ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯಲ್ಲಿ ಸಾರ್ವಜನಿಕವಾಗಿ ಪ್ರತಿಷ್ಠಾಪಿಸಲಾಗುವ ಗಣೇಶ ಮೂರ್ತಿ ವಿಸರ್ಜನೆಗೆ #GaneshaChaturthi ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿಗಳು ಕೆಲವು ನಿಯಮಗಳನ್ನು ವಿಧಿಸಿದ್ದಾರೆ.
ಈ ಕುರಿತಂತೆ ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, ಜಿಲ್ಲೆಯಾದ್ಯಂತ ಈ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಸೂಚಿಸಿದ್ದಾರೆ.

ಅಲ್ಲದೇ, ಜಿಲ್ಲಾ ಪೊಲೀಸ್ ಅಧೀಕ್ಷಕರ ಶಿಫಾರಸ್ಸಿನ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ನಗರ ಹಾಗೂ ಜಿಲ್ಲಾ ವ್ಯಾಪ್ತಿಯಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ಈ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

- ಹೊಳೆ, ನದಿ, ಕೆರೆ, ಹಿನ್ನೀರು ಪ್ರದೇಶದಲ್ಲಿ ಗಣೇಶ ಮೂರ್ತಿ ವಿಸರ್ಜನೆಗೆ ತೆಪ್ಪ ಬಳಕೆ ನಿಷೇಧ
- ತೆಪ್ಪ ಬಳಸುವುದು ಅನಿವಾರ್ಯವಾದರೆ ಅದರಲ್ಲಿ ಮೂರರಿಂದ ನಾಲ್ಕು ಜನರಿಗೆ ಮಾತ್ರ ಅವಕಾಶ
- ಗಣೇಶ ವಿಸರ್ಜನೆಗೆ ತೆಪ್ಪದಲ್ಲಿ ತೆರಳಿದರೆ ಲೈಫ್ ಜಾಕೇಟ್ ಧರಿಸುವುದು ಕಡ್ಡಾಯ
- ಗಣೇಶ ಮೂರ್ತಿ ವಿಸರ್ಜನೆ ವೇಳೆ ನುರಿತ ಈಜುಗಾರರು ಕಡ್ಡಾಯವಾಗ ಇರತಕ್ಕದ್ದು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post