ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬುಧವಾರ ಶಿವಮೊಗ್ಗದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನದ ಸಂದರ್ಭದಲ್ಲಿ ಹೃದಯಾಘಾತದಿಂದ ಮೃತಪಟ್ಟ ಭದ್ರಾವತಿ ಈಶ್ವರಮ್ಮ ಪ್ರೌಢಶಾಲೆ ಶಿಕ್ಷಕ ಕುಮಾರ್ ಅವರ ಪತ್ನಿಗೆ ಗುರುವಾರ ಜಿಲ್ಲಾ ಪ್ರೌಢಶಾಲೆ ಸಹಶಿಕ್ಷಕರು ಒಗ್ಗೂಡಿ 2.42 ಲಕ್ಷ ರೂ. ನಗದನ್ನು ಜಿಪಂ ಮುಖ್ಯಕಾರ್ಯನಿರ್ವಹಣಾಧಿಕಾರಿ ವೈಶಾಲಿ ಅವರ ಮುಖಾಂತರ ನೀಡಿದರು.
ಜಿಲ್ಲಾ ಕೇಂದ್ರ ಶಿವಮೊಗ್ಗದ ಏಳು ಕೇಂದ್ರಗಳಲ್ಲಿ ಮೌಲ್ಯಮಾಪನ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾ ಪ್ರೌಢಶಾಲೆ ಸಹಶಿಕ್ಷಕರುಗಳು ಸ್ವಯಂಪ್ರೇರಿತರಾಗಿ ತಮ್ಮೊಳಗೆ ಕೈಲಾದಷ್ಟು ಹಣವನ್ನು ಸಂಗ್ರಹಿಸಿ ಮೃತ ಶಿಕ್ಷಕನ ಕುಟುಂಬಕ್ಕೆ ಈ ಆರ್ಥಿಕ ನೆರವನ್ನು ನೀಡುವ ಮೂಲಕ ಸ್ಪಂದಿಸಿದ್ದಾರೆ.
ಈ ಸಂದರ್ಭದಲ್ಲಿ ಭದ್ರಾವತಿ ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ್, ಜಿಲ್ಲಾ ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸೇರಿದಂತೆ ಅನೇಕ ಸಹ ಶಿಕ್ಷಕರು ಹಾಜರಿದ್ದರು.
Get In Touch With Us info@kalpa.news Whatsapp: 9481252093
















