ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತೀರ್ಥಹಳ್ಳಿಯಲ್ಲಿ ಎನ್‌ಐಎ #NIA ವಿಚಾರಣೆಗೆ ಸಂಬಂಧಪಟ್ಟಂತೆ ರಾಜಕೀಯ ಪಕ್ಷವೊಂದರ ನಗರ ಘಟಕದ ಮುಖಂಡನನ್ನು ಕರೆದಿರುವುದಾಗಿ ತಿಳಿದು ಬಂದಿದ್ದು ತೀವ್ರ ಕುತೂಹಲ ಮೂಡಿಸಿದೆ.
ಇತ್ತೀಚೆಗೆ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ದಾಳಿಯ #Rameshwaram Cafe Blast ಪ್ರಕರಣಕ್ಕೆ ಸಂಬಂಧಿಸಿದಂತೆ 10 ದಿನಗಳ ಹಿಂದೆ ಬೆಳ್ಳಂಬೆಳಿಗ್ಗೆ ಎನ್’ಐಎ ಹಲವು ಮನೆ ಹಾಗೂ ಅಂಗಡಿಗಳ ಮೇಲೆ ದಾಳಿ ನಡೆಸಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಅದರ ಬೆನ್ನಲ್ಲೆ ತೀರ್ಥಹಳ್ಳಿಯ ರಾಜಕೀಯ ಘಟಕದ ಮುಖಂಡನನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ತಿಳಿದು ಬಂದಿದೆ.
Also read: ಸಹ್ಯಾದ್ರಿ ನಾರಾಯಣ ಆಸ್ಪತ್ರೆಯಲ್ಲಿ ಯುನಿಕಾಂಡಿಲಾರ್ ಶಸ್ತ್ರಚಿಕಿತ್ಸೆ ಯಶಸ್ವಿ | ಏನಿದರ ವಿಶೇಷತೆ?
ಈ ಹಿಂದೆ ಮೊಬೈಲ್ ಅಂಗಡಿಯ ಇಬ್ಬರು ಯುವಕರನ್ನ ವಿಚಾರಣೆ ನಡೆಸಿದ್ದ ಎನ್‌ಐಎ ತಂಡ ಈ ಹುಡುಗರ ಜೊತೆ ನಗರ ಘಟಕನ ಜೊತೆ ಸಂಪರ್ಕ ಇದ್ದ ಕಾರಣ ವಿಚಾರಣೆಗೆ ಒಳಪಡಿಸಿರಬಹುದು ಎಂದು ಹೇಳಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post