Sunday, January 29, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಪ್ರಕಾಶ್ ಅಮ್ಮಣ್ಣಾಯ

ಈ ಐದು ಯಜ್ಞ ನಡೆಸಿದ ಗೃಹಸ್ಥ ಮೋಕ್ಷ ಪ್ರಾಪ್ತಿಗೆ ಅರ್ಹ: ಯಾವುದು ಆ ಯಜ್ಞ?

ಗಾವೋ ವಿಶ್ವಸ್ಯ ಮಾತರಃ

October 27, 2019
in ಪ್ರಕಾಶ್ ಅಮ್ಮಣ್ಣಾಯ
0 0
0
Share on facebookShare on TwitterWhatsapp
Read - 3 minutes

ಕ್ರಿಮಿ ಕೀಟಾದಿ ಜನ್ಮದಿಂದ ಗೋವಿನವರೆಗೆ ಒಂದು ಹಂತ. ಇದೊಂದು formation. ನಂತರ ಬರುವುದೇ ಮಾನವ ಜನ್ಮ. ಇಲ್ಲಿ ಸತ್ಕರ್ಮಾದಿಗಳನ್ನು ಮಾಡುವುದೇ ಭಗವಂತನ ಪ್ರೀತ್ಯರ್ಥವಾಗಿ ಮಾಡುವ ಯಜ್ಞವಾಗುತ್ತದೆ. ಇಲ್ಲೇ ಬ್ರಾಹ್ಮಣತ್ವ ಲಭಿಸುತ್ತದೆ. ಇಂತಹ ಬ್ರಾಹ್ಮಣತ್ವ ಲಭಿಸುವುದೇ ಮೋಕ್ಷ ಮಾರ್ಗವೂ ಆಗುತ್ತದೆ. ಗೋವಿನ ತತ್ವಾದರ್ಶ ತಿಳಿದ ಮಾನವರಾರೂ ಗೋ ಹತ್ಯೆಯಾಗಲೀ, ಗೋಮಾಂಸ ಭಕ್ಷಣೆಯಾಗಲೀ ಮಾಡಲಾರರು. ಈಗ ಇಂತಹ ಮಾನವರು ಬಹಳ ಕಡಿಮೆ ಆಗುತ್ತಿದ್ದಾರೆ. ಅಂದರೆ ಬ್ರಾಹ್ಮಣತ್ವವು ನಶಿಸಿ ಹೋಗುತ್ತದೆ.

ಗೋ ಬ್ರಾಹ್ಮಣೇಭ್ಯೋ ನಮಃ ಎಂದರೆ ಈಗಿನ ಪ್ರಗತಿಪರ ಗಂಜಿಗಳು ಬ್ರಾಹ್ಮಣರನ್ನೇ ಮೇಲೆ ಇಡುತ್ತಾರೆ ಎಂದು ಮೊರೆಯುತ್ತಾರೆ. ಈ ಮತ್ಸರದಿಂದಲೇ ರಾಮ ಗೋಭಕ್ಷಕ, ಕೃಷ್ಣನೂ ಗೋ ಭಕ್ಷಕ ಎನ್ನುತ್ತಾ ಟೌನ್ ಹಾಲಿನ ಮುಂದೆ ಯಾವ ಗೋವಿನ ಹಾಲುಂಡು ಬೆಳೆದಿದ್ದಾರೋ ಅದೇ ಗೋವನ್ನು ವಧಿಸಿ ಗೋಮಾಂಸ ಭಕ್ಷಿಸುತ್ತಾರೆ. ಇವರು ಮಾತೃದ್ರೋಹಿಗಳೆಂದೇ ಹೇಳಬೇಕು. ಇವರು ರೋಗ ರುಜಿನಗಳು ಬಂದು ಕೊನೆಗೆ ನರಳಿ ನರಳಿ ಸಾಯುತ್ತಾರೆಯೇ ವಿನಾ ಅನಾಯಾಸದ ಮರಣ ಬರುವುದು ಸಾಧ್ಯವೂ ಇಲ್ಲ.

