ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ತಾಲೂಕಿನ ಕಟ್ಟೆಹಕ್ಕಲು ಗ್ರಾಮದಲ್ಲಿ ನಡೆದಿದ್ದ ಜಾನುವಾರು ಕಳ್ಳತನ ಪ್ರಕರಣಕ್ಕೆ #Cattle theft case ಸಂಬಂಧಪಟ್ಟಂತೆ ತೀರ್ಥಹಳ್ಳಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.
ಜನವರಿ 25ರಂದು ಮುಂಜಾನೆ ಕಟ್ಟೆಹಕ್ಕಲು ಸರ್ಕಲ್ ಬಳಿ ತುಂಬ್ರಿಮನೆಯ ದೇವರಾಜ ಅವರಿಗೆ ಸೇರಿದ ಹಸುವನ್ನು ವಧೆ ಮಾಡಿ ಮಾಂಸ ಮಾರಾಟ ಮಾಡುವ ಉದ್ದೇಶದಿಂದ ದುಷ್ಕರ್ಮಿಗಳು ಅಪಹರಿಸಿ ಕಾರಿನಲ್ಲಿ ಸಾಗಿಸಿದ್ದರು.
ಘಟನೆಗೆ ಸಂಬಂಧಪಟ್ಟಂತೆ ಹಸುವಿನ ಮಾಲೀಕರು ಜನವರಿ 27ರಂದು ದೂರು ದಾಖಲಿಸಿದ ಬೆನ್ನಲ್ಲೇ ಪೊಲೀಸರು ತನಿಖೆ ಚುರುಕುಗೊಳಿಸಿದ್ದರು. ವಿಶೇಷ ಕಾರ್ಯಾಚರಣೆಯ ಮೂಲಕ ಮೂವರು ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ್ದ ವಾಹನವನ್ನು ಜಪ್ತಿ ಮಾಡಲಾಗಿದೆ.
ಬಂಧಿತರನ್ನು ಶಿವಮೊಗ್ಗದ ಆರ್.ಎಂ.ಎಲ್ ನಗರದ ಮುಬಾರಕ್ (25), ಟಿಪ್ಪುನಗರದ ಅಹ್ಮದ್ ಬೇಗ್ (25) ಮತ್ತು ಮುಕ್ರಮ ವುಲ್ಲಾ (21) ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾದ ಅಂದಾಜು 2 ಲಕ್ಷ ರೂಪಾಯಿ ಮೌಲ್ಯದ ರಿಡ್ಜ್ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















