ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ರಸ್ತೆ ದುಸ್ಥಿತಿಯ ಕುರಿತಾಗಿ ಹಲವು ಬಾರಿ ಶಾಸಕರು ಹಾಗೂ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ರೀತಿಯ ಪರಿಹಾರ ದೊರೆಯದ ಹಿನ್ನೆಲೆಯಲ್ಲಿ ತಾಲೂಕಿನ ಬೆಜ್ಜವಳ್ಳಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಲವು ಕಡೆಗಳಲ್ಲಿ ಮತದಾನ ಬಹಿಷ್ಕಾರಕ್ಕೆ ಗ್ರಾಮಸ್ಥರು ಮುಂದಾಗಿದ್ದಾರೆ.
ತಾಲೂಕಿನ ಬೆಜ್ಜವಳ್ಳಿ ಗ್ರಾಮಪಂಚಾಯ್ತಿ ವ್ಯಾಪ್ತಿಯ ಉದಯಪುರ, ಬಚ್ಚಿನ ಕೊಡುಗೆ, ಕಿಕ್ಕೇರಿ ಗ್ರಾಮದ ರಸ್ತೆಯ ಪರಿಸ್ಥಿತಿಯ ಬಗ್ಗೆ ಶಾಸಕರು ಸೇರಿದಂತೆ ಹಲವು ಅಧಿಕಾರಿಗಳ ಗಮನಕ್ಕೆ ತಂದರೂ ಕೂಡ ಇಲ್ಲಿಯವರೆಗೆ ಯಾವುದೇ ರೀತಿಯ ಪರಿಹಾರವನ್ನು ಕೊಡದ ಕಾರಣ ಲೋಕಸಭಾ ಚುನಾವಣೆಗೆ ಮತದಾನ ಬಹಿಷ್ಕಾರ ಮಾಡುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

Also read: ನನ್ನದಲ್ಲದ ತಪ್ಪಿಗೆ ಮನೆ ಸುಟ್ಟರು | ಬಿಜೆಪಿ ಸೇರಿದ ಅಖಂಡ ಶ್ರೀನಿವಾಸಮೂರ್ತಿ ಮನದಾಳದ ಮಾತು
ಅದೇ ರೀತಿ ಅಕ್ಕಪಕ್ಕದ ಊರಿನ ರಸ್ತೆಯ ನಿರ್ಮಾಣವನ್ನು ನೋಡಿದರೆ ದ್ವೇಷದ ರಾಜಕಾರಣ ನಡೆಯುತ್ತಿರಬಹುದು ಎಂಬ ಶಂಕೆ ವ್ಯಕ್ತಪಡಿಸಿರುವ ಗ್ರಾಮಸ್ಥರು 40 ವರ್ಷಗಳ ರಸ್ತೆಯ ಬೇಡಿಕೆಯು ಬೇಡಿಕೆ ಆಗಿಯೇ ಉಳಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post