ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಯಡೂರು ಸಮೀಪ ಮತ್ತಿಗ ಬಳಿ ಮೀನು ಹಿಡಿಯಲು ಹೋಗಿ ವಾಪಾಸ್ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪಲ್ಟಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿತ್ತು. ಅದರಲ್ಲಿ ಓರ್ವ ಸಾವನ್ನಪ್ಪಿದ್ದ. ಮತ್ತೊರ್ವ ಕೂಡ ಚಿಕಿತ್ಸೆ ಫಲಕಾರಿ ಆಗದೇ ಮಂಗಳವಾರ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.
ಜೂನ್ 26 ರಂದು ತೀರ್ಥಹಳ್ಳಿಯಿಂದ ಐವರು ಮೀನು ಹಿಡಿಯಲು ಕಾರಿನಲ್ಲಿ ಹೋಗಿದ್ದರು. ವಾಪಾಸ್ ಬರುವಾಗ ಕಾರು ಪಲ್ಟಿಯಾಗಿ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿತ್ತು. ಅಪಘಾತ ಆದ ದಿನವೇ ಅತಿಶಯ (23) ಎಂಬ ಯುವಕ ಮೃತಪಟ್ಟಿದ್ದ. ಮತ್ತೊಬ್ಬನ ಸ್ಥಿತಿ ಗಂಭೀರವಾಗಿತ್ತು.
Also read: ಭದ್ರಾ ನದಿಯ ಅರ್ಭಟ | ಭದ್ರಾವತಿಯಲ್ಲಿ ಹಲವು ಕಡೆ ಪ್ರವಾಹ ಭೀತಿ | ಬಿಎಚ್ ರಸ್ತೆವರೆಗೂ ನೀರು

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 











Discussion about this post