Friday, May 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಇವರಿಗೆ ದೇಹವಷ್ಟೇ ವಿಕಲ: ಪ್ರತಿಭೆ, ಉತ್ಸಾಹ, ಸ್ಪೂರ್ತಿಯೇ ಸಕಲ

ಭಗವಂತ ಬದುಕು ಕೊಟ್ಟಿರುವುದು ಸಾಯಲು ಅಲ್ಲ ಬದುಕಲು: ಭಾವಚಿತ್ರ ಕಲಾವಿದ ದಿವ್ಯಾಂಗ ಗಣೇಶ್ ಪಂಜಿಮಾರು

June 26, 2020
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಸಾವನ್ನು ನಾವು ಹುಡುಕಿಕೊಂಡು ಹೋಗಬಾರದು. ನಮ್ಮನ್ನು ಸಾವು ಹುಡುಕಿಕೊಂಡು ಬರಬೇಕು. ಆ ದಿನದವರೆಗೆ ಬಾಳಬೇಕು.  ಮರಣವೆಂಬುದು ಮಹಾ ನವಮಿಯಾಗಬೇಕೇ ಹೊರತು ಸ್ವಯಂ ವಧಾಮಿಯಾಗಬಾರದು. ಮರಣ ನಮ್ಮ ವಿಳಾಸ ಹಿಡಿದುಕೊಂಡು ಪರದಾಡಬೇಕು. ನಾವು ಯಾಕೆ ಬಾರದೆ ಇರುವ ಮರಣವನ್ನು ಬಲವಂತದಿಂದ ಬರಮಾಡಿಸಿಕೊಂಡು ಒದ್ದಾಡಿ ಸಾಯಬೇಕು? ಭಗವಂತ ನಮಗೆ ಬದುಕು ಕೊಟ್ಟಿರುವುದು ಬದುಕಲು. ಸಾವು ಬರುವ ತನಕ ನಾವು ಬದುಕಿ ತೋರಿಸಬೇಕು. ಈ ಬದುಕಿ ತೋರಿಸುವ ಕಲೆಯೇ ಜೀವನ.

ಆತ್ಮಹತ್ಯೆ ಮಾಡಿಕೊಳ್ಳುವ ಯೋಚನೆ ಮಾಡುವವರು ಒಮ್ಮೆ ನಮ್ಮಂತವರನ್ನು ನೋಡಬೇಕು ಅಥವಾ ನಮ್ಮಂತವರ ಬಗ್ಗೆ ತಿಳಿದುಕೊಳ್ಳಬೇಕು. ತಂದೆ ಗದರಿದರು ತಾಯಿ ಬೈದರು, ಶಿಕ್ಷಕರು ಜೋರು ಮಾಡಿದ್ರು, ಎಂದು ಒಂದು ಕ್ಷಣದಲ್ಲಿ ಬದುಕೇ ಬೇಡ ಎಂದು ನಿರ್ಧರಿಸಿ ಆತ್ಮಹತ್ಯೆ ಮಾಡಿಕೊಂಡವರ ಬಗ್ಗೆ ಬೇಸರಿಸುತ್ತಾರೆ ಭಾವಚಿತ್ರ ಕಲಾವಿದ ಗಣೇಶ್ ಪಂಜಿಮಾರು.

ತಾನು ಸ್ವತಃ Osteogenesis imperfecta (ಮೂಳೆಗಳ ತೀವ್ರ ದುರ್ಬಲತೆಯಿಂದ ಬರುವ ಅನುವಂಶಿಕ ರೋಗ) ಎಂಬ ಕಾಯಿಲೆಯಿಂದ ಬಳಲುತ್ತಿದ್ದಾರೆ. ಈ ಅಪರೂಪದ ಕಾಯಿಲೆಯ ಪರಿಣಾಮದಿಂದಾಗಿ ಮೂವತ್ತೊಂದರ ಹರೆಯದ ಗಣೇಶ್ ಅವರ ಎತ್ತರ ಮೂರುವರೆ ಅಡಿ. ಭಾರ ಇಪ್ಪತ್ಮೂರು ಕಿಲೋಗ್ರಾಂ. ಆರು ಮಂದಿ ಒಡಹುಟ್ಟಿದವರಲ್ಲಿ ನಾಲ್ಕು ಮಂದಿಗೆ ಈ ಭೀಕರ ಕಾಯಿಲೆ ಇದೆ. ಅಣ್ಣ ಒಬ್ಬ ಇದೇ ಮಾರಕ ಕಾಯಿಲೆಯಿಂದ ಇಹಲೋಕ ತ್ಯಜಿಸಿದ್ದಾರೆ.

