ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪಿಕಪ್ ವಾಹನ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ, ಸ್ಥಳದಲ್ಲೇ ಇಬ್ಬರು ಮೃತಪಟ್ಟ ಘಟನೆ ಆಗುಂಬೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತೀರ್ಥಹಳ್ಳಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಎದುರಿನಿಂದ ಬರುತ್ತಿದ್ದ ಪಿಕಪ್ ನಡುವೆ ಆಗುಂಬೆ ವ್ಯಾಪ್ತಿಯ ಬಿದರಗೋಡು ಸಮೀಪದ ಅಗಸರ ಕೋಣೆಯ ಬಳಿ ಮಂಗಳವಾರ ಮಧ್ಯಾಹ್ನ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಸ್ಥಳದಲ್ಲೇ ಬೈಕ್ ನಲ್ಲಿದ್ದ ಒಬ್ಬ ಹಾಗೂ ಪಿಕಪ್ ನಲ್ಲಿದ್ದ ಮತ್ತೋರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Also read: ರಾಜ್ಯದ ಆರು ರಂಗಾಯಣಗಳಿಗೆ ನಿರ್ದೇಶಕರ ನೇಮಕ: ಸಚಿವ ಶಿವರಾಜ ತಂಗಡಗಿ ಘೋಷಣೆ
ಅತೀ ವೇಗದ ಚಾಲನೆಯಿಂದ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗುತ್ತಿದ್ದು, ಮೃತಪಟ್ಟವರು ಅಗಸರಕೋಣೆಯ ಶರತ್ ಹಾಗೂ ಮತ್ತೊಬ್ಬನನ್ನು ಕೇರಳ ಮೂಲದ ಸಂತೋಷ್ ಎಂದು ಗುರುತಿಸಲಾಗಿದೆ.
ಘಟನೆಯ ಬಳಿಕ ಪಿಕಪ್ ವಾಹನದ ಚಾಲಕ ಪರಾರಿಯಾಗಿದ್ದಾನೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post