ಕಲ್ಪ ಮೀಡಿಯಾ ಹೌಸ್ | ತಿರುವನಂತಪುರ |
ಸಾರ್ವಜನಿಕ ಮಹಿಳಾ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಆರೋಪದಡಿಯಲ್ಲಿ ಸ್ಥಳೀಯ ಕಾಂಗ್ರೆಸ್ ಮುಖಂಡನನ್ನು ಬಂಧಿಸಿರುವ ಘಟನೆ ತಿರುವನಂತಪುರದಲ್ಲಿ ನಡೆದಿದೆ.
ಯೂತ್ ಕಾಂಗ್ರೆಸ್ ಪುನಲೂರ ಬ್ಲಾಕ್‌ನ ಪ್ರಧಾನ ಕಾರ್ಯದರ್ಶಿ ಆಶಿಕ್ ಬದರುದ್ದೀನ್ (30) ಬಂಧಿತ ಆರೋಪಿಯಾಗಿದ್ದು, ತಿರುವನಂತಪುರದ ಬಾಲಕಿಯರ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.
Also read: ಮದರಸಾದ ಸಮೀಕ್ಷೆಗೆ ತೆರಳಿದ್ದ ಶಿಕ್ಷಕನ ಮೇಲೆ ಹಲ್ಲೆ: ಘಟನೆ ನಡೆದಿದ್ದೇಲ್ಲಿ?
ಆರೋಪಿಯನ್ನು ಬಂಧಿಸಿ ನ್ಯಾಯಾಲಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿದೆ. ಪೊಲೀಸರು ಆರೋಪಿಯ ಮೊಬೈಲ್ ವಶಕ್ಕೆ ಪಡೆದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

























