೆಯಬೇಕು ಎಂದು ರೈತ ಸಂಘಟನೆಗಳು ನಡೆಸುತ್ತಿರುವ ಭಾರತ್ ಬಂದ್ ಪ್ರತಿಭಟನೆಯ ಹಿಂದೆ ಕಾಣದ ಕೈನ ಕೈವಾಡ ಅಡಗಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಆರೋಪಿಸಿದರು.

ಈ ಕುರಿತು ಮಾತನಾಡಿದ ಅವರು, ಕಳೆದ ಒಂದು ತಿಂಗಳಿಂದ ರೈತ ಸಂಘಟನೆಗಳು ಹೋರಾಟ ಮಾಡುತ್ತಿವೆ. ಮೊನ್ನೆ ರಾಜ್ಯ ಸರ್ಕಾರ ವಿರುದ್ಧ ಕರ್ನಾಟಕ ಬಂದ್ ಮಾಡಿದ್ದರು. ಇವತ್ತು ಕೂಡ ಕೇಂದ್ರದ ವಿರುದ್ಧ ಭಾರತ್ ಬಂದ್ ಅನ್ನು ರೈತರು ಮಾಡುತ್ತಿದ್ದಾರೆ. ಈ ಕುರಿತು ಲೋಕಸಭೆಯಲ್ಲಿ ಸಾಕಷ್ಟು ಚರ್ಚೆ ಮಾಡಿಯೇ ಕಾಯ್ದೆಗಳನ್ನು ಜಾರಿಗೆ ತರಲಾಗಿದೆ ರೈತಪರ ಚಿಂತನೆ ಮಾಡುವ ಹಲವರು ಈಗಾಗಲೇ ಕಾಯ್ದೆಯನ್ನು ಸ್ವಾಗತಿಸಿದ್ದಾರೆ ಎಂದರು.

ಈ ಕಾಯ್ದೆಯ ಪರಿಣಾಮ ಈಗಾಗಲೇ ಮಾರುಕಟ್ಟೆ ರೈತರ ಜೀವನದಲ್ಲಿ ಬದಲಾವಣೆ ಕಾಣುತ್ತಿದ್ದೇವೆ ಎಪಿಎಂಸಿ ಕಾಯ್ದೆಯ ಮೂಲಕ ಎಪಿಎಂಸಿ ಒಳಗೆ ಹೊರಗೆ ಮಾರಾಟಕ್ಕೆ ಅವಕಾಶ ನೀಡಲಾಗಿದೆ. ವಿರೋಧ ರಾಜಕೀಯ ಪಕ್ಷಗಳು ದುರುದ್ದೇಶದಿಂದ ರೈತರ ಮುಖವಾಡ ಧರಿಸಿ ಪ್ರತಿಭಟನೆಗೆ ಕುಮ್ಮಕ್ಕು ನೀಡಿದ್ದಾರೆ ಎಂದು ಆರೋಪಿಸಿದರು.
ರೈತರಿಂದ ಹೋರಾಟ ಮಾಡಿಸಿ ಕೇಂದ್ರ ಸರ್ಕಾರದ ವಿರುದ್ಧ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಆದರೆ ಪ್ರಜ್ಞಾವಂತ ರೈತರು ಈ ಕಾಯ್ದೆಯನ್ನು ಸ್ವಾಗತಿಸಿದ್ದಾರೆ. ಎಲ್ಲಾ ರೈತರ ವರ್ಗದವರು ಕಾಯ್ದೆ ಬಗ್ಗೆ ತಿಳಿದುಕೊಳ್ಳಬೇಕು ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