ದಿವ್ಯಾಂಗತೆ ಇರುವುದು ನನ್ನ ದೇಹಕ್ಕೆ ಅನ್ಯತಾ ಮನಸ್ಸಿಗಲ್ಲ. ಅದು ಅದರ ಕಾರ್ಯ ಮಾಡಲಿ. ನಾನು ನನ್ನ ಕಾರ್ಯ ಮಾಡುತ್ತೇನೆ ಎಂದು ಪಣತೊಟ್ಟವರು ಗಣೇಶ್ ಪಂಜಿಮಾರು. ವಿಧಿಯನ್ನು ಹಳಿಯುತ್ತ ಬದುಕುವುದಕ್ಕಿಂತ ಬಂದದೆಲ್ಲ ಬರಲಿ. ದಾಸರು ಹೇಳುವ ಹಾಗೆ ಈಸ ಬೇಕು, ಇದ್ದು ಜೈಸಬೇಕು. ಇವರೊಂದಿಗೆ ಮನೆಯವರೆಲ್ಲ ಈ ತತ್ವವನ್ನು ಪರಿಪಾಲಿಸಿಕೊಂಡು ಬದುಕುತ್ತಿದ್ದಾರೆ. ಬಿಕಾಂ ಪದವೀಧರರಾದ ಗಣೇಶ್ ಸದ್ಯ ನಿರುದ್ಯೋಗಿ. ಹಲವು ಬಾರಿ ಬ್ಯಾಂಕಿಂಗ್ ಪರೀಕ್ಷೆ ಕಟ್ಟಿದರೂ ಉತ್ತೀರ್ಣರಾಗದೇ ಮರಳಿ ಯತ್ನವ ಮಾಡುತ್ತಲ್ಲಿದ್ದಾರೆ. ಪದವಿ ಪಡೆದ ನಂತರ ಮನೆಯಲ್ಲಿರುತ್ತ ಏನಾದರೊಂದು ಮಾಡಬೇಕು, ನನ್ನ ಸಂಸಾರದ ನೇಗಿಲಿಗೆ ಹೆಗಲು ಕೊಡಬೇಕೆಂದು ಹಪಹಪಿಸುತ್ತಿದ್ದರು. ಒಂದು ಗುರುವಾರ ತನ್ನ ತಾಯಿ ಶಿರ್ವದ ಸಂತೆಗೆ ಹೋಗಿರುವ ಸಮಯದಲ್ಲಿ ತದೇಕ ಚಿತ್ತದಿಂದ ತಾಯಿಯನ್ನು ನೆನೆಸುತ್ತ ಹಾಳೆಯ ಮೇಲೆ ತಾಯಿಯ ಭಾವಚಿತ್ರವನ್ನು ಬಿಡಿಸಿದರು. ನೂರಕ್ಕೆ ನೂರರಷ್ಟು ಅಲ್ಲದಿದ್ರೂ ತೊಂಬತ್ತೇಳು ಪ್ರತಿಶತ ಚೆನ್ನಾಗಿಯೇ ಬಿಡಿಸಿದರು. ತಾಯಿ ಮರಳಿ ಬಂದು ನೋಡಿದಾಗ ಆನಂದ ಭಾಷ್ಪಿತರಾದರಂತೆ. ಅಂದೇ ಭಾವಚಿತ್ರ ಬಿಡಿಸುವ ಕಲೆಗೆ ಗಣಪತಿ ಮಂತ್ರ ಹಾಡಿದ ಗಣೇಶ್ ಮತ್ತೆ ಹೊರಳಿ ನೋಡಲಿಲ್ಲ.


