ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪದ್ಮಶ್ರೀ ಪ್ರಶಸ್ತಿ ವಿಜೇತೆ ಸಾಲು ಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ರಾಜ್ಯದಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿಲ್ಲ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಸಾಲುಮರದ ತಿಮ್ಮಕ್ಕ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಸರ್ಕಾರಿ ಆದೇಶದಂತಿರುವ ಪತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ತೀವ್ರ ಗೊಂದಲ ಸೃಷ್ಠಿಸಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಮುಖ್ಯಮಂತ್ರಿಗಳೇ ಇದಕ್ಕೆ ಸ್ಪಷ್ಟನೆ ನೀಡಿದ್ದಾರೆ.

ಸದರಿ ನಕಲಿ ಅಧಿಸೂಚನೆಯಲ್ಲಿ ರಾಜ್ಯದಾದ್ಯಂತ ಸರ್ಕಾರಿ ಕಚೇರಿಗಳಿಗೆ ಹಾಗೂ ಶಾಲಾ-ಕಾಲೇಜುಗಳಿಗೆ ಸಾರ್ವಜನಿಕ ರಜೆ ಎಂದು ಘೋಷಿಸಿರುವುದು ಕೂಡ ನಕಲಿ ಆಗಿರುತ್ತದೆ ನೈಜತೆಯಿಂದ ಕೂಡಿರುವುದಿಲ್ಲವೆಂದು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯು ಸ್ಪಷ್ಟ ಪಡಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post