ಕಲ್ಪ ಮೀಡಿಯಾ ಹೌಸ್ | ತಿರುವನಂತಪುರಂ |
ಪ್ರಧಾನಿ ನರೇಂದ್ರ ಮೋದಿ PM Narendra Modi ಅವರು ಚಾಲನೆ ನೀಡಿದ್ದ ಕೇರಳದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಒಂದು ಕೋಚ್‌ನ ವಿಂಡ್‌ಶೀಲ್ಡ್ ಹಾನಿಯಾಗಿರುವ ಘಟನೆ ನಡೆದಿದೆ.
ದಕ್ಷಿಣ ರೈಲ್ವೆ ಅಧಿಕಾರಿಗಳ ಪ್ರಕಾರ, ರೈಲು ತಿರುನಾವಯ ಮತ್ತು ತಿರೂರ್ ನಡುವೆ ಸಂಚರಿಸುತ್ತಿದ್ದಾಗ ಕಲ್ಲು ತೂರಾಟ ನಡೆದಿದೆ. ಈ ರೈಲು ಕಾಸರಗೋಡಿನಿಂದ ತಿರುವನಂತಪುರಕ್ಕೆ ತೆರಳುತ್ತಿತ್ತು. ಘಟನೆಯಲ್ಲಿ ಯಾರೂ ಗಾಯಗೊಂಡಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ದಕ್ಷಿಣ ರೈಲ್ವೇ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post