ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಇಲ್ಲಿನ ಬಾಳೆಬೈಲ್ ಪದವಿ ಕಾಲೇಜಿನ ವಿದ್ಯಾರ್ಥಿನಿ ಅಧೀಕ್ಷಾ (20) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬಾಳೆಬೈಲ್ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಅಧೀಕ್ಷಾ, ಬಿಳುಕೊಪ್ಪದ ತಮ್ಮ ಮನೆಯಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಇಂದು ಬೆಳಗ್ಗೆ ಮಗಳು ಹೊರಗೆ ಬರದಿದ್ದಾಗ ಈ ಘಟನೆ ಬೆಳಕಿಗೆ ಬಂದಿದೆ.
Also read: ಶೃಂಗೇರಿ ಶ್ರೀಗಳು ರಾಮಲಲ್ಲಾ ಪ್ರಾಣಪ್ರತಿಷ್ಠೆಗೆ ಹೋಗುತ್ತಾರಾ? ಆಡಳಿತಾಧಿಕಾರಿ ಮಹತ್ವದ ಸ್ಪಷ್ಟನೆ
ಜಯಚಾಮರಾಜೇಂದ್ರ ಆಸ್ಪತ್ರೆಯಲ್ಲಿ ಶವವನ್ನು ಇರಿಸಲಾಗಿದ್ದು ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post