ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಾದ್ಯಂತ ಕೋವಿಡ್19 ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದ್ದು, ಇಂದು 41 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ ಒಟ್ಟು 794ಕ್ಕೆ ಏರಿಕೆಯಾಗಿದೆ.
ರಾಜ್ಯ ರಾಜಧಾನಿ ಬೆಂಗಳೂರ ಸೇರಿದಂತೆ ಹಲವೆಡೆ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ದಾವಣಗೆರೆಯಲ್ಲಿ 651ನೇ ರೋಗಿಯ ಸಂಪರ್ಕಕ್ಕೆ ಬಂದ 45, 24, 26 ಮತ್ತು 24 ವರ್ಷದ ಮೂವರು ವ್ಯಕ್ತಿಗಳು ಮತ್ತು 20 ವರ್ಷದ ಯುವತಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.
ಬೆಂಗಳೂರು ನಗರದಲ್ಲಿ ಐವರಿಗೆ ಸೋಂಕು ತಗುಲಿದ್ದು, ದಾವಣಗೆರೆಯ 48 ವರ್ಷ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ.
Get in Touch With Us info@kalpa.news Whatsapp: 9481252093

