ಗೋ ಮಾಂಸವು ನಮ್ಮ ಆಹಾರ ಎಂದು ಮಾಧ್ಯಮಗಳಲ್ಲಿ ಮೊರೆಯುವವರನ್ನು ಕಂಡರೆ ನಗು ಬರುತ್ತದೆ, ಇನ್ನೊಂದೆಡೆ ಕ್ರೋಧವೂ ಹುಟ್ಟುತ್ತದೆ. ರಣ ಹದ್ದುಗಳ ಆಹಾರವು ನಮ್ಮ ಆಹಾರ ಎನ್ನುವ ಈ ದರಿದ್ರರು, ಯಾವ ಸತ್ಕರ್ಮ ಮಾಡಿಯಾರು. ಉತ್ತು ಬಿತ್ತಿ ಆಹಾರ ಧಾನ್ಯ ಉತ್ಪತ್ತಿ ಮಾಡಲು ಯಾರಿಗೆ ಸೋಮಾರಿತನ ಇರುವುದೋ ಅಂತವರೇ ಮಾಂಸವು ನಮ್ಮ ಆಹಾರ ಎನ್ನುತ್ತಾರೆ. ಇವರು ಪ್ರಕೃತಿಗೆ ಮಾರಕವೇ ಹೊರತು, ಪೂರಕವಾಗಿರಲ್ಲ. ಕೇವಲ ಮುಸಲ್ಮಾನ, ಕ್ರಿಶ್ಚನ್‌ರು ಗೋಭಕ್ಷಕರಲ್ಲ. ಹಿಂದುಗಳಲ್ಲೂ ಅನೇಕ ಜನ ಈ ವಿದೇಶಿ ಮತಗಳ ಜನರನ್ನು ಅನುಕರಣೆ ಮಾಡುತ್ತಾರೆ. ಇಸ್ಲಾಂ ನಮ್ಮ ಭಾರತದ ಧರ್ಮವಲ್ಲ. ಕ್ರಿಶ್ಚನ್ ಕೂಡಾ ಈ ನೆಲದ ಧರ್ಮವಲ್ಲ.ಇವರು ನುಸುಳಿ ಭಾರತಕ್ಕೆ ಬಂದ ಉಗ್ರರು. ಇಲ್ಲಿ ಅವರನ್ನು ಬೆಂಬಲಿಸಿ ಬದುಕುವವರು, ಮತಾಂತರ ಆದವರೆಲ್ಲ ಮೂಲತಃ ಭಾರತೀಯ ಸಂಪ್ರದಾಯಸ್ತರೆ. ಆದರೆ ಆಮಿಷ, ಸ್ವೇಚ್ಛಾಚಾರ ಬಯಸಿ ಆಕಡೆ ಹೋದರು.

ದೀಪಾವಳಿಯ ಪಾಡ್ಯಮಿಯಂದು ಗೋ ಪೂಜನೆಯು ಇಡೀ ವರ್ಷದ ಒಂದು ಪರ್ವದಿನ ಮತ್ತು ಗೋವಿನಲ್ಲಿ ದೈವತ್ವವನ್ನು ತಿಳಿದು ಪೂಜಿಸುವ ದಿನವಾಗಿದೆ.
ನಾವು ಆಚರಿಸುವ ಯಾವುದೇ ಯಜ್ಞ, ಯಾಗ ಪೂಜೆ, ಪಿತೃಕರ್ಮಗಳು ಗೋಗ್ರಾಸವನ್ನಿಡದೇ ಪೂರ್ಣವಾಗಲಾರವು.