ಗಣೇಶ್ ಅವರು ಇಂದು ತನ್ನದೇ ಆದ Ganesh Panjimar Arts ಎಂಬ ಯುಟ್ಯೂಬ್’ ಚಾನೆಲ್ ಹೊಂದಿದ್ದಾರೆ. ನೂರಾರು ಭಾವಚಿತ್ರಗಳನ್ನು ಬಿಡಿಸಿ ಯುಟ್ಯೂಬ್ ವಾಹಿನಿಯಲ್ಲಿ ಹರಿಯಬಿಟ್ಟಿದ್ದಾರೆ. ಹಿಂದಿ, ಕನ್ನಡ, ತಮಿಳು, ತೆಲುಗು ಮುಂತಾದ ಭಾಷೆಯ ಚಲನಚಿತ್ರ ರಂಗದ ದಿಗ್ಗಜರ ಭಾವಚಿತ್ರಗಳನ್ನು ರಚಿಸಿದ್ದಾರೆ. ಕ್ರಿಕೆಟ್, ಫುಟ್’ಬಾಲ್, ಡಬ್ಲುಡಬ್ಲುಎಫ್ ತಾರೆಯರ ರಾಜಕೀಯ ನೇತಾರರ, ಸಾಮಾಜಿಕ ಗಣ್ಯರ ಭಾವಚಿತ್ರಗಳನ್ನು ರಚಿಸಿದ್ದಾರೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಸನ್ಮಾನಿತರಾಗಿದ್ದಾರೆ ಬಂಜರಾ ಗ್ರೂಪಿನ ಮಾಲಕರಾದ ಡಾ. ಪ್ರಕಾಶ್ ಶೆಟ್ಟಿಯವರ ಅಭಿನಂದನ ಕಾರ್ಯಕ್ರಮದಲ್ಲಿ ಪುರಸ್ಕೃತರಾಗಿದ್ದಾರೆ. ಪರ್ಯಾಯೋತ್ಸವದಲ್ಲಿ ಸನ್ಮಾನಿತರಾಗಿದ್ದಾರೆ.

ಮೂಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜ್ ಶಿರ್ವ, ಹಳೆ ವಿದ್ಯಾರ್ಥಿ ಸಂಘ ಮುಂಬೈ ಘಟಕದ ಜಾಗತಿಕ ಸಮಾವೇಶದಲ್ಲಿ ಸನ್ಮಾನಿತರಾಗಿದ್ದಾರೆ. ಊರಿನ ಹಲವಾರು ಸಂಘ ಸಂಸ್ಥೆಗಳು ಗಣೇಶ್ ಅವರ ಸಾಧನೆಯನ್ನು ಗುರುತಿಸಿವೆ. ಮಾಧ್ಯಮಗಳೂ ಪರಿಚಯಿಸಿವೆ. ಗಣೇಶ್ ಅವರ ಓರ್ವ ಹಿರಿಯ ಸೋದರ ದಿವ್ಯಾಂಗರಾದರೂ ಸಾಫ್ಟ್‌ವೇರ್ ಇಂಜಿನಿಯರಿಂಗ್ ಶಿಕ್ಷಣ ಪಡೆದು ಬೆಂಗಳೂರಿನಲ್ಲಿ ಉದ್ಯೋಗಿ ಆಗಿದ್ದಾರೆ ಇವರ ತಮ್ಮ ಕೂಡ ಸಾಫ್ಟ್‌’ವೇರ್ ಇಂಜಿನಿಯರ್.

ಕುಟುಂಬದ ಪೋಷಣೆಯ ಭಾರ ಆ ಇಬ್ಬರ ಮೇಲಿದೆ. ಇವರ ದಿವ್ಯಾಂಗವುಳ್ಳ ತಂಗಿ ಮನೆಯಲ್ಲಿ ಕಾಗದಗಳ ಪಟ್ಟಿಯಿಂದ (Quill Arts) ಗೊಂಬೆ ತಯಾರಿಸುವ ಸೃಜನಶೀಲತೆಯನ್ನು ಬೆಳೆಸಿಕೊಂಡಿದ್ದಾರೆ.

