ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಇಲ್ಲಿಗೆ ಸಮೀಪದ ಬಾಳೆಬೈಲಿನಲ್ಲಿರುವ ಸಿದ್ದೇಶ್ವರ ಗುಡ್ಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಇದನ್ನು ನಂದಿಸಲು ಹರಸಾಹಸ ಪಡಲಾಗುತ್ತಿದೆ.
ಸಿದ್ದೇಶ್ವರ ಗುಡ್ಡಕ್ಕೆ ಯಾರೋ ಕಿಡಿಗೇಡಿಗಳು ಬೀಡಿ ಅಥವಾ ಸಿಗರೇಟ್ ಸೇದಿ ಹಾಕಿರುವ ಸಂಶಯ ಕಂಡು ಬಂದಿದೆ. ಇದರ ಕಾರಣದಿಂದ ಮಧ್ಯಾಹ್ನ ಏಕಾಏಕಿ ಬೆಂಕಿ ಹತ್ತಿಕೊಂಡಿದ್ದು ಬೆಂಕಿ ನಂದಿಸಲು ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಸಿದ್ದೇಶ್ವರ ಸಮಿತಿಯ ಯುವಕರು ಹರಸಾಹಸ ಪಡುತ್ತಿದ್ದಾರೆ.
ಪುರಾಣ ಪ್ರಸಿದ್ಧ ಸಿದ್ದೇಶ್ವರ ಸ್ವಾಮಿಯ ದೇವಸ್ಥಾನದ ಸಮೀಪ ಬೆಂಕಿ ಹತ್ತಿದ್ದು ಬಿಸಿಲಿನ ತಾಪಕ್ಕೆ ಬೆಂಕಿ ಪೂರ್ಣ ಆವರಿಸಿಕೊಂಡಿದೆ. ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದು ಬಿಸಿಲಿನ ಹಾಗೂ ಮೇಲ್ಭಾಗದಲ್ಲಿ ಇರುವ ಗಾಳಿಯ ರಭಸಕ್ಕೆ ಬೆಂಕಿ ಹತ್ತಿ ಉರಿಯುತ್ತಿದೆ.
ಸ್ಥಳದಲ್ಲಿ ಅಗ್ನಿಶಾಮಕ ದಳ ಸಿಬ್ಬಂದಿಗಳು ಹಾಗೂ ಸಿದ್ದೇಶ್ವರ ಸಮಿತಿಯ ಯುವಕರು ಬೆಂಕಿ ನಂದಿಸುವ ಪ್ರಯತ್ನ ಮಾಡುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















