ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಧರ್ಮಸ್ಥಳದಲ್ಲಿ #Dharmasthala ಶವಗಳನ್ನು ಹೂತ್ತಿಟ್ಟಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಹಾಗೂ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತೀರ್ಥಹಳ್ಳಿ ಜನತೆ ಸಿಡಿದೆದ್ದಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ತೀರ್ಥಹಳ್ಳಿಯ ಎಪಿಎಂಸಿ ಯಾರ್ಡ್’ನಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ‍್ಯಾಲಿ ನಡೆಸಲಾಗುತ್ತಿದ್ದು, ತಾಲೂಕಿನ ಸಾವಿರಾರು ಭಕ್ತರು ಪಾಲ್ಗೊಂಡಿದ್ದಾರೆ.
ಧರ್ಮಸ್ಥಳ ಭಕ್ತಾಧಿಗಳ ವೇದಿಕೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಭಕ್ತರು ಶ್ರೀಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೃಹತ್ ಜನಾಗ್ರಹ ಸಭೆ ಎಂಬ ಹೆಸರಿನಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ #Araga Gnanendra ಹಾಗೂ ಕಾಂಗ್ರೆಸ್ ಮುಖಂಡ ಆರ್. ಎಂ. ಮಂಜುನಾಥ್ ಗೌಡ ಹಾಗೂ ಹಿಂದು ಸಂಘಟನೆಯ ಮುಖಂಡ ಸಪ್ಪುಗುಡ್ಡೆ ರಾಘವೇಂದ್ರ ಭಾಗಿಯಾಗಿದ್ದಾರೆ.
ಹಿಂದುಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಮೇಲೆ ಕಳಂಕ ತರಲು ಈ ರೀತಿ ಮಾಡಲಾಗುತ್ತಿದೆ. ಇದರ ಹಿಂದೆ ಒಳಸಂಚು ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ.
ತೀರ್ಥಹಳ್ಳಿಯ ತಾಲೂಕು ಕಚೇರಿ ಮುಂಭಾಗ ಬೃಹತ್ ಪ್ರತಿಭಟನಾ ಸಭೆ ನಡೆಸಲು ತಯಾರಿ ನಡೆದಿದ್ದು, ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ವಸಂತ್ ಗಿಳಿಯಾರ್ ದಿಕ್ಸೂಚಿ ಭಾಷಣ ಮಾಡಲಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post