ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಏಕಾಏಕಿ ಇಬ್ಬರು ಓರ್ವ ವ್ಯಕ್ತಿಯ ಮೇಲೆ ಹಲ್ಲೆ #Assault on Youth ಮಾಡಲು ಮುಂದಾಗಿದ್ದಲ್ಲದೇ ಹತ್ಯೆ ನಡೆಸಲು ಮುಂದಾದ ಘಟನೆ ಕಟ್ಟೆಹಕ್ಲು ಬಳಿ ನಡೆದಿದೆ.
ತಾಲೂಕಿನ ಸಾಲ್ಗಡಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕಟ್ಟೆಹಕ್ಲು ಸಮೀಪ ಪುನೀತ್ ಎಂಬಾತ ಬೈಕ್ ನಲ್ಲಿ ಬರುತ್ತಿದ್ದಾಗ ಕಾರಿನಲ್ಲಿ ಬಂದ ಇಬ್ಬರು ಮಾರಕಾಸ್ತ್ರ ಹಿಡಿದು ಹಲ್ಲೆ ನಡೆಸಿದ್ದಾರೆ.
Also read: ಸಾಲಬಾಧೆ | ತೋಟದಲ್ಲಿ ರೈತ ನೇಣಿಗೆ ಶರಣು
ಅದೇ ರಸ್ತೆಯಲ್ಲಿ ಬರುತ್ತಿದ್ದ ಪುನೀತ್ ಸ್ನೇಹಿತರನ್ನು ನೋಡಿ ಹಲ್ಲೆ ಮಾಡುತ್ತಿದ್ದ ಇಬ್ಬರು ದುಷ್ಕರ್ಮಿಗಳು ಓಡಿ ಹೋಗಿದ್ದಾರೆ. ಹಲ್ಲೆಗೆ ಒಳಗಾದ ಪುನೀತ್ ಎಂಬಾತನನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಜರುಗಿದ್ದು ಪೊಲೀಸ್ ತನಿಖೆಯಿಂದ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post