ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪುನರ್ವಸು ಮಳೆಯ #Punarwasu rain ಅಬ್ಬರಕ್ಕೆ ಜನಜೀವನ ಅಸ್ತವ್ಯಸ್ತಗೊಂಡಿದೆ. ತುಂಗಾ ನದಿ #Tunga river ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದ್ದು ಪುರಾಣ ಪ್ರಸಿದ್ಧ ರಾಮಮಂಟಪ ಮುಳುಗಡೆಗೆ ಕೆಲವೇ ಅಡಿಗಳು ಬಾಕಿ ಇದೆ.
ಮುನ್ನೆಚ್ಚರಿಕಾ ಕ್ರಮವಾಗಿ ಈಗಾಗಲೇ ಇಂದು ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೂ ರಜೆ ನೀಡಲಾಗಿದ್ದು, ನದಿ ಭಾಗದ ಜನತೆ ಎಚ್ಚರ ವಹಿಸುವುದು ಅಗತ್ಯವಾಗಿದೆ. ಇನ್ನು ತುಂಬಿ ಹರಿಯುತ್ತಿರುವ ನದಿಯನ್ನು ನೋಡಲು ಸಾವಿರಾರು ಮಂದಿ ಬರುವ ಸಾಧ್ಯತೆ ಇದ್ದು ಸ್ಥಳದಲ್ಲಿ ಪೊಲೀಸ್ ವ್ಯವಸ್ಥೆ ಹಾಗೂ ಬ್ಯಾರಿಕೇಡ್ ಅಳವಡಿಕೆ ಮಾಡುವುದು ಸೂಕ್ತವಾಗಿದೆ.
Also read: ಪಂಚಾಯ್ತಿ ಸದಸ್ಯರ ಗೌರವ ಧನ ಹೆಚ್ಚಳ, ಆರೋಗ್ಯ ಸೌಲಭ್ಯ ಕಲ್ಪಿಸಿ: ಸದನದಲ್ಲಿ ಶಾಸಕ ಅರುಣ್ ಒತ್ತಾಯ
ಹೀಗೆ ಮಳೆ ಮುಂದುವರೆದರೆ ಹಲವಾರು ರಸ್ತೆಗಳು ಬಂದ್ ಆಗುವ ಸಾಧ್ಯತೆ ಹೆಚ್ಚಿದೆ. ಈಗಾಗಲೇ ತೀರ್ಥಹಳ್ಳಿಯ ಕುರುವಳ್ಳಿ – ಬಾಳೆಬೈಲು ಸಂಪರ್ಕಿಸುವ ಬೈಪಾಸ್ ರಸ್ತೆಯಲ್ಲಿ ಗುಡ್ಡ ಕುಸಿಯುವ ಭೀತಿ ಉಂಟಾಗಿದ್ದು ತಾತ್ಕಾಲಿಕವಾಗಿ ರಸ್ತೆ ಬಂದ್ ಮಾಡಲಾಗಿದೆ.
ಹಳ್ಳ ಕೊಳ್ಳಗಳಲ್ಲಿ ನೀರಿನ ಮಟ್ಟ ಹೆಚ್ಚಾಗಿದ್ದು ಪೋಷಕರು ಮಕ್ಕಳ ಬಗ್ಗೆ ಜಾಗ್ರತೆ ವಹಿಸುವುದು ಅಗತ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post