No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
  • Advertise With Us
  • Grievances
  • About Us
  • Contact Us
Tuesday, November 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ತೀರ್ಥಹಳ್ಳಿಗೆ ಸೆ.19ರಂದು ಸಿಎಂ ಶಿವಕುಮಾರ್ ಭೇಟಿ | ಏನು ಕಾರ್ಯಕ್ರಮ?

kalpa News by kalpa News
September 16, 2026
in ಶಿವಮೊಗ್ಗ
0
Thirthahalli cm dk shivakumar visits on sept 19th
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ, ರೈತರು, ಕೃಷಿ ಕಾರ್ಮಿಕರು ಹಾಗೂ ಸಾರ್ವಜನಿಕರೊಂದಿಗೆ ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಲೆನಾಡು ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದು, ಸೆಪ್ಟೆಂಬರ್ 19ರಂದು ಶಿವಮೊಗ್ಗ ಮತ್ತು ಚಿಕ್ಕಮಗಳೂರು (Chikkamagaluru) ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ (Thirthahalli) ಶನಿವಾರ ಬೆಳಗ್ಗೆ 9.30 ಕ್ಕೆ ಸಭೆ ನಿಗದಿಯಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಸಚಿವರು, ರೈತರ ಪರವಾಗಿ ನಿಂತಿರುವ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕದಲ್ಲಿ ಅವಕಾಶ ನೀಡುವುದಿಲ್ಲ. ಈ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರದ ನಿಲುವು ಅತ್ಯಂತ ಸ್ಪಷ್ಟವಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ವೈಯಕ್ತಿಕವಾಗಿಯೂ ಈ ವಿಚಾರವಾಗಿ ಚರ್ಚಿಸಿದ್ದು, ರಾಜ್ಯದ ರೈತರ ಹಿತಕ್ಕೆ ಧಕ್ಕೆ ತರುವ ಯಾವುದೇ ಕ್ರಮಕ್ಕೆ ಅವಕಾಶ ನೀಡುವುದಿಲ್ಲ. ರೈತರ ಪರವಾಗಿ ನಿಲ್ಲುತ್ತೇವೆ ಎಂದು ಭರವಸೆ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರು ಶಿವಮೊಗ್ಗ ಜಿಲ್ಲೆಗೆ ಆಗಮಿಸಿ ಸ್ಥಳೀಯ ರೈತರು ಮತ್ತು ಸಾರ್ವಜನಿಕರಿಂದ ಖುದ್ದಾಗಿ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವರು ಹೇಳಿದ್ದಾರೆ.PES Shivamogga

Thirthahalli : ತೀರ್ಥಹಳ್ಳಿ, ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆ

ಕಸ್ತೂರಿ ರಂಗನ್ ವರದಿ ಜಾರಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಏಳನೇ ಕರಡು ಅಧಿಸೂಚನೆಯನ್ನು ವಿರೋಧಿಸಿ ಕಾಂಗ್ರೆಸ್ ಪಕ್ಷದ ವತಿಯಿಂದ ಈಗಾಗಲೇ ತೀರ್ಥಹಳ್ಳಿ ಹಾಗೂ ಶಿಕಾರಿಪುರದಲ್ಲಿ ಬೃಹತ್ ಪಾದಯಾತ್ರೆಗಳನ್ನು ನಡೆಸಲಾಗಿದೆ. ಎರಡೂ ಪಾದಯಾತ್ರೆಗಳಲ್ಲಿ ತಾವು ಖುದ್ದಾಗಿ ಭಾಗವಹಿಸಿದ್ದು, ಸಾವಿರಾರು ರೈತರು, ಯುವಕರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿದ್ದಾರೆ.

“ಕಸ್ತೂರಿ ರಂಗನ್ ವರದಿ ವಿರೋಧದ ಹೋರಾಟ ಕಾಂಗ್ರೆಸ್ ಪಕ್ಷದ ಹೋರಾಟವಲ್ಲ. ಇದು ಮಲೆನಾಡಿನ ಜನರ ಹೋರಾಟ. ರೈತರ ಬದುಕಿನ ಹೋರಾಟ. ನಮ್ಮ ನೆಲ, ಜಲ, ಕೃಷಿ ಮತ್ತು ಭವಿಷ್ಯದ ಹೋರಾಟ” ಎಂದು ಅವರು ಹೇಳಿದ್ದಾರೆ.

