No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಅಂಕಣ ಡಾ.ಗುರುರಾಜ ಪೋಶೆಟ್ಟಿಹಳ್ಳಿ

72 ಸಾವಿರ ನಾಡಿಗಳನ್ನು ಶುದ್ಧಿ ಮಾಡುವ ಅಲೌಖಿಕ ಶಕ್ತಿ ಈ ಸ್ತೋತ್ರಕ್ಕಿದೆ

ಭೀಷ್ಮರು ಹೇಳಿದ ಆ ಮಂತ್ರ ಇಲ್ಲಿದೆ ನೋಡಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 23, 2020
in ಡಾ.ಗುರುರಾಜ ಪೋಶೆಟ್ಟಿಹಳ್ಳಿ
0
72 ಸಾವಿರ ನಾಡಿಗಳನ್ನು ಶುದ್ಧಿ ಮಾಡುವ ಅಲೌಖಿಕ ಶಕ್ತಿ ಈ ಸ್ತೋತ್ರಕ್ಕಿದೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ವಿಷ್ಣು ಸಹಸ್ರನಾಮವೇ ಯಾಕೆ?
ಒಬ್ಬೊಬ್ಬ ದೇವತೆಯ ಉಪಾಸನೆ ಮಾಡಿದರೆ ಒಂದೊಂದು ಫಲ. ಬೃಹಸ್ಪತಿ ಆರಾಧನೆಯಿಂದ ಬ್ರಹ್ಮವರ್ಚಸ್ಸು, ಇಂದ್ರನ ಆರಾಧನೆಯಿಂದ ಇಂದ್ರಿಯ ಪಾಟವ, ದಕ್ಷಪ್ರಜಾಪತಿಗಳ ಆರಾಧನೆಯಿಂದ ಪ್ರಜಾಸಂಪತ್ತು, ಸತ್ಸಂತಾನ, ಮಹಾಲಕ್ಷ್ಮೀ ಉಪಾಸನೆಯಿಂದ ಐಶ್ವರ್ಯ, ಅಗ್ನಿಯಿಂದ ತೇಜಸ್ಸು, ವಸುಗಳಿಂದ ಸಂಪತ್ತು, ಅದಿತಿಯಿಂದ ಅನ್ನಾಹಾರ, ದೇವತೆಗಳಿಂದ ಸ್ವರ್ಗಪ್ರಾಪ್ತಿ, ವಿಶ್ವೇದೇವತೆಗಳಿಂದ ಭೂಸಂಪತ್ತು, ಅಶ್ವಿನಿದೇವತೆಗಳಿಂದ ಆಯುರ್ವೃದ್ಧಿ, ಗಂಧರ್ವರಿಂದ ಸ್ಪುರದ್ರೂಪ, ಸೌಂದರ್ಯ, ಊರ್ವಶಿಯಿಂದ ಸ್ತ್ರೀವಿಹಾರ, ಯಜ್ಞದಿಂದ ಕೀರ್ತಿ, ಈಶ್ವರನಿಂದ ವಿದ್ಯೆ ಹಾಗೂ ಒಳ್ಳೆಮನೋಭಾವ, ಗೌರೀಪೂಜೆಯಿಂದ ಅನ್ಯೋನ್ಯತೆ, ಸುಖದಾಂಪತ್ಯ, ಪಿತೃಗಳಿಂದ ಸಂತತಿ ವೃದ್ಧಿ ಹೀಗೆ ಒಬ್ಬೊಬ್ಬ ದೇವತೆಯಿಂದ ಒಂದೊಂದು ಸಿದ್ಧಿಯಾದರೆ, ವಿಷ್ಣುಸಹಸ್ರನಾಮ ಪಾರಾಯಣದ ಮೂಲಕ ಮಹಾವಿಷ್ಣುವಿನ ಉಪಾಸನೆ ಮಾಡಿದರೆ ಈ ಎಲ್ಲ ಸಿದ್ಧಿಗಳೂ ಒಟ್ಟಿಗೆ ಸುಲಭವಾಗಿ ಲಭಿಸುವುದು.

ಪಾರಾಯಣ ಎಂದರೆ…
ವಿಷ್ಣುಸಹಸ್ರನಾಮ ಪಾರಾಯಣ ಮಾಡುವವರು ಅದರಲ್ಲೇ ಪರಾಯಣರಾಗಿ ಪಾರಾಯಣ ಮಾಡಬೇಕು. ಪರಾಯಣ ಎಂದರೆ ಪರಮಾತ್ಮನಲ್ಲಿ ಮುಳುಗಿರಬೇಕು.

