ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಪ್ರತಿ ಭಾನುವಾರ ಘೋಷಿಸಲಾಗಿದ್ದ ಸಂಪೂರ್ಣ ಲಾಕ್ ಡೌನ್ ಅನ್ನು ಮೇ 31ರ ನಾಳೆಯ ಮಟ್ಟಿಗೆ ಹಿಂಪಡೆದಿರುವ ರಾಜ್ಯ ಸರ್ಕಾರ ಕೊಂಚ ರಿಲಾಕ್ಸ್ ನೀಡಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿ ಅಧ್ಯಕ್ಷ ಟಿ.ಎಂ.ವಿಜಯ್ ಭಾಸ್ಕರ್, ಮೇ 18 ರಂದು ನಾಲ್ಕನೇ ಹಂತದ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾನುವಾರ ಸಂಪೂರ್ಣ ಲಾಕ್ ಡೌನ್ ಘೋಷಿಸಿದ್ದರು. ಅದರಂತೆ ಕಳೆದ ಭಾನುವಾರ ಅಗತ್ಯ ವಸ್ತುಗಳು ಹೊರತುಪಡಿಸಿ ಉಳಿದ ಎಲ್ಲಾ ಚಟುವಟಿಕೆಗಳು ರದ್ದಾಗಿತ್ತು. ಸಾರ್ವಜನಿಕರ ಕೋರಿಕೆ ಮೇರೆಗೆ ಭಾನುವಾರದ ಸಂಪೂರ್ಣ ಲಾಕ್ ಡೌನ್ ಆದೇಶ ಮಾರ್ಪಡಿಸಲಾಗಿದೆ. ಆದರೆ ರಾತ್ರಿ 7 ಗಂಟೆಯಿಂದ ಬೆಳಿಗ್ಗೆ 7 ಗಂಟೆವರೆಗೆ ಯಥಾ ಪ್ರಕಾರ ಕರ್ಫ್ಯೂ ಜಾರಿಯಲ್ಲಿರುತ್ತದೆ ಎಂದಿದ್ದಾರೆ.
ಈ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಇಲ್ಲ
ಸಾರ್ವಜನಿಕರ ಬೇಡಿಕೆ ಹಿನ್ನೆಲೆಯಲ್ಲಿ, ರಾಜ್ಯದ ಜನತೆಯ ಹಿತದೃಷ್ಟಿಯಿಂದ ನಾಳೆ ದಿನಾಂಕ 31.05.2020 ಭಾನುವಾರದಂದು ಕಂಪ್ಲೀಟ್ ಲಾಕ್ ಡೌನ್ ಇರುವುದಿಲ್ಲ ಎಂದು ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ತಿಳಿಸಿದ್ದಾರೆ.1/2
— Karnataka Varthe (@KarnatakaVarthe) May 30, 2020
ರಾಜ್ಯದಲ್ಲಿ ನಾಳೆ ಸಂಪೂರ್ಣ ಲಾಕ್ ಡೌನ್ ಇರುವುದಿಲ್ಲ. ಬದಲಾಗಿ ಈಗಾಗಲೇ ಜಾರಿಯಲ್ಲಿರುವಂತೆ ರಾತ್ರಿ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗಿನ ಕರ್ಫ್ಯೂ ಮಾತ್ರ ಇರಲಿದೆ.
ಇನ್ನು, ದೇಶದಲ್ಲಿ ನಾಳೆಗೆ ನಾಲ್ಕನೆಯ ಹಂತದ ಲಾಕ್ ಡೌನ್ ಮುಕ್ತಾಯವಾಗಲಿದ್ದು, ಈ ಕುರಿತಂತೆ ಕೇಂದ್ರ ಸರ್ಕಾರ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬ ಕುತೂಹಲ ಮೂಡಿದೆ. ಅಲ್ಲದೇ, ಇಂದು ಹೊಸ ಮಾರ್ಗಸೂಚಿಯನ್ನೂ ಸಹ ಬಿಡುಗಡೆ ಮಾಡಲಿದೆ ಎಂದು ಹೇಳಲಾಗಿದ್ದು, ಇದರ ಆಧಾರದಲ್ಲಿ ರಾಜ್ಯ ಸರ್ಕಾರ ಹೊಸ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.
Get in Touch With Us info@kalpa.news Whatsapp: 9481252093
Discussion about this post