ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಪಟ್ಟಣ ಪಂಚಾಯತ್ ನಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಯುವಕ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿದ್ದಾನೆ.
ಪ್ರಶಾಂತ್ (30 ವರ್ಷ) ಮೃತಪಟ್ಟ ಯುವಕ. ಕುಟುಂಬ ಸಮಸ್ಯೆಯಿಂದಾಗಿ ಮನನೊಂದು ವಿಷ ಸೇವಿಸಿದ್ದಾನೆ ಎಂದು ತಿಳಿದುಬಂದಿದೆ.
ಮದ್ಯಪಾನಕ್ಕೆ ವಿಷ ಬೆರೆಸಿಕೊಂಡು ಸೇವಿಸಿದ್ದು ನಂತರ ಸ್ನೇಹಿತರಿಗೆ ತಿಳಿಸಿದ್ದಾನೆ. ತಕ್ಷಣವೇ ಆತನನ್ನು ಜೆಸಿ ಆಸ್ಪತ್ರೆ ನಂತರ ಮೆಗ್ಗಾನ್ ಆಸ್ಪತ್ರೆ ಹಾಗೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು.
ಪ್ರಶಾಂತ್ ಅವರ ನಿಧನಕ್ಕೆ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post