ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ನಾನು ಯಾವುದೇ ರೀತಿಯ ಅಧ್ಯಕ್ಷ ಸ್ಥಾನ ಕೇಳಿರಲಿಲ್ಲ. ಆದರೆ, ನನ್ನನ್ನು ಗೌರವಿಸಿ, ಪ್ರೀತಿಯಿಂದ ನೀಡಿರುವ ಅಧ್ಯಕ್ಷ ಸ್ಥಾನವನ್ನು ಸಮರ್ಥವಾಗಿ ನಿಭಾಯಿಸುತ್ತೇನೆ ಎಂದು ಕರ್ನಾಟಕ ಗೃಹ ಮಂಡಳಿಗೆ ನೂತನ ಅಧ್ಯಕ್ಷರಾಗಿ ನಿಯೋಜನೆಗೊಂಡಿರುವ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಈ ಕುರಿತಂತೆ ಮಾತನಾಡಿದ ಅವರು, ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಯಾವುದೇ ರೀತಿಯ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆ ಇಟ್ಟಿರಲಿಲ್ಲ. ಆದರೆ, ಪಕ್ಷ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ನನಗೆ ಗೌರವ ನೀಡಿ, ಪ್ರೀತಿನಿಂದ ನೀಡಿರುವ ಈ ಜವಾಬ್ದಾರಿಯನ್ನು ಒಪ್ಪಿಕೊಂಡು, ಸಮರ್ಥವಾಗಿ ನಿರ್ವಹಿಸುತ್ತೇನೆ ಎಂದರು.

ಪಕ್ಷ ಹಾಗೂ ಮುಖ್ಯಮಂತ್ರಿಗಳ ಮೇಲಿರುವ ಒತ್ತಡವನ್ನು ನಾನು ಅರ್ಥ ಮಾಡಿಕೊಳ್ಳುತ್ತೇನೆ. ಹೀಗಾಗಿ, ಯಡಿಯೂರಪ್ಪನವರು ಹಾಗೂ ಸರ್ಕಾರಕ್ಕೆ ಮುಜುಗರ ತರುವಂತೆ ಯಾವುದೇ ರೀತಿಯ ಕಾರ್ಯಗಳನ್ನು ನಾನು ಮಾಡುವುದಿಲ್ಲ ಎಂದರು.
Get In Touch With Us info@kalpa.news Whatsapp: 9481252093
















