ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕಿನಾದ್ಯಂತ ನಿರಂತರ ಮಳೆ ಸುರಿಯುತ್ತಿದ್ದು, ಬೃಹತ್ ಆಲದ ಮರವೊಂದು ರಸ್ತೆಯ ಮೇಲೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
ತೀರ್ಥಹಳ್ಳಿ – ಕೋಣಂದೂರು ಸಾಗರ ರಸ್ತೆಯ ಹುಂಚದಕಟ್ಟೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹುಂಚದಕಟ್ಟೆ – ಹುಂಚ ಸಂಪರ್ಕಿಸುವ ಬೈಪಾಸ್ ರಸ್ತೆಯಾದ ಕಟ್ಟೆರಸ್ತೆ ಬಳಿ ಬೃಹತ್ ಆಲದ ಮರವೊಂದು ರಸ್ತೆಯ ಮೇಲೆ ಬಿದ್ದು ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.
Also read: ದಿಢೀರನೆ ಧರೆಗುರುಳಿದ ಮರ | ಬಸ್ ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ
ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದ ಸುತ್ತ ಮುತ್ತಲಿನ ವ್ಯಾಪ್ತಿಯಲ್ಲಿ ಅನೇಕ ವಿದ್ಯುತ್ ಕಂಬಗಳು ಧರೆಗೆ ಉರುಳಿದೆ. ಸ್ಥಳದಲ್ಲಿ ಅಧಿಕಾರಿಗಳು ಮೊಕ್ಕಂ ಹೂಡಿ ಆಲದ ಮರದ ತೆರವು ಕಾರ್ಯಾಚರಣೆ ಮಾಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post