Also read>> ಪ್ಲಾಸ್ಟಿಕ್ ಮುಕ್ತ ಜೀವನಕ್ಕೆ ಪ್ರವಾಹಕ್ಕೆ ವಿರುದ್ಧ ಈಜುವ ಧೈರ್ಯ ಬೇಕು : ರಾಘವೇಶ್ವರ ಶ್ರೀ

ಶಿವಮೊಗ್ಗದ 484 ಗ್ರಾಮಗಳಿಗೆ ತೊಂದರೆ

ಕಸ್ತೂರಿ ರಂಗನ್ ವರದಿಯ ಶಿಫಾರಸಿನಲ್ಲಿ ರಾಜ್ಯದ 20,668 ಚದರ ಕಿಲೋಮೀಟರ್ ಪ್ರದೇಶ ಹಾಗೂ 1,576 ಗ್ರಾಮಗಳನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಗುರುತಿಸಲಾಗಿದೆ. ಇದರಲ್ಲಿ ಶಿವಮೊಗ್ಗ ಜಿಲ್ಲೆಯ 484 ಗ್ರಾಮಗಳೂ ಸೇರಿವೆ ಎಂದು ಸಚಿವರು ತಿಳಿಸಿದ್ದಾರೆ.

ಜಿಲ್ಲೆಯ ತೀರ್ಥಹಳ್ಳಿ ಮತ್ತು ಸಾಗರ ತಾಲ್ಲೂಕಿನಲ್ಲಿ ಅತಿ ಹೆಚ್ಚು ಗ್ರಾಮಗಳು ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲಾಗಿರುವ ಗ್ರಾಮಗಳ ಪಟ್ಟಿಯಲ್ಲಿವೆ. ಈ ಪ್ರದೇಶದಲ್ಲಿ ಜನವಸತಿ ಇದ್ದರೂ ಪರಿಸರ ಸೂಕ್ಷ್ಮ ಪ್ರದೇಶ ಎಂದು ಗುರುತಿಸಿ, ನಿರ್ಬಂಧಗಳನ್ನು ಹೇರಲು ಕೇಂದ್ರ ಸರ್ಕಾರ ಮುಂದಾಗಿರುವುದು ಆತಂಕಕ್ಕೆ ಕಾರಣವಾಗಿದೆ. ಮೊದಲ ಆರು ಅಧಿಸೂಚನೆಗಳಲ್ಲಿ ತೀರ್ಥಹಳ್ಳಿ ತಾಲ್ಲೂಕಿನ 139 ಗ್ರಾಮಗಳನ್ನು ಪಟ್ಟಿಯಲ್ಲಿ ಸೇರಿಸಲಾಗಿತ್ತು. ಇದೀಗ ಹೊರಡಿಸಲಾಗಿರುವ ಕರಡು ಅಧಿಸೂಚನೆಯಲ್ಲಿ ಗ್ರಾಮಗಳ ಸಂಖ್ಯೆಯನ್ನು 154ಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಸ್ಥಳೀಯ ರೈತರಲ್ಲಿ ಆತಂಕ ಉಂಟಾಗಿದೆ ಎಂದು ಅವರು ಹೇಳಿದ್ದಾರೆ.

ರೈತರ ಬದುಕಿಗೆ ತೊಂದರೆ; ಒಪ್ಪುವುದಿಲ್ಲ

ಕೇಂದ್ರ ಸರ್ಕಾರ ಕಸ್ತೂರಿ ರಂಗನ್ ವರದಿಯನ್ನು ಮುಂದಿಟ್ಟುಕೊಂಡು ರೈತರ ಬದುಕಿಗೆ ತೊಂದರೆ ಉಂಟುಮಾಡುವ ಕ್ರಮ ಕೈಗೊಳ್ಳಲು ಮುಂದಾಗುತ್ತಿದೆ ಎಂದು ಆರೋಪಿಸಿದ ಸಚಿವರು, ಮಲೆನಾಡಿನ ರೈತರು ಕಾಡನ್ನು ನಾಶ ಮಾಡಲು ಹೊರಟವರಲ್ಲ. ಪರಿಸರವನ್ನು ಸಂರಕ್ಷಿಸಿಕೊಂಡೇ ತಲೆತಲಾಂತರಗಳಿಂದ ಕೃಷಿ ಮಾಡಿಕೊಂಡು ಬದುಕುತ್ತಿದ್ದಾರೆ ಎಂದು ಹೇಳಿದ್ದಾರೆ.

ಅಡಕೆ, ಕಾಫಿ, ಭತ್ತ ಸೇರಿದಂತೆ ವಿವಿಧ ಬೆಳೆಗಳನ್ನು ಬೆಳೆಯುವ ಮೂಲಕ ಮಲೆನಾಡಿನ ಆರ್ಥಿಕತೆಗೆ ರೈತರು ಮಹತ್ವದ ಕೊಡುಗೆ ನೀಡುತ್ತಿದ್ದಾರೆ. ರಾಸಾಯನಿಕ ಗೊಬ್ಬರ, ಕೀಟನಾಶಕ ಬಳಸಬೇಡಿ, ಅಭಿವೃದ್ಧಿ ಕೆಲಸ ಮಾಡಬೇಡಿ ಎಂದು ಹೇಳುವುದು ಸರಿಯಲ್ಲ. ಈ ರೈತರ ಬದುಕು ಮತ್ತು ಕೃಷಿಗೆ ತೊಂದರೆಯಾಗುವ ಯಾವುದೇ ನಿರ್ಧಾರವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

