ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಸ್ಕೂಟಿಯಲ್ಲಿ ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಹಿಂಭಾಗದಿಂದ ಬಂದ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ
ಆತ ಸಾವನ್ನಪ್ಪಿರುವ ಘಟನೆ ಬೆಜ್ಜವಳ್ಳಿ ಸಮೀಪ ನಡೆದಿದೆ.
ತೀರ್ಥಹಳ್ಳಿ ತಾಲೂಕಿನ ಬೆಜ್ಜವಳ್ಳಿಯಿಂದ ದಾನಸಾಲೆಗೆ ಹೋಗುತ್ತಿದ್ದ ಅಬ್ದುಲ್ ರೆಹಮಾನ್ (44 ವರ್ಷ ) ಎಂಬುವರಿಗೆ ಸಮಕಾನಿ ದೇವಸ್ಥಾನ ಬಳಿ ಪ್ರವಾಸಿ ಬಸ್ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಅಬ್ದುಲ್ ರೆಹಮಾನ್ ಮೃತಪಟ್ಟಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post