ಯಜ್ಞ, ಶ್ರಾದ್ಧಾದಿಗಳಲ್ಲಿ ವಿಪ್ರಭೋಜನದಂತೆಯೇ ಗೋಗ್ರಾಸ ದಾನವೂ ಅನಿವಾರ್ಯ ಕರ್ತವ್ಯವಾಗಿದೆ. ಗೋಗ್ರಾಸ ದಾನದ ಶಾಸ್ತ್ರವಿಧಿ ಬಹಳ ಸಣ್ಣದು. ಬಾಳೆ ಎಲೆಯಲ್ಲಿ ಗೋವು ತಿನ್ನಬಹುದಾದ ಅನ್ನ ಪಾಯಸ ಭಕ್ಷ್ಯಗಳನ್ನು (ಹಾಲು ಮೊಸರು ತುಪ್ಪ ಮೊದಲಾದ ಗವ್ಯ ಹೊರತಪಡಿಸಿ) ಬಡಿಸಿ ಎಲೆಯನ್ನು ಪೂರ್ವಾಗ್ರವಾಗಿ ಇಡಬೇಕು.

ಆ ಅನ್ನಕ್ಕೆ ತೀರ್ಥ ನಿರ್ಮಾಲ್ಯ ಹಾಕಿ ಸೊಬಗಿನ ಅರ್ಥವುಳ್ಳ ಈ ಶ್ಲೋಕಗಳನ್ನು ಹೇಳಬೇಕು.

ಸುರಭಿರ್ವೈಷ್ಣವೀ ಮಾತಾ ನಿತ್ಯಂ ವಿಷ್ಣಪದೇ ಸ್ಥಿತಾ
ಗೋಗ್ರಾಸಸ್ತು ಮಯಾ ದತ್ತಃ ಸುರಭೇ (ಸುರಭಿ) ಪ್ರತಿಗೃಹ್ಯತಾಮ್ ॥1॥
ಸೌರಭೇಯಃ ಸರ್ವಹಿತಾಃ ಪವಿತ್ರಾಃ ಪುಣ್ಯರಾಶಾಯಃ
ಪ್ರತಿಗ್ರಹ್ಣತ್ವಿಮಂ ಗ್ರಾಸಂ ಗಾವಃ ತ್ರೈಲೋಕ್ಯ ಮಾತರಃ
ಗಾವೋ ಮೇ ಮಾತರಃ ಸರ್ವಾಃ ಪಿತರಶ್ಚಾಪಿ ಗೋವೃಷಾಃ

ಗ್ರಾಸಮುಷ್ಟಿ ಪ್ರದಾನೇನ ಸ ಮೇ ವಿಷ್ಣುಃ ಪ್ರಸೀದತು ॥
ಗವಾಂತರ್ಗತ ಗೋಪಾಲಕೃಷ್ಣ ಪ್ರಿಯತಾಂ ಪ್ರೀತೋ ಭವತು ತತ್ಸತ್ ಶ್ರೀಹರಿ ಕೃಷ್ಣಾರ್ಪಣಮಸ್ತು.
ದೇವಲೋಕದ ಕಾಮಧೇನು ಸುರಭಿ. ಕಾಮಧೇನುವಿನ ಜಾತಿಯೆನಿಸಿದ ಗೋಜಾತಿಯಲ್ಲಿ ಬಂದ ಎಲ್ಲಾ ಗೋವುಗಳನ್ನೂ ಕಾಮಧೇನುವಿನ ಸನ್ನಿಧಾನದ ಅನುಸಂಧಾನದೊಡನೆ ಸುರಭಿ’ ಎಂದೇ ಕರೆಯಲಾಗುತ್ತದೆ. ಸುರಭಿಯು ವಿಷ್ಣುದೇವನ ಪ್ರತೀಕ. ಆಕೆ ಎಲ್ಲರಿಗೂ ಹಾಲು ನೀಡುವ ತಾಯಿ. ಎಂದೆಂದಿಗೂ ವಿಷ್ಣುಪದದಲ್ಲಿ ನೆಲೆಗೊಂಡ ಈ ಸುರಭಿ ನಾನಿತ್ತ ಗೋಗ್ರಾಸವನ್ನು ಸ್ವೀಕರಿಸಲಿ.

