ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ ಶ್ರೀ ಸತ್ಯಸಂಧಗುರು ಉತ್ತರಾಧಿ ಮಠದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 1 ದಿನದಲ್ಲಿ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಶಿವಮೊಗ್ಗದ ಗಾಂಧೀನಗರದ ನಿವಾಸಿ ರಾಘವೇಂದ್ರ ಆಚಾರ್ಯ (25) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಆರೋಪಿಯನ್ನು ಬಂಧಿಸಿ, ಆತನಿಂದ 1 ಕೋಟಿ 1 ಲಕ್ಷದ 40 ಸಾವಿರ ರೂಪಾಯಿ ಮೌಲ್ಯದ, ಒಟ್ಟು 780 ಗ್ರಾಂ ತೂಕದ 16 ಚಿನ್ನದ ಹಲಗಾರತಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.
Also Read>> ಶಿವಮೊಗ್ಗ ಜಿಲ್ಲೆ ರಸ್ತೆ ಅಭಿವೃದ್ಧಿಗೆ ಕೇಂದ್ರದ ಭರ್ಜರಿ ಅನುದಾನ | ಯಾವ ತಾಲೂಕಿಗೆ ಎಷ್ಟು?
ತೀರ್ಥಹಳ್ಳಿ ಡಿವೈಎಸ್ಪಿ ಅರವಿಂದ್ ಕಲಗುಂಜಿ ಮಾರ್ಗದರ್ಶನದಲ್ಲಿ ಇನ್ಸ್’ಪೆಕ್ಟರ್ ಗಳಾದ ಇಮ್ರಾನ್ ಬೇಗ್, ರಾಜಶೇಖರ್, ಸಬ್ ಇನ್ಸ್’ಪೆಕ್ಟರ್ ಸುನೀಲ್ ಕುಮಾರ್, ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ್, ಸಂತೋಷ್, ವಿನಯ್ ಕುಮಾರ್ ರವರು ಆರೋಪಿಯನ್ನು ಬಂಧಿಸುವಲ್ಲಿ ಸಫಲರಾಗಿದ್ಧಾರೆ.
ಮಹಿಷಿ ಗ್ರಾಮದಲ್ಲಿರುವ ಸತ್ಯಸಂಧಗುರು ಉತ್ತರಾಧಿಮಠದಲ್ಲಿ ಕೋಟ್ಯಾಂತರ ರೂ. ಮೌಲ್ಯದ ಬಂಗಾರದ ಹಲಗಾರತಿಗಳು ಕಳವಾಗಿರುವ ಕುರಿತಂತೆ ಜೂನ್ 17ರಂದು ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಜಿಲ್ಲಾ ಪೊಲೀಸ್ ಅಧೀಕ್ಷಕರು ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರ ಮಾರ್ಗದರ್ಶನದಲ್ಲಿ, ತೀರ್ಥಹಳ್ಳಿ ಉಪವಿಭಾಗದ ಡಿವೈಎಸ್‌ಪಿ ಅರವಿಂದ ಕಲಗುಂಜಿ ಅವರ ಸೂಚನೆಯಂತೆ ವಿಶೇಷ ಪೊಲೀಸ್ ತಂಡವನ್ನು ರಚಿಸಲಾಗಿತ್ತು.
ತೀರ್ಥಹಳ್ಳಿ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್, ಮಾಳೂರು ವೃತ್ತ ನಿರೀಕ್ಷಕ ರಾಜಶೇಖರ, ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ, ಸಂತೋಷ್ ಮತ್ತು ವಿನಯ್ ಕುಮಾರ್ ಅವರನ್ನೊಳಗೊಂಡ ತಂಡ ವಿಶೇಷ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿತು.
ಪ್ರಕರಣದ ತನಿಖೆ ಮುಂದುವರಿದಿದ್ದು, ಪತ್ತೆ ಕಾರ್ಯದಲ್ಲಿ ತೊಡಗಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರು ಅಭಿನಂದಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















