ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ನಂತರ ಪೊಲೀಸರು ತಮ್ಮ ಕಸ್ಟಡಿಗೆ ಪಡೆದಿದ್ದಾರೆ.
ನಕ್ಸಲ್ ಹೋರಾಟದ ಪ್ರಕರಣಗಳ ತನಿಖೆ ಶಿವಮೊಗ್ಗದಲ್ಲಿ ಮತ್ತಷ್ಟು ಚುರುಕುಗೊಂಡಿದ್ದು ನಕ್ಸಲ್ ಹೋರಾಟದ ಕೇಸ್ ಸಂಬಂಧ ಕಾನೂನು ಪ್ರಕ್ರಿಯೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ.
ಇದೇ ಹಿನ್ನೆಲೆಯಲ್ಲಿ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕಳೆದ ತಿಂಗಳು ಕೋರ್ಟ್’ಗೆ ಹಾಜರು ಪಡಿಸಿದ್ದರು. ಇದರ ಬೆನ್ನಲ್ಲೇ, ಆಗುಂಬೆ ಠಾಣೆಯ ಪ್ರಕರಣದಲ್ಲಿ ಆರೋಪಿಯಾಗಿರುವ ಶ್ರೀಮತಿಯನ್ನು ತನಿಖೆ ನಡೆಸುವ ಸಲುವಾಗಿ ಕಸ್ಟಡಿಗೆ ಪಡೆಯಲಾಗಿದೆ.
Also read: ಕಾಲೇಜಿಗೆ ತೆರಳುತ್ತಿದ್ದ ಮೂವರು ವಿದ್ಯಾರ್ಥಿನಿಯರ ಮೇಲೆ ಆಸಿಡ್ ದಾಳಿ
ಬೆಳಿಗ್ಗೆ 10.30 ಕ್ಕೆ ತೀರ್ಥಹಳ್ಳಿ ಜೆಎಂಎಫ್ ಸಿ ಕೋರ್ಟ್’ಗೆ ಹಾಜರು ಪಡಿಸಿದ್ದಾರೆ. ಆಗುಂಬೆ ಠಾಣೆ ಕೇಸ್ ಸಂಬಂಧ ಕೋರ್ಟ್’ಗೆ ಹಾಜರು ಪಡಿಸಿದ್ದು ನಕ್ಸಲ್ ಶ್ರೀಮತಿಯನ್ನು ಬಾಡಿ ವಾರೆಂಟ್ ಮೇಲೆ ಕರತರಲಾಗಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post