ಮೂರು ಲೋಕಕ್ಕೂ ಮಾತೆಯಾಗಿ ಸರ್ವ ಪುಣ್ಯ ರಾಶಿಯನ್ನು ಹೊಂದಿದ ಪವಿತ್ರವಾದ ಸುರಭಿಯ ಮಕ್ಕಳಾದ ಗೋವುಗಳು ನಾನಿತ್ತ ಗೋಗ್ರಾಸವನ್ನು ಸ್ವೀಕರಿಸಲಿ.

ಹಸುಗಳೆಲ್ಲಾ ನಮ್ಮ ತಾಯಿ. ಎತ್ತುಗಳೆಲ್ಲಾ ನಮ್ಮ ತಂದೆಗೆ ಸಮ. ಅಂತಹ ಗೋವುಗಳಿಗಿತ್ತ ಈ ಮುಷ್ಟಿ ತುತ್ತಿನಿಂದ ಗೋವಿನ ಒಳಗಿರುವ ಶ್ರೀಕೃಷ್ಣ ಪ್ರೀತನಾಗಲಿ.

ಈ ಎರಡು ಶ್ಲೋಕಗಳಿಂದ ಪ್ರಾರ್ಥಿಸಿ ಗವಾಂತರ್ಗತ ಗೋಪಾಲಕೃಷ್ಣಃ ಪ್ರೀಯತಾಮ್’ ಎಂದು ಗೋಗ್ರಾಸವನ್ನು ಗೋವಿಗೆ ನೀಡಬೇಕು.

ಬ್ರಹ್ಮಯಜ್ಞ, ದೇವಯಜ್ಞ, ಪಿತೃಯಜ್ಞಗಳೆಂಬ ಮೂರು ಯಜ್ಞಗಳನ್ನು ಗಮನಿಸಿದ್ದೇವೆ. ಇವಲ್ಲದೇ ಮನುಷ್ಯಯಜ್ಞ ಹಾಗೂ ಭೂತ ಯಜ್ಞಗಳೆಂಬ ಎರಡು ಯಜ್ಞಗಳೂ ಇವೆ. ಗೃಹಸ್ಥನಿಗೆ ಈ ಐದು ಯಜ್ಞಗಳು ಕರ್ತವ್ಯ.

ಮನೆಗೆ ಹಸಿದು ಬಂದ ವ್ಯಕ್ತಿಗೆ ಆತಿಥ್ಯವಿತ್ತು ಉಣಬಡಿಸುವಿಕೆಯೇ ಮನುಷ್ಯಯಜ್ಞ, ಈ ಯಜ್ಞದಲ್ಲಿ ಹಸಿದ ವ್ಯಕ್ತಿಯೇ ಅಗ್ನಿ. ಅನ್ನ ಭೋಜ್ಯಗಳೇ ಆಹುತಿ. ಅನ್ನಸ್ಯ ಕ್ಷುಧಿತಂ ಪಾತ್ರಂ’ ಎಂಬಂತೆ ಅನ್ನದಾನಕ್ಕೆ ಬಂದ ಅತಿಥಿಗಳೆಲ್ಲಾ ಪಾತ್ರರು.

ಬರಿಯ ಅನ್ನದಾನವಲ್ಲದೇ ನಾಲ್ಕು ಜನರಿಗೆ ಉಪಕರಿಸುವ ಎಲ್ಲಾ ಸಮಾಜೋಪಯೋಗಿ ಸೇವೆಗಳೂ ಮನುಷ್ಯಯಜ್ಞದ ಪರಿಧಿಯಲ್ಲೇ ಸೇರಿವೆ. ನಾಲ್ಕನೆಯದಾದ ಈ ಮನುಷ್ಯಯಜ್ಞದಿಂದ ಸಮಾಜದ ಋಣ ಪರಿಹಾರವಾಗುತ್ತದೆ. ಕೊನೆಯದು ಭೂತಯಜ್ಞ. ಅಂದರೆ ಪಶುಪ್ರಾಣಿಗಳಿಗೆ ಆಹಾರ ನೀಡುವಿಕೆ.

