ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಕಾರು ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಚಾಲಕನಿಗೆ ಗಂಭೀರ ಗಾಯವಾಗಿದ್ದು ಆತನನ್ನು ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾದ ಘಟನೆ ತೀರ್ಥಹಳ್ಳಿಯ ಕೊಪ್ಪ ರಸ್ತೆಯಲ್ಲಿ ನಡೆದಿದೆ.
ಕುರುವಳ್ಳಿ ಸಮೀಪದ ಕುಂಬಾರದಡಿಗೆ ತಿರುವಿನಲ್ಲಿ ಶುಕ್ರವಾರ ರಾತ್ರಿ ಈ ಅಪಘಾತ ಸಂಭವಿಸಿದ್ದು ಬೈಕ್ ಚಾಲಕ ಮದನ್ ಎಂಬುವರಿಗೆ ಗಂಭೀರ ಗಾಯವಾಗಿದೆ. ಅವರನ್ನು ತಕ್ಷಣವೇ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.
ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ನೂರು ಮೀಟರ್ ನಷ್ಟು ಬೈಕ್ ಸಮೇತ ಎಳೆದೋಯ್ಯಲಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post