ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ದ್ವಿತೀಯ ಪಿಯುಸಿ ಫಲಿತಾಂಶ #SecondPUCResult ಪ್ರಕಟಗೊಂಡಿದ್ದು, ತಾಲೂಕಿನ ಆರಗದ ಮರಗಳಲೆಯ ಹರ್ಷಿತ್ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಉಡುಪಿಯ #Udupi ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಫಲಿತಾಂಶದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಗಳಿಸಿದ್ದಾನೆ.
ಹರ್ಷಿತ್, ತೀರ್ಥಹಳ್ಳಿ #Thirthahalli ತಾಲೂಕಿನ ಆರಗದ ಮರಗಳಲೆಯ ಹರೀಶ್ ಮತ್ತು ಲತಾ ದಂಪತಿಗಳ ಪುತ್ರ.
ಪ್ರೌಢಶಾಲಾ ವಿದ್ಯಾಭ್ಯಾಸವನ್ನು ತೀರ್ಥಹಳ್ಳಿಯ ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗದಲ್ಲಿ 8ರಿಂದ 10ನೇ ತರಗತಿವರೆಗೆ ವಿದ್ಯಾಭ್ಯಾಸ ಮಾಡಿ ಉಡುಪಿಯ ಪೂರ್ಣಪ್ರಜ್ಞ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















