ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕೊರೋನಾ ವೈರಸ್ ಹರಡುವ ಭೀತಿಯಿರುವ ಹಿನ್ನೆಲೆಯಲ್ಲಿ ಈ ಬಾರಿ ಮುಂಜಾಗ್ರತಾ ಕ್ರಮವಾಗಿ ಹಿಂದೂ ಮಹಾಸಭಾ ಗಣಪತಿಯ ರಾಜಬೀದಿ ಉತ್ಸವವನ್ನು ರದ್ದು ಮಾಡಲಾಗಿದೆ.
ಈ ಕುರಿತಂತೆ ಮಾತನಾಡಿರುವ ನಗರಸಭೆ ಹಿರಿಯ ಸದಸ್ಯ ವಿ. ಕದಿರೇಶ್, ಹಿಂದೂ ಮಹಾಸಭಾ, ಹಿಂದೂ ರಾಷ್ಟ್ರಸೇನಾ, ಶ್ರೀ ವಿನಾಯಕ ಸೇವಾ ಸಮಿತಿಯ ಸರ್ವ ಸದಸ್ಯರ ಸಭೆ ನಡೆಸಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದಿದ್ದಾರೆ.
ಕೊರೋನಾ ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ನಿಯಮಗಳನ್ನು ಪಾಲಿಸಿ, ಈ ಬಾರಿ ವಿನಾಯಕನ ಮೂರ್ತಿಯನ್ನು ಯಾವುದೇ ರೀತಿಯ ಆಡಂಬರವಿಲ್ಲದೇ ಪ್ರತಿಷ್ಠಾಪಿಸಿ, 9 ದಿನ ಪೂಜಿಸಲಾಗುವುದು. ತಾಲೂಕು ಆಡಳಿತ, ನಗರಸಭೆ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿ, ಸರಳವಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಗುವುದು. ನಾಗರಿಕರು ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
Get In Touch With Us info@kalpa.news Whatsapp: 9481252093
Discussion about this post