ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಬಳಸುತ್ತಿದ್ದ ಮೊಬೈಲ್ ಸ್ಪೋಟಗೊಂಡು 8 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿರುವ ಘಟನೆ ಕೇರಳದಲ್ಲಿ ನಡೆದಿದೆ.
ಇಲ್ಲಿನ ತಿರುವಿಲ್ವಾಮಲದಲ್ಲಿ ಈ ಘಟನೆ ನಡೆದಿದ್ದು, ಮೃತ ಬಾಲಕಿಯನ್ನು ಆದಿತ್ಯಶ್ರೀ ಎಂದು ಗುರುತಿಸಲಾಗಿದೆ.
ಈ ಬಾಲಕಿ ರಾತ್ರಿ ಮೊಬೈಲ್’ನಲ್ಲಿ ವೀಡಿಯೋ ವೀಕ್ಷಿಸುತ್ತಿದ್ದಳು. ಈ ವೇಳೆ ಮೊಬೈಲ್ ಏಕಾಏಕಿ ಸ್ಪೋಟಗೊಂಡಿದ್ದು, ತೀವ್ರವಾಗಿ ಗಾಯಗೊಂಡ ಆಕೆಯನ್ನು ತತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೂ, ಚಿಕಿತ್ಸೆ ಫಲಕಾರಿಯಾಗದೇ ಆಕೆ ಕೊನೆಯುಸಿರೆಳೆದಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post