ಗಣೇಶ್ ಪಂಜಿಮಾರು ಅವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಹತ್ತಿರದ ಕೋಡು ದುರ್ಗಾಂಬಿಕಾ ಹಿರಿಯ ಪ್ರಾಥಮಿಕ ಶಾಲೆಯಿಂದ ಕಲಿತವರು. ಹೈಸ್ಕೂಲ್ ವಿದ್ಯಾಭ್ಯಾಸವನ್ನು ಶ್ರೀಗುರು ನಾರಾಯಣ ಹೈಸ್ಕೂಲ್, ಪಡುಬೆಳ್ಳೆ ಇಲ್ಲಿಂದ ಮಾಡಿದವರು. ಪದವಿ ಪೂರ್ವ ಶಿಕ್ಷಣವನ್ನು ಹಿಂದೂ ಜೂನಿಯರ್ ಕಾಲೇಜ್ ಹಾಗೂ ಬಿಕಾಂ ಪದವಿಯನ್ನು ಎಂ.ಎಸ್.ಆರ್. ಎಸ್ ಕಾಲೇಜ್ ಇಲ್ಲಿಂದ ಪಡೆದಿರುವರು. ಪದವಿ ಶಿಕ್ಷಣ ಪಡೆಯುತ್ತಿದ್ದಾಗ ಎಂ.ಎಸ್.ಆರ್.ಎಸ್. ಕಾಲೇಜಿನ ಹಳೆ ವಿದ್ಯಾರ್ಥಿ ಮುಂಬೈ ಘಟಕವು ಮೂರು ವರ್ಷ ಧನ ಸಹಾಯ ಮಾಡಿದೆ ಎಂದು ಸದಾ ಸ್ಮರಿಸುತ್ತಾರೆ ಗಣೇಶ್. ಪದವಿ ವ್ಯಾಸಂಗ ಮಾಡುತ್ತಿದ್ದಾಗ ಕಾಲೇಜಿಗೆ ಹೋಗಿ ಬರಲು ವಿಶೇಷವಾಗಿ ತಯಾರಿಸಿದ ತ್ರಿಚಕ್ರ ವಾಹನವನ್ನು ಕೊಡುಗೆಯಾಗಿ ನೀಡಿದ ಉಡುಪಿಯ ಉದ್ಯಮಿ ಶ್ರೀಸುದರ್ಶನ್ ಶೆಟ್ಟಿಯವರನ್ನೂ ಅದಕ್ಕಾಗಿ ಶ್ರಮಿಸಿದ ಹಿಂದಿ ಪ್ರಾಧ್ಯಾಪಕರಾಗಿದ್ದ ಶ್ರೀಮತಿ ಶಾರದ ಎಂ. ಅವರನ್ನೂ ಈಗಲೂ ನೆನೆಯುತ್ತಾರೆ ಗಣೇಶ್.

ಗಣೇಶ್ ಪಂಜಿಮಾರು ಅವರ ಹಿರಿಯರು ಉಡುಪಿಯವರಾದರೂ ನೆಲೆಸಿದ್ದು ಆಂಧ್ರ ಪ್ರದೇಶದಲ್ಲಿ. ಮೂರು ದಶಕಗಳ ಹಿಂದೆ ಗಣೇಶ್ ಅವರ ಹೆತ್ತವರಾದ ದಿವಗಂತ ರಾಮ ಮೂಲ್ಯರು ಹಾಗೂ ಶ್ರೀಮತಿ ನಾಗಮಣಿ ಅವರು ಪಂಜಿಮಾರಲ್ಲಿ ಬಂದು ನೆಲೆಸಿದವರು. ಆರೋಗ್ಯದಲ್ಲಿ ಸರಿಯಿರುವ ಗಣೇಶ್ ಅವರ ದೊಡ್ಡಣ್ಣ ಮೇಸ್ತ್ರಿ ಕೆಲಸ ಮಾಡುತ್ತಿದ್ದಾರೆ. ಅವರು ಸಂಸಾರಿಕರಾಗಿ ಬೇರೆ ವಾಸವಾಗಿದ್ದಾರೆ. ದುಡಿಯವ ಕೈಗಳಿಗಿಂತ ಉಣ್ಣುವ ಬಾಯಿಗಳ ಸಂಖ್ಯೆ ಹೆಚ್ಚು.