ಅವನೇ ಮತಿ, ಅವನೇ ಗತಿ, ಪರಮಾನಂದ ಸ್ಥಿತಿ ಎಂಬ ಅನುಭವ ಬರಬೇಕು. ಸಾಮೂಹಿಕ ಪಾರಾಯಣ ಆಗುವಾಗ ಸಹಸ್ರನಾಮದಲ್ಲಿನ ನಾಮಮಂತ್ರ ತರಂಗಗಳು ಸುತ್ತಲಿನ ವಾತಾವರಣವನ್ನು ಶುದ್ಧಿಗೊಳಿಸುತ್ತ ಹೃದಯದಲ್ಲಿ ದೈವಿಕ ಆನಂದದ ಅನುಭವ ತರುತ್ತವೆ. ಮನಸ್ಸಿಗೆ ಶಾಂತಿ, ನೆಮ್ಮದಿ, ಆನಂದ ದೊರಕುತ್ತದೆ.

ಹಬ್ಬ, ವ್ರತ, ಉತ್ಸವಗಳಲ್ಲಿ ವಿಶೇಷವಾಗಿ ಪಾರಾಯಣ ಮಾಡಲಾಗುತ್ತದೆ. ಭೀಷ್ಮ ಏಕಾದಶಿ, ವೈಕುಂಠ ಏಕಾದಶಿ, ಪ್ರಥಮ ಏಕಾದಶಿ ದಿನಗಳು ಪಾರಾಯಣಕ್ಕೆ ಪ್ರಶಸ್ತವಾದ ದಿನಗಳು.


ಪಾರಾಯಣ ಮಾಡುವಾಗ ಪೂರ್ವ ಅಥವಾ ಉತ್ತರಾಭಿಮುಖವಾಗಿ ಮಾಡಬೇಕು. ಸಾಮೂಹಿಕ ಅಥವಾ ಕುಟುಂಬದವರೆಲ್ಲ ಒಟ್ಟಿಗೆ ಕುಳಿತು ಪಾರಾಯಣ ಮಾಡಿದರೆ ಹೆಚ್ಚಿನ ಅನುಗ್ರಹವಿರುತ್ತದೆ. ಆತ್ಮಸುಖ, ಯೋಗಕ್ಷೇಮ, ಭಾಗ್ಯಸೌಭಾಗ್ಯ, ಧೈರ್ಯ, ಆತ್ಮಸ್ಥೈರ್ಯ, ಸ್ಮರಣಶಕ್ತಿ, ಸ್ಪುರಣಶಕ್ತಿ, ಮೇಧಾಶಕ್ತಿ ಹಾಗೂ ಕೀರ್ತಿಗಳನ್ನು ತಂದುಕೊಡುತ್ತದೆ.

ಸಾಡೇಸಾತ್- ಶನಿಕಾಟ-ವಿಷ್ಣುಸಹಸ್ರನಾಮದವರಿಗೆ ಇರುವುದಿಲ್ಲ. ಎಲ್ಲ ತಾಪತ್ರಯ ಪರಿಹಾರಕ, ಇಷ್ಟಪ್ರದ, ಅನಿಷ್ಟ ನಿವಾರಕ ಪವಿತ್ರ ಸಹಸ್ರನಾಮವೆಂದೇ ಇದು ವಿಶಿಷ್ಟವಾಗಿದೆ.

ಸ್ವರ ತರಂಗಗಳ ಪ್ರಭಾವ
ಬೃಹತೀಸಹಸ್ರ ಶಾಸ್ತ್ರಗ್ರಂಥವು ಋಗ್ವೇದದ ಒಂದುಸಾವಿರ ಋಕ್ಗಳ ಒಂದು ಸುಂದರಹಾರ. ಬೃಹತೀ ಛಂದಸ್ಸಿನಲ್ಲಿ ಪ್ರತಿಸ್ತೋತ್ರದಲ್ಲಿಯೂ ಮೂವತ್ತಾರು ಸ್ವರಾಕ್ಷರ ಹಾಗೂ ಮೂವತ್ತಾರು ವ್ಯಂಜನಾಕ್ಷರ ಇರುತ್ತದೆ. ಎಂದರೆ ಪ್ರತಿಸ್ತೋತ್ರದಲ್ಲಿ 72 ಅಕ್ಷರಗಳು.

ಒಂದು ಸಾವಿರ ಸ್ತೋತ್ರಗಳಲ್ಲಿ 72 ಸಾವಿರ ಅಕ್ಷರಗಳು. ಬೃಹತೀ ಸಹಸ್ರದ ವ್ಯಾಖ್ಯೇಯವೇ ವಿಷ್ಣುಸಹಸ್ರನಾಮ ಸ್ತೋತ್ರ. ವಿಷ್ಣುಸಹಸ್ರನಾಮ 72 ಸಾವಿರ ನಾಡಿಗಳನ್ನು ಸಂಸ್ಕಾರ ಮಾಡಿ ನಾಡೀಶುದ್ಧಿ, ದೇಹಶುದ್ಧಿ, ಮನಶುದ್ಧಿ ಮಾಡುತ್ತದೆ.


