ಕಲ್ಪ ಮೀಡಿಯಾ ಹೌಸ್ | ತಿರುಮಲ |
ತಿರುಮಲ, ತಿರುಪತಿ ದೇವಾಲಯದಲ್ಲಿ #Tirumala, Tirupati Temple ಕೆಲಸ ನಿರ್ವಹಿಸುತ್ತಿರುವ ಹಿಂದುಯೇತರ ಸಿಬ್ಬಂದಿಗಳ ವಿಚಾರದಲ್ಲಿ ಹೊಸದಾಗಿ ರಚನೆಯಾಗಿರುವ ಟಿಟಿಡಿ ಟ್ರಸ್ಟ್ ಮಹತ್ವದ ಐತಿಹಾಸಿಕ ನಿರ್ಧಾರ ಕೈಗೊಂಡಿದೆ.
ಹೌದು… ನೂತನ ಸಮಿತಿ ಮೊದಲ ಬಾರಿಗೆ ಸಭೆ ನಡೆಸಿ ಹಲವು ಮಹತ್ವದ ನಿರ್ಧಾರ ಕೈಗೊಂಡಿದೆ.

Also read: ನಟಿ ಕರೀನಾ ಕಪೂರ್ ಬಗ್ಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಆರೋಪವೇನು?
ಈ ಕುರಿತಂತೆ ಮಾತನಾಡಿರುವ ಟಿಟಿಡಿ ಬೋರ್ಡ್ ಅಧ್ಯಕ್ಷ ಬಿ.ಆರ್. ನಾಯ್ಡು, ಇನ್ನು, ವಿಶಾಖ ಶಾರದಾ ಪೀಠಕ್ಕೆ ನೀಡಿರುವ ಜಮೀನಿನ ಗುತ್ತಿಗೆಯನ್ನು ರದ್ದುಪಡಿಸುವುದು, ಪ್ರತಿ ತಿಂಗಳ ಮೊದಲ ಮಂಗಳವಾರದAದು ಸ್ಥಳೀಯ ಜನರಿಗೆ ದರ್ಶನ ನೀಡುವುದು ಸೇರಿದಂತೆ ಹಲವು ನಿರ್ಧಾರಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.
ಟಿಟಿಡಿಯೊಂದಿಗೆ ಕೆಲಸ ಮಾಡುವ ಇತರ ಧರ್ಮದ ನೌಕರರೊಂದಿಗೆ ಸಮಾಲೋಚನೆ ನಡೆಸಲು ಮಂಡಳಿಯು ನಿರ್ಧಾರ ತೆಗೆದುಕೊಂಡಿದೆ ಎಂದರು.

ಅವರನ್ನು ಬೇರೆ ಬೇರೆ ಇಲಾಖೆಗಳಲ್ಲಿ ಸೇರಿಸಿಕೊಳ್ಳಲು ಅಥವಾ ಅವರಿಗೆ ಸ್ವಯಂ ನಿವೃತ್ತಿ ಯೋಜನೆ ನೀಡಲು ನಾವು ಸರ್ಕಾರಕ್ಕೆ ಪತ್ರ ಬರೆಯುತ್ತೇವೆ ಎಂದು ತಿಳಿಸಿದ್ದಾರೆ.
ಇನ್ನು, ಕೇವಲ 2 ರಿಂದ 3 ಗಂಟೆಯೊಳಗೆ ಸಾಮಾನ್ಯ ಭಕ್ತರು ದೇವರ ದರ್ಶನ ಪಡೆಯುವಂತೆ ಬದಲಾವಣೆ ತರಲು ಎಐ ಮತ್ತು ಆಧುನಿಕ ತಂತ್ರಜ್ಞಾನ ಬಳಸಲು ಕ್ರಮಕೈಗೊಳ್ಳಲಾಗಿದೆ.
ಕಂಪಾರ್ಟ್ಮೆಂಟ್’ಗಳಲ್ಲಿ ಭಕ್ತರಿಗೆ ತೊಂದರೆ, ಕಿರಿಕಿರಿ ಉಂಟಾಗದಂತೆ ದರ್ಶನ ಲಭ್ಯವಾಗಲು ಈ ಯೋಜನೆ ರೂಪಿಸಲಾಗಿದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post