ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೋನಾ ವೈರಸ್ ಶಂಕಿತರ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಇಲಾಖೆ ವತಿಯಿಂದ ಮೆಡಿಕಲ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಜಿಲ್ಲೆಯಲ್ಲಿ ಇಲ್ಲಿಯವರೆಗೂ ಒಟ್ಟಾರೆ 331 ಜನರ ಮೇಲೆ ನಿಗಾ ಇರಿಸಲಾಗಿದೆ. 216 ಜನರಿಗೆ ಮನೆಯಲ್ಲಿಯೇ ಪ್ರತ್ಯೇಕ ವಾಸವಿರುವಂತೆ ಸೂಚಿಸಲಾಗಿದೆ.
ಆಸ್ಪತ್ರೆಯಲ್ಲಿ ದಾಖಲಿಸಿ, 4 ಜನರ ಮೇಲೆ ನಿಗಾ ಇರಿಸಲಾಗಿದೆ. 111 ಜನರು 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 32 ಜನರ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ತಪಾಸಣೆಗೊಳಪಡಿಸಲಾಗಿದೆ. ಯಾವುದೇ ಪ್ರಕರಣಗಳಲ್ಲಿಯೂ ಪಾಸಿಟಿವ್ ವರದಿ ಬಂದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.
(ವರದಿ: ಬಿ. ರೇಣುಕೇಶ್)
Get in Touch With Us info@kalpa.news Whatsapp: 9481252093
Discussion about this post