ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕುಟುಂಬಸ್ಥರು ಮದುವೆ ಮನೆಗೆ ಹೋಗಿದ್ದ ಸಂದರ್ಭದಲ್ಲಿ ಮನೆಗೆ ನುಗ್ಗಿ ಲಕ್ಷಾಂತರ ರೂ ವೆಚ್ಚದ ಒಡವೆ ಕಳ್ಳತನ ಮಾಡಿರುವ ಘಟನೆ ತಾಲೂಕಿನ ಗುತ್ತೆಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ.
ತೂದೂರು ಸಮೀಪದ ಗುತ್ತಿಯಡೇಹಳ್ಳಿ ರಸ್ತೆಯಲ್ಲಿರುವ ಮನೆಯೊಂದರಲ್ಲಿ ಸುಮಾರು 25 ಲಕ್ಷ ವೆಚ್ಚದ ಚಿನ್ನಾಭರಣ ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.
ಮದುವೆ ಕಾರ್ಯಕ್ರಮಕ್ಕೆ ಕುಟುಂಬದವರು ತೆರಳಿರುವ ಸಂದರ್ಭವನ್ನು ಗಮನಿಸಿದ ಕಳ್ಳರು ಮನೆಯಲ್ಲಿದ್ದ ಒಡವೆಗಳನ್ನು ಕದ್ದೊಯ್ದಿದ್ದಾರೆ. ಕಪಾಟಿನಲ್ಲಿ ಇಟ್ಟಿದ್ದ ಒಡವೆಗಳನ್ನು ದೋಚಿದ್ದು, ಸುಮಾರು 25 ಲಕ್ಷ ರೂ ವೆಚ್ಚದ ಆಭರಣಗಳು ಕಳ್ಳತನ ಆಗಿದೆ ಎಂದು ಅಂದಾಜಿಸಲಾಗಿದೆ.
ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