ಸಂವಿಧಾನ
ಈ ಮಹಾಮಂತ್ರದ ದೈವ ಮಹಾವಿಷ್ಣು, ಇದನ್ನು ನೀಡಿದ ಋಷಿ ವೇದವ್ಯಾಸರು, ಇದರ ಛಂದಸ್ಸು ಅನುಷ್ಟುಪ್, ಈ ಮಂತ್ರದ ಬೀಜಭಾಗ ಅಮೃತಾಂಶೂದ್ಭವೋ ಭಾನುಃ ಸ್ತೋತ್ರ, ಈ ಮಂತ್ರದ ಮಹಾಶಕ್ತಿ ದೇವಕೀನಂದನಃ ಸ್ರಷ್ಟಾ ಸ್ತೋತ್ರ. ಇದರ ಪರಮಮಂತ್ರ ಉದ್ಭವಃ ಕ್ಷೋಭಣೋ ದೇವಃ ಸ್ತೋತ್ರ, ಈ ಮಂತ್ರದ ಅನಾವರಣ ಭಾಗ ಶಂಖಭೃತ್ ನಂದಕೀ ಚಕ್ರೀ ಸ್ತೋತ್ರ. ಈ ಮಂತ್ರದ ಅಸ್ತ್ರಭಾಗ ಶಾಂಗಧನ್ವಾ ಗದಾಧರಃ ಸ್ತೋತ್ರ, ಈ ಮಂತ್ರದ ಜಾಗೃತಿಭಾಗ ರಥಾಂಗಪಾಣಿಃ ಅಕ್ಷೋಭ್ಯ ಇದರ ಕವಚ ಭಾಗ ತ್ರಿಸಾಮಾಸಾಮಗಸಾಮ. ಇಡೀ ಮಂತ್ರದ ಮೂಲಪ್ರೇರಣೆ ಆನಂದಂ ಪರಬ್ರಹ್ಮ.ಈ ಮಂತ್ರದ ಪಹರೆ ಋತುಃ ಸುದರ್ಶನಃ ಕಾಲ ಸ್ತೋತ್ರ. ವಿಷ್ಣುವೇ ಜಗದೊಡೆಯ ಎಂಬುವುದೇ ಧ್ಯಾನ. ಇದರ ಪಠಣ, ಜಪ, ಪಾರಾಯಣವು ವಿಷ್ಣು ಪ್ರೇರಣೆಯಿಂದಾಗಿದ್ದು, ಅದರಿಂದ ವಿಷ್ಣುಪ್ರೀತನಾಗಲಿ, ಎಂಬ ಭಾವನೆಯೇ ಇದರ ಪ್ರಯೋಜನ.

ಸಕಲ ಪುರುಷಾರ್ಥ ಸಿದ್ಧಿ
ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ, ಇಡೀ ಜಗತ್ತಿನ ದೈವ ಯಾವುದು? ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ಶ್ರೇಯಸ್ಸಾಗುತ್ತದೆ? ಸಮಸ್ತ ಧರ್ಮಗಳಲ್ಲಿ ಶ್ರೇಷ್ಠ ಧರ್ಮ ಯಾವುದು? ಯಾರ ಜಪ ಮಾಡುವುದರಿಂದ ಸಂಸಾರಚಕ್ರದ ಬಂಧನದಿಂದ, ಜನನ-ಮರಣಗಳ ಚಕ್ರದಿಂದ ಮುಕ್ತರಾಗಬಹುದು? ಈ ಎಲ್ಲ ಪ್ರಶ್ನೆಗಳಿಗೂ ಭೀಷ್ಮಾಚಾರ್ಯರು ಒಂದೇ ಉತ್ತರ ಹೇಳುತ್ತಾರೆ ಜಗತ್ಪ್ರಭುವೂ, ದೇವದೇವನೂ, ಅನಂತನೂ, ಪುರುಷೋತ್ತಮನೂ ಆದ ಮಹಾವಿಷ್ಣುವನ್ನು ವಿಷ್ಣುಸಹಸ್ರನಾಮದ ಮೂಲಕ ಸ್ತುತಿ ಮಾಡುವ ಎಲ್ಲರೂ ಸರ್ವದುಃಖಗಳಿಂದ ಪಾರಾಗುತ್ತಾರೆ. ಅಷ್ಟೇ ಅಲ್ಲ, ಅಂತಹವರು ನಿರಂತರವಾಗಿ ಪ್ರಗತಿಯ, ಅಭ್ಯುದಯದ, ಯಶಸ್ಸಿನ ಹಾದಿಯಲ್ಲಿ ಇರುತ್ತಾರೆ. ಮಂತ್ರದ್ರಷ್ಟ್ರಾರರಾದ ಋಷಿಮುನಿಗಳಿಂದ ಪರಿಪರಿಯಾಗಿ ಸ