ಮನುಷ್ಯ ತನ್ನ ಬದುಕಿನಲ್ಲಿ ಗೋವೃಷಭಾದಿ ಪಶುಗಳ ಉಪಕಾರ ಮರೆಯುವಂತಿಲ್ಲ. ಮನುಷ್ಯ ಗವ್ಯಗಳಾದ ಹಾಲು, ಮೊಸರು, ತುಪ್ಪಗಳಿಲ್ಲದೇ ಬದುಕಲಾರ. ದೇವಕರ್ಮಗಳನ್ನು ನಿರ್ವಹಿಸಲಾರ. ಹುಟ್ಟಿದ ಮೊದಲಲ್ಲಿ ತಾಯಿ ಆತನಿಗೆ ಹಾಲು ಕೊಟ್ಟು ಬೆಳೆಸಿದರೆ ಮುಂದಿನ ಆತನ ಜೀವನ ಪೂರ್ತಿ ಈ ಗೋಮಾತೆ ಹಾಲು ಕೊಡುತ್ತಾಳೆ. ಆದ್ದರಿಂದಲೇ ಗೋವಿಗೆ ಮಾತೃಸ್ಥಾನ, ವೃಷಭಕ್ಕೆ ಪಿತೃಸ್ಥಾನವಿದೆ. ತಂದೆಯು ಅನ್ನವಿತ್ತು ಪರಿಪೋಷಿಸುತ್ತಾನೆ. ಎತ್ತು ತಾನು ಉತ್ತು ಧಾನ್ಯ ಬೆಳೆಸುತ್ತದೆ. ತನ್ನ ಗೊಬ್ಬರದಿಂದ ಧಾನ್ಯ ಬೆಳೆಗೆ ನೆರವಾಗುತ್ತದೆ. ಗಾಡಿ ಹೊತ್ತು ಧಾನ್ಯವನ್ನು ಮನೆಗೆ ಹೊರುತ್ತದೆ. ಆದ್ದರಿಂದಲೇ ಗಾವೋ ಮೇ ಮಾತರಃ ಸರ್ವಾಃ ಪಿತರಶ್ಚಾಪಿ ಗೋವೃಷಾಃ

ಇಂತಹ ಗೋವುಗಳಿಗೆ ಸಾಧ್ಯವಾದಷ್ಟು ಪ್ರತ್ಯುಪಕರಿಸಬೇಕು. ಈ ಮೂಲಕ ಭೂತಋಣದಿಂದ ಮುಕ್ತನಾಗಬೇಕು. ಉಳ್ಳವನು ಗೋಮಾಳವನ್ನು ರಕ್ಷಿಸುತ್ತಾನೆ. ಗೋಶಾಲೆಯನ್ನು ನಿರ್ವಹಿಸಬಲ್ಲ. ಕೊನೇ ಪಕ್ಷ ಪ್ರತಿದಿನ ಉಣ್ಣುವುದಕ್ಕೆ ಮುಂಚೆ ಒಂದು ಮುಷ್ಟಿ ಅನ್ನವನ್ನಾದರೂ ಗೋವಿಗಾಗಿ ತೆಗೆದಿಡಬೇಕು. ಇಂದು ಗೋಗ್ರಾಸ ಎಂಬ ಹೆಸರಿನಲ್ಲಿ ಭೂತಯಜ್ಞ ಉಳಿದುಕೊಂಡಿದೆ.

