ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೆಸ್ಕಾಂ (MESCOM) ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ (Shivamogga) ನಗರದ ವಿವಿಧ ಪ್ರದೇಶಗಳಲ್ಲಿ ಆಗಸ್ಟ್ 9ರಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ (Power Cut) ಉಂಟಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಆಲ್ಕೊಳ ವ್ಯಾಪ್ತಿಯಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ವ್ಯತ್ಯಯ
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಎ.ಎಫ್-1, 2 ಮತ್ತು 4ರಲ್ಲಿ ಮೆಸ್ಕಾಂ ತುರ್ತು ಕಾಮಗಾರಿ ಕೈಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 9ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ವಿದ್ಯುತ್ ಪೂರೈಕೆ ಸ್ಥಗಿತಗೊಳ್ಳಲಿದೆ.
Also Read>> ಅಧಿಕಾರದ ದಾಹಕ್ಕಾಗಿ ಕಾಂಗ್ರೆಸ್ ಹೀನಾಯ ಸ್ಥಿತಿಗೆ ಬಂದಿದೆ: ಮಾಜಿ ಡಿಸಿಎಂ ಈಶ್ವರಪ್ಪ ಟೀಕೆ
ಈ ಅವಧಿಯಲ್ಲಿ ಮಲ್ಲಿಗೇನಹಳ್ಳಿ, ತ್ಯಾವರೆಕೊಪ್ಪ, ಮುದ್ದಿನಕೊಪ್ಪ, ಸಿದ್ಲಿಪುರ, ಆಲ್ದೇವರ ಹೊಸೂರು, ವಿರುಪಿನಕೊಪ್ಪ, ಗಿರಿದೀಪಂ ಶಾಲೆ, ಲಯನ್ ಸಫಾರಿ, ಭೋವಿ ಕಾಲೋನಿ, ಸಾಗರ ಮುಖ್ಯರಸ್ತೆ, ಗಾಡಿಕೊಪ್ಪ, ಆಲ್ಕೊಳ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಶಿವಮೊಗ್ಗ ನಗರ ಉಪವಿಭಾಗ-2ರ ವ್ಯಾಪ್ತಿಯಲ್ಲೂ
ಇದೇ ವೇಳೆ, ಶಿವಮೊಗ್ಗ ನಗರ ಉಪವಿಭಾಗ-2ರ ಘಟಕ-5ರ ವ್ಯಾಪ್ತಿಯಲ್ಲಿ ಮೆಸ್ಕಾಂ ತುರ್ತು ಕಾಮಗಾರಿ ಕೈಗೊಳ್ಳಲಿದೆ. ಇದರ ಪರಿಣಾಮವಾಗಿ ಆಗಸ್ಟ್ 9ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 3ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಈ ವ್ಯಾಪ್ತಿಯಲ್ಲಿ ಪಂಚವಟಿ ಕಾಲೋನಿ, ಬಿ.ಹೆಚ್. ರಸ್ತೆ, ಅಶೋಕ ವೃತ್ತದಿಂದ ಅಮೀರ್ ಅಹಮದ್ ವೃತ್ತದವರೆಗೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಒಳಗೊಂಡಿವೆ.
ತುರ್ತು ಕಾಮಗಾರಿಯ ಹಿನ್ನೆಲೆಯಲ್ಲಿ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ಹಾಗೂ ಗ್ರಾಹಕರು ಮೆಸ್ಕಾಂ ಇಲಾಖೆಯೊಂದಿಗೆ ಸಹಕರಿಸುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 