“ಪರಿಸರ ಉಳಿಯಬೇಕು. ಮಲೆನಾಡಿನ ರೈತರ ಬದುಕು ಉಳಿಯಬೇಕು. ಅವರ ಕೃಷಿ ಉಳಿಯಬೇಕು. ಇದೇ ನಮ್ಮ ಕಾಂಗ್ರೆಸ್ ಸರ್ಕಾರದ ನಿಲುವು” ಎಂದು ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ತೀರ್ಥಹಳ್ಳಿ ಸಭೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಮನವಿ

ಕಸ್ತೂರಿ ರಂಗನ್ ವಿಷಯದ ಕುರಿತು ಚರ್ಚಿಸಲು ಈಗಾಗಲೇ ವಿಶೇಷ ಅಧಿವೇಶನ ಕರೆದಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 19ರಂದು ತೀರ್ಥಹಳ್ಳಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಸಭೆ ಅತ್ಯಂತ ಮಹತ್ವದ್ದಾಗಿದೆ. ಈ ಸಭೆಯಲ್ಲಿ ಮಲೆನಾಡಿನ ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿಯಿಂದ ಉಂಟಾಗಬಹುದಾದ ಆತಂಕಗಳ ಕುರಿತು ಮುಖ್ಯಮಂತ್ರಿಗಳು ಖುದ್ದಾಗಿ ರೈತರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಈ ಸಭೆಗೆ ಜಿಲ್ಲೆಯ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ಸಾರ್ವಜನಿಕರು ಹಾಗೂ ಕಾಂಗ್ರೆಸ್ ಪಕ್ಷದ ಎಲ್ಲ ಘಟಕಗಳ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು. ಈ ವರದಿಯನ್ನು ತಿರಸ್ಕರಿಲು ಮುಂದಾಗಿರುವ ರಾಜ್ಯ ಸರ್ಕಾರಕ್ಕೆ ಹಾಗೂ ಮುಖ್ಯಮಂತ್ರಿಗಳಿಗೆ ಶಕ್ತಿ ತುಂಬಬೇಕು ಎಂದು ಸಚಿವ ಮಧು ಬಂಗಾರಪ್ಪ ಮನವಿ ಮಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      Kalpa News Advertising DisclaimerKalahamsa Infotech private limited

Tags: DCM DK ShivakumarMinister Madhu BangarappaThirthahalliಶಿವಮೊಗ್ಗ
Share205Tweet128Send
Aniruddha Vasishta S R

Aniruddha Vasishta S R

Editor-in-Chief

Previous Post

ಔಷಧಿ ತೆಗೆದುಕೊಳ್ಳುವ ಮುನ್ನ ಎಚ್ಚರ! ಒಂದು ತಪ್ಪು ಡೋಸ್ ದೊಡ್ಡ ಹಾನಿ ಮಾಡಬಹುದು

Next Post

ತಿರುಮಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ: ಫಲ-ಪುಷ್ಪ ಪ್ರದರ್ಶನ, ಮಾಧ್ಯಮ ಕೇಂದ್ರ ಉದ್ಘಾಟನೆ

kalpa News

kalpa News

Next Post
tirumala-brahmotsavam-fruit-flower-exhibition

ತಿರುಮಲ ಬ್ರಹ್ಮೋತ್ಸವಕ್ಕೆ ಭರದ ಸಿದ್ಧತೆ: ಫಲ-ಪುಷ್ಪ ಪ್ರದರ್ಶನ, ಮಾಧ್ಯಮ ಕೇಂದ್ರ ಉದ್ಘಾಟನೆ

No Result
View All Result
Pneumonia or Common Cold The Differece Before Its Too Late!
English Articles

Why pneumonia should never be mistaken for a common cold

by kalpa News
November 16, 2026
0

Learn why pneumonia should never be mistaken for a common cold. Understand the key symptoms, warning signs, health risks and...

Read moreDetails
South Western Railway Jeevan Pramaan 5 Camps Mysuru Division Nov 2026

South Western Railway Announces Jeevan Pramaan 5.0 Camps; Check Dates & Venues

November 4, 2026
Dasara Celebrations at Prasanna Venkateswara Swamy Temple

Resplendent Dasara Celebrations at Prasanna Venkateswara Swamy Temple

November 2, 2026
Cyclone Arnab Effect Jharkhand Alert 15 Dist Heavy Rain

Cyclone Arnab Effect: Jharkhand Braces for Heavy Rain and Winds Up to 60 kmph

October 29, 2026
Bharatanatyam Of Sukti Performance Sampattu Grace Rhythm copy

Grace and Rhythm Mark Sukthi’s Bharatanatyam Performance at Sampattu

October 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL