ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಇಲ್ಲಿನ ತುಡಕಿ ಬಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಬಡ ಕೂಲಿ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬಸ್ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಮೃತ ಕೂಲಿ ಕಾರ್ಮಿಕನನ್ನು ಬಳಗಟ್ಟೆ ಪೂರ್ಣೇಶ್ ಎಂದು ಗುರುತಿಸಲಾಗಿದೆ. ಬಸ್ಸಿನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದ್ದು, ಜೆಸಿ ಆಸ್ಪತ್ರೆಯಲ್ಲಿ ಗಾಯಾಳುಗಳುಗಳಿಗೆ ಚಿಕಿತ್ಸೆ ನೀಡಲಾಗಿದೆ.

Also read: ಮತ್ತೂರು | ಪಟ್ಟಾಭಿರಾಮ್, ಭಾನುಪ್ರಕಾಶ್ ನಿವಾಸಕ್ಕೆ ವಿಜಯೇಂದ್ರ ಭೇಟಿ | ಮಹತ್ವದ ಚರ್ಚೆ
ಕಾರಿನಲ್ಲಿ ತೀರ್ಥಹಳ್ಳಿ ಮಲೆನಾಡು ಕೆಟರಸ್ ಮಾಲೀಕರದ್ದ ಅಡುಗೆ ಕಾಂಟ್ರಾಕ್ಟರ್ ಬಳಗಟ್ಟೆ ಶಾಂತಪ್ಪ ಅವರು ಶಿವಮೊಗ್ಗಕ್ಕೆ ತೆರಳುತ್ತಿದ್ದರು. ದುರಾದೃಷ್ಟವಶಾತ್ ಕಾರಿನಲ್ಲಿದ್ದ ಬಳಗಟ್ಟೆ ಪೂರ್ಣೇಶ್(45) ಅಪಘಾತದಲ್ಲಿ ಸಾವನಪ್ಪಿದ್ದಾರೆ.
ಅಪಘಾತ ಸಂದರ್ಭದಲ್ಲಿ ಸ್ಥಳೀಯರು ಗಾಯಾಳುಗಳ ನೆರವಿಗೆ ಧಾವಿಸಿದ್ದು ತೀರ್ಥಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.











Discussion about this post