ಅಲ್ಲದೇ ಗೋಗ್ರಾಸದಾನವು ನಿತ್ಯಕರ್ಮ. ಅದನ್ನು ಮಾಡದಿರುವುದು ಅಪರಾಧ. ಯಾವುದನ್ನು ಮಾಡದಿದ್ದರೆ ಪಾಪ ಬರುವುದೋ ಅದು ನಿತ್ಯಕರ್ಮ.
“ಯದಕರಣೇ ಪ್ರತ್ಯವಾಯಸ್ತನ್ನಿತ್ಯಮ್” ಗವ್ಯ ಪದಾರ್ಥಗಳನ್ನೆಲ್ಲಾ ಯಥೇಷ್ಟವಾಗಿ ಉಪಯೋಗಿಸಿಕೊಳ್ಳುವ ವ್ಯಕ್ತಿ ಅವನ್ನು ಕೊಟ್ಟ ಗೋವಿಗೆ ಪ್ರಕೃತಿದತ್ತವಾದ ಹಿಡಿಹುಲ್ಲಿನ ಜೊತೆ ತಾನು ಉಣ್ಣುವ ಅನ್ನದಲ್ಲಿ ಒಂದು ಮುಷ್ಟಿಯನ್ನಾದರೂ ತೆಗೆದಿಡದಿದ್ದರೆ ಆತ ಕೃತಘ್ನನಾಗಲಾರನೇ?

ಅಲ್ಲದೇ ಗೋವು ಸಕಲದೇವತೆಗಳಿಗೆ ಅಧಿಷ್ಠಾನ. ಗವಾಮಂಗೇಷು ತಿಷ್ಠಂತಿ ಭುವನಾನಿ ಚತುರ್ದಶ.’ ಹದಿನಾಲ್ಕು ಲೋಕಗಳು ಗೋವಿನ ಅಂಗಾಂಗಗಳಲ್ಲಿ ಅಧಿಷ್ಠಿತ ಎಂಬ ಮಾತಿದೆ. ಗೋಗ್ರಾಸದಿಂದಲೇ ಗೋಪಾಲಕೃಷ್ಣ ಪ್ರಸನ್ನನಾಗುತ್ತಾನೆ.

ಪಟ್ಟಣದಲ್ಲಿ ವ್ಯವಹಾರ ಉದ್ಯೋಗದ ಒತ್ತಡದಲ್ಲಿ ಇರುವ ಜನತೆಗೆ ಇಂದು ಗೋಗ್ರಾಸ ನೀಡುವುದು ಕ್ಲೇಶವೆನಿಸಿದೆ. ಆದರೂ ಆತ ಒಂದು ವಿಷಯವನ್ನು ಗಮನಿಸಬೇಕು. ತಾನು ಹಸುವನ್ನು ಸಾಕದಿದ್ದರೂ ಹಾಲು ಕುಡಿಯುವುದನ್ನು ಬಿಡಲಿಲ್ಲ. ಆದ್ದರಿಂದ ಹಸುವನ್ನು ಸಾಕುವ ಜವಾಬ್ದಾರಿ ಅವನಿಗಿದೆ. ಅದಕ್ಕಾಗಿ ಗೋಗ್ರಾಸದ ಹೆಸರಿನಲ್ಲಿ ಸ್ವಲ್ಪವಾದರೂ ಧನವನ್ನು ತೆಗೆದಿಡುವ ಕೆಲಸವನ್ನು ಆತ ಮಾಡಬಹುದು. ಆ ಹಣವನ್ನು ದೊಡ್ಡ ಮೊತ್ತವಾದಾಗ ಅಲ್ಲಲ್ಲಿ ನಡೆಯುತ್ತಿರುವ ಗೋಶಾಲೆಗಳಿಗೆ ನೀಡಿ ಭೂತ ಯಜ್ಞದ ಫಲ ಪಡೆಯಬಹುದು. ಧರ್ಮದ ನಡೆ ಆಧುನಿಕತೆಯಲ್ಲಿ ಕ್ಲಿಷ್ಟವೆನಿಸಿದರೂ ಮನಸ್ಸಿದಲ್ಲಿ ಮಾರ್ಗವಿದ್ದೇ ಇದೆ.

ಹೀಗೆ ಗೃಹಸ್ಥನಿಗೆ ನಿತ್ಯಕರ್ಮಗಳಾಗಿ ಐದು ಯಜ್ಞಗಳು

ಪಂಚಯಜ್ಞ
ಬ್ರಹ್ಮಯಜ್ಞೋ ದೇವಯಜ್ಞಃ ಪಿತೃಯಜ್ಞಸ್ತಥೈವ ಚ
ಮನುಷ್ಯಭೂತಯಜ್ಞೌ ಚ ಪಂಚಯಜ್ಞಾಃ ಪ್ರಕೀರ್ತಿತಾಃ ॥

ಈ ಐದು ಯಜ್ಞಗಳನ್ನು ನಡೆಸುವಲ್ಲಿ ಪ್ರಯತ್ನಶೀಲನಾದ ಗೃಹಸ್ಥ ವ್ಯಕ್ತಿ ಮೋಕ್ಷ ಪಡೆಯಲು ಅರ್ಹ ಅಧಿಕಾರಿಯಾಗುತ್ತಾನೆ.
ಜೈ ಗೋಮಾತಾ

Tags: BeefBrahminDeepavaliEternal workGogrosaGomalaKannada ArticleOlympusPancha YajnaPrakash Ammannayaಗಾವೋ ವಿಶ್ವಸ್ಯ ಮಾತರಃಗೃಹಸ್ಥಗೋ ಮಾಂಸಗೋಗ್ರಾಸಗೋಮಾಳದೀಪಾವಳಿದೇವಲೋಕನಿತ್ಯಕರ್ಮಪಂಚಯಜ್ಞಪಿತೃಕರ್ಮಪ್ರಕಾಶ್ ಅಮ್ಮಣ್ಣಾಯಬ್ರಾಹ್ಮಣಭೂತಯಜ್ಞಮನುಷ್ಯಯಜ್ಞ
Previous Post

ಬಸ್-ಲಾರಿ ಡಿಕ್ಕಿ: ಹೊತ್ತಿ ಉರಿದ ಬಸ್, ಚಾಲಕ ಸಾವು, ತಪ್ಪಿದ ಬಾರಿ ಅನಾಹುತ

Next Post

ಅಮೆರಿಕಾ ಕಾರ್ಯಾಚರಣೆ: ಐಸಿಸ್ ಉಗ್ರ ಸಂಘಟನೆ ಮುಖ್ಯಸ್ಥ ಬಾಗ್ದಾದಿ ಮಟಾಷ್

kalpa

kalpa

Next Post

ಅಮೆರಿಕಾ ಕಾರ್ಯಾಚರಣೆ: ಐಸಿಸ್ ಉಗ್ರ ಸಂಘಟನೆ ಮುಖ್ಯಸ್ಥ ಬಾಗ್ದಾದಿ ಮಟಾಷ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023

ರಥಸಪ್ತಮಿಯಂದು ಸಾಮೂಹಿಕ 108 ಸೂರ್ಯ ನಮಸ್ಕಾರ ಸಂಪನ್ನ

January 29, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

2023ರ ಮೊದಲ ಮನ್ ಕಿ ಬಾತ್: ನಳಿನ್ ಕುಮಾರ್ ಕಟೀಲ್, ಸಂಸದ ರಾಘವೇಂದ್ರ ವೀಕ್ಷಣೆ

January 29, 2023

ಸಾಗರ ಶ್ರೀ ಮಾರಿಕಾಂಬ ದೇವಸ್ಥಾನಕ್ಕೆ ಶಾಸಕ ಹಾಲಪ್ಪ ಭೇಟಿ, ವಿಶೇಷ ಪೂಜೆ ಸಲ್ಲಿಕೆ

January 29, 2023

ನಟ ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ: ಶಿವರಾಜ್‌ಕುಮಾರ್ ಏನು ಹೇಳಿದ್ದಾರೆ? ಇಲ್ಲಿದೆ ಮಾಹಿತಿ

January 29, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!