ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಾದ್ಯಂತ ಕೊರೋನಾ ವೈರಸ್ ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ತುರ್ತು ನಿರ್ಧಾರ ಕೈಗೊಂಡಿರುವ ರಾಜ್ಯ ಸರ್ಕಾರ ನಾಳೆ ಸಹ ಯಾವುದೇ ಸಾರ್ವಜನಿಕ ಸಾರಿಗೆ ರಸ್ತೆಗಿಳಿಯದಂತೆ ಸೂಚಿಸಿದ್ದು, 9 ಜಿಲ್ಲೆಗಳನ್ನು ಸಂಪೂರ್ಣ ಬಂದ್ ಮಾಡಲು ಸೂಚಿಸಿದೆ.
ಈ ಕುರಿತಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಹಿತಿ ನೀಡಿದ್ದು, ನಾಳೆ ಸಹ ಸಾರ್ವಜನಿಕ ಸಾರಿಗೆ ಸೇವೆಯನ್ನು ರದ್ದುಗೊಳಿಸಲಾಗಿದೆ. ಮಾರ್ಚ್ 31ರವರೆಗೂ ಎಲ್ಲ ಎಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ.
ನಾಳೆಯಿಂದ ಮಾರ್ಚ್ 31ರವರೆಗೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮಂಗಳೂರು, ಮೈಸೂರು, ಕಲಬುರಗಿ, ಧಾರವಾಡ, ಚಿಕ್ಕಬಳ್ಳಾಪುರ, ಕೊಡಗು ಹಾಗೂ ಬೆಳಗಾವಿ ಸೇರಿದಂತೆ 9 ಜಿಲ್ಲೆಗಳಲ್ಲಿ ವೈದ್ಯಕೀಯ ಔಷಧಿ, ದಿನಸಿ, ಕೃಷಿ ಮೊದಲಾದ ಅಗತ್ಯ ಸೇವೆ ಹೊರತುಪಡಿಸಿ ಉಳಿದ ಎಲ್ಲಾ ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ ಎಂದಿದ್ದಾರೆ.
Get in Touch With Us info@kalpa.news Whatsapp: 9481252093

















