ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಮಂಗಳೂರು: ಈ ಬಾರಿ ಮುಂಗಾರು ಆರಂಭ ಜೋರಾಗಿಯೇ ಇದ್ದು, ಮಹಾರಾಷ್ಟ್ರ, ಗುಜರಾತ್ ರಾಜ್ಯಗಳಿಗೆ ನಿಸರ್ಗ ಚಂಡಮಾರುತ ಅಪ್ಪಳಿಸುವ ಸಾಧ್ಯತೆಯಿದ್ದು ಇದರ ಭೀತಿ ಕರ್ನಾಟಕದ ಕರಾವಳಿ ಭಾಗಕ್ಕೂ ಸಹ ಆರಂಭವಾಗಿದೆ.
ವಾಯುಭಾರ ಕುಸಿತದಿಂದಾಗಿ ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ದ ಪರಿಸ್ಥಿತಿ ನಿರ್ಮಾಣವಾಗಿದ್ದು, ಭಾರೀ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸುತ್ತಿವೆ. ಈ ಹಿನ್ನೆಲೆಯಲ್ಲಿ ಮುಂದಿನ ಎರಡು ದಿನಗಳ ಒಳಗಾಗಿ ಕರ್ನಾಟಕ ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇನ್ನು, ಈಗಾಗಲೇ ಉತ್ತರ ಕನ್ನಡ, ಭಟ್ಕಳ, ಹೊನ್ನಾವರ, ಕುಮಟಾ, ಕಾರವಾರದಲ್ಲಿ ಭಾರೀ ಮಳೆ ಆರಂಭವಾಗಿದೆ. ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ಭಾಗಗಳಲ್ಲಿ ನದಿಗಳ ಹರಿವು ಹೆಚ್ಚಳವಾಗಿದ್ದು, ನೇತ್ರಾವತಿ, ಕುಮಾರಧಾರ ನದಿಗಳಲ್ಲಿ ನೀರಿನ ಪ್ರಮಾಣದಲ್ಲಿ ಅಲ್ಪಪ್ರಮಾಣದಲ್ಲಿ ಹೆಚ್ಚಳವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಎಲ್ಲ ರೀತಿಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ.
Get In Touch With Us info@kalpa.news Whatsapp: 9481252093















