ಕಲ್ಪ ಮೀಡಿಯಾ ಹೌಸ್
ತೀರ್ಥಹಳ್ಳಿ: ಗೋ ಮಾಂಸ ತುಂಬಿದ ವಾಹನವನ್ನು ತಾಲ್ಲೂಕಿನ ಆಗುಂಬೆ ಬಳಿಯಲ್ಲಿ ಪೊಲೀಸರು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿರುವ ಘಟನೆ ನಡೆದಿದೆ.
ಮೈ-ಮನಗಳನ್ನು ರೋಮಾಂಚನಗೊಳಿಸುವ ಈ ದೇಶ ಭಕ್ತಿ ಗೀತೆಯನ್ನೊಮ್ಮೆ ನೋಡಿ
ಶಿವಮೊಗ್ಗದಿಂದ ಮಂಗಳೂರಿಗೆ ಗೋಮಾಂಸ ಸಾಗಿಸುತ್ತಿದ್ದ ಇರ್ಷಾದ್ ಬಿನ್ ಮುಸ್ತಫಾ ಕಂಕನಾಡಿ ಹಾಗೂ ದೇರಳಕಟ್ಟೆಯ ಇಮ್ತಿಯಾಜ್ ಬಿನ್ ಹಸನಬ್ಬ ಎಂಬುವವರನ್ನು ತೀರ್ಥಹಳ್ಳಿ ತಾಲೂಕು ಆಗುಂಬೆ ಅರಣ್ಯ ಇಲಾಖೆ ತಪಾಸಣಾ ಕೇಂದ್ರದಲ್ಲಿ ಬಂಧಿಸಲಾಗಿದೆ.
ತರಕಾರಿ ತುಂಬಿದ ವಾಹನದಲ್ಲಿ ಸುಮಾರು 250 ರಿಂದ 300 ಕೆಜಿ ಗೋಮಾಂಸ ಇರಬಹುದು ಎಂದು ಅಂದಾಜಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಾರ್ಯಕರ್ತರ ನೀಡಿದ ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನವನ್ನು ವಶಪಡಿಸಿಕೊಂಡಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
ಆಗುಂಬೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post