ಕಲ್ಪ ಮೀಡಿಯಾ ಹೌಸ್
ತೀರ್ಥಹಳ್ಳಿ: ಪಟ್ಟಣದ ರಾಮೇಶ್ವರ ದೇವಸ್ಥಾನದ ಮುಖ್ಯ ಬಾಗಿಲಿನ ಬೀಗ ಒಡೆದು ಕಳ್ಳತನಕ್ಕೆ ಪ್ರಯತ್ನ ಮಾಡಿರುವ ಘಟನೆ ನಡೆದಿದೆ.
ನಿನ್ನೆ ರಾತ್ರಿ 12:30ರ ಸುಮಾರಿಗೆ ಪಟ್ಟಣದ ಪುರಾಣ ಪ್ರಸಿದ್ಧ ರಾಮೇಶ್ವರ ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು ಕಳ್ಳತನಕ್ಕೆ ಯತ್ನಿಸಿದ್ದು, ಕಾಣಿಕೆ ಹುಂಡಿಯನ್ನು ದೇವಸ್ಥಾನದ ಹಿಂಭಾಗದಲ್ಲಿ ತೆಗೆದುಕೊಂಡು ಹೋಗಿ ಒಡೆಯಲು ಪ್ರಯತ್ನಿಸಿದಾಗ ಶಬ್ದ ಕೇಳಿಸಿಕೊಂಡ ಅಕ್ಕಪಕ್ಕದ ಜನರು ಹೊರ ಬಂದು ಕಳ್ಳರನ್ನು ಹಿಡಿಯಲು ಪ್ರಯತ್ನಿಸಿದಾಗ ಇಬ್ಬರು ಪರಾರಿ ಆಗಿರುದ್ದಾರೆ ಎಂದು ತಿಳಿದುಬಂದಿದೆ.
ತೀರ್ಥಹಳ್ಳಿ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿ ಕಟ್ಟೆ ಮಂಜುನಾಥ್ ಅವರು ಸ್ಥಳಕ್ಕೆ ಭೇಟಿ ನೀಡಿ ಮಹಜರು ನಡೆಸಿದ್ದಾರೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post