ಕಲ್ಪ ಮೀಡಿಯಾ ಹೌಸ್ | ತಿರುವನಂತಪುರ |
ಕಾರ್ಯಕ್ರಮವೊಂದರ ವೇದಿಕೆಯ ಮೇಲೆ ಹಾಡುತ್ತಲೇ ಎಡವ ಬಶೀರ್(೮೭) ಎಂಬ ಗಾಯಕ ಕುಸಿದು ಬಿದ್ದು, ಸಾವನ್ನಪ್ಪಿರುವ ಘಟನೆ ನಡೆದಿದೆ.

ಕೇರಳ ಆರ್ಕೆಸ್ಟ್ರಾಗಳಲ್ಲಿ ಜನಪ್ರಿಯವಾಗಿರುವ ಬಶೀರ್ ಸಾವನ್ನಪ್ಪಿದ್ದಾರೆ. ಅಲಪ್ಪುಳ ಜಿಲ್ಲೆಯಲ್ಲಿ ಬ್ಲೂ ಡೈಮಂಡ್ಸ್ ಆರ್ಕೆಸ್ಟ್ರಾದ ಗೋಲ್ಡನ್ ಜುಬಿಲಿ ಸಮಾರಂಭ ಆಯೋಜಿಸಲಾಗಿತ್ತು. ಈ ವೇಳೆ ೧೯೭೮ರಲ್ಲಿ ಬಿಡುಗಡೆಯಾದ ಹಿಂದಿ ಚಲನಚಿತ್ರ ಟೂಟ್ ಟಾಯ್ಸ್ ಪ್ರಸಿದ್ಧ ಭಾರತೀಯ ಗಾಯಕ ಕೆಜೆ ಯೇಸುದಾಸ್ ಅವರ ಮಾನ ಹೋ ತುಮ್ ಬೇಹದ್ ಹಸೀನ್ ಹಾಡನ್ನು ಹಾಡುವಾಗ ಬಶೀರ್ ಕುಸಿದುಬಿದ್ದಿದ್ದಾರೆ.

ಹಾಡುತ್ತಲೇ ಸುಸ್ತಾದ ಅವರು ಕೆಳಕ್ಕೆ ಕುಳಿತುಕೊಳ್ಳಲು ಪ್ರಯತ್ನಿಸುವ ವೇಳೆ ಕುಸಿದು ಬಿದ್ದಿದ್ದಾರೆ. ತತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















