ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಮತಕ್ಷೇತ್ರ ತೀರ್ಥಹಳ್ಳಿಯ ನೆರಟುರು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ, ಬಹಳ ದಿನಗಳ ಬೇಡಿಕೆಯಾದ ಮೊಬೈಲ್ ಟವರ್ ಅನ್ನು, ಮಂಜೂರು ಮಾಡಿಸಿ ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಇಂದು ಲೋಕಾರ್ಪಣೆಗೊಳಿಸಿದರು.
ಟವರ್ ಇಲ್ಲದ ಕಾರಣ ಸುಮಾರು ಏಳರಿಂದ ಎಂಟು ಕಿಮೀ ವ್ಯಾಪ್ತಿಯಲ್ಲಿ ಬರುವ ಗ್ರಾಮಗಳ ಜನತೆ ಎದುರಿಸುತ್ತಿದ್ದ ಮೊಬೈಲ್ ನೆಟ್ವರ್ಕ್ ಸಮಸ್ಯೆ ಪರಿಹಾರವಾಗಿದ್ದು, ಸಮಸ್ಯೆಗೆ ಪರಿಹಾರ ಒದಗಿಸಿದ ಸಚಿವರಿಗೆ, ಗ್ರಾಮಸ್ಥರು, ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು.

Also read: 75 ನೇ ಸ್ವಾತಂತ್ರೋತ್ಸವ ಅಂಗವಾಗಿ ವನ ಮಹೋತ್ಸವ, ಆರೋಗ್ಯ ತಪಾಸಣೆ ಕಾರ್ಯಕ್ರಮ
ಕಳೆದ ನಾಲ್ಕು ವರ್ಷದಲ್ಲಿ, ನೆರಟುರು ಪಂಚಾಯ್ತಿ ವ್ಯಾಪ್ತಿಯಲ್ಲಿ ಸುಮಾರು 6.8 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮಂಜೂರಾಗಿದ್ದು, ಎಲ್ಲಾ ಕಾಮಗಾರಿಗಳು ಪೂರ್ಣಗೊಂಡಿವೆ. ಈ ಮೂಲಕ ಗ್ರಾಮಸ್ಥರು ನಮ್ಮ ಮೇಲೆ ಇರಿಸಿದ ವಿಶ್ವಾಸಕ್ಕೆ ಋಣಿಯಾಗಿದ್ದೇನೆ ಹಾಗೂ ಅದನ್ನು ತೀರಿಸಲು ಕತಿಬದ್ದನಾಗಿದ್ದೇನೆ ಎಂದು ಸಚಿವರು ತಿಳಿಸಿದರು.

ಗ್ರಾಮ ಪಂಚಾಯತ್ ಅಧ್ಯಕ್ಷೆ ಸವಿತಾ ಸತೀಶ್, ಟಿಎಪಿಎಂಸಿ ಅಧ್ಯಕ್ಷ ನಾಗರಾಜ ಶೆಟ್ಟಿ, ಬಿಜೆಪಿ ನಾಯಕ ಸಿಬಿ ಈಶ್ವರ್ ಒಳಗೊಂಡಂತೆ ಇತರ ಗಣ್ಯರೂ ಉಪಸ್ಥಿತರಿದ್ದರು.










Discussion about this post