ಔಷಧಕ್ಕೆ ತಿಂಗಳಿಗೆ ತಲಾ ಒಂದೂವರೆ ಸಾವಿರ ರೂಪಾಯಿಗಳಷ್ಟು ವ್ಯಯವಾಗುತ್ತದೆ. ಆದರೂ ನಗು ನಗುತ್ತ ಬಾಳುವ ಇವರು ಊರಿಗೆಲ್ಲ ಮಾದರಿಯಾಗಿದ್ದಾರೆ. ತನ್ನ ಅನ್ನವನ್ನು ತಾನು ದುಡಿದು ತಿನ್ನಬೇಕು ಎಂಬ ಅಚಲ ನಿರ್ಧಾರ ಹೊಂದಿದ ಗಣೇಶ್ ಪಂಜಿಮಾರು ಕಾಯಿಲೆಯೊಂದಿಗೆ ನಿರುದ್ಯೋಗ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ. ಬ್ಯಾಂಕಿನ ಪರೀಕ್ಷೆ ಪಾಸು ಮಾಡಿ ಕೆಲಸಕ್ಕೆ ಸೇರಬೇಕೆಂಬ ಗಣೇಶ್ ಅವರ ಕನಸು ನನಸಾಗಲಿ. ಅಥವಾ ಅದಕ್ಕೆ ತತ್ಸಮಾನವಾದ ಕೆಲಸವೊಂದು ಆದಷ್ಟು ಬೇಗ ದೊರೆಯಲಿ ಎಂದು ಹಾರೈಸೋಣ.


Get In Touch With Us info@kalpa.news Whatsapp: 9481252093

Tags: HandicapHandicapped Ganesh PanjimaruKannada News WebsiteLatest News KannadaOsteogenesis imperfectaPortrait ArtistSpecial Articleಅನುವಂಶಿಕ ರೋಗದಿವ್ಯಾಂಗ ಗಣೇಶ್ ಪಂಜಿಮಾರುಭಾವಚಿತ್ರ ಕಲಾವಿದ
Previous Post

ಆಗಸ್ಟ್‌ 12ರವೆರಗೂ ದೇಶದಾದ್ಯಂತ ಎಲ್ಲ ರೈಲು ಸಂಚಾರ ರದ್ದು

Next Post

‘ಮೇಲೊಬ್ಬ ಮಾಯವಿ’ಗೆ ಸೆನ್ಸಾರ್ ಅಸ್ತು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

‘ಮೇಲೊಬ್ಬ ಮಾಯವಿ’ಗೆ ಸೆನ್ಸಾರ್ ಅಸ್ತು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025

ಪಾಕಿಸ್ತಾನಿಗಳನ್ನು ಗಡಿಪಾರು ಮಾಡಲು ರಾಜ್ಯಪಾಲರು ತಕ್ಷಣ ನಿರ್ದೇಶನ ನೀಡಬೇಕು: ದತ್ತಾತ್ರಿ ಮನವಿ

May 8, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 10ರಿಂದ ಮೂರು ದಿನ ಶ್ರೀ ನರಸಿಂಹ ಜಯಂತಿ ಉತ್ಸವ, ಬ್ರಹ್ಮರಥೋತ್ಸವ

May 9, 2025

ಪಾಕ್ ದಾಳಿ ವಿಫಲ | ವೈಮಾನಿಕ ದಾಳಿ ನಡೆಸಿ ಭಾರತ ದಿಟ್ಟ ಉತ್ತರ

May 9, 2025

ಪಾಕಿಸ್ತಾನದ ಪ್ರಧಾನಿ ನಿವಾಸದ ಬಳಿಯೇ ಭಾರತ ಅಟ್ಯಾಕ್ | ಭಾರಿ ಸ್ಫೋಟಕ್ಕೆ ನಡುಕ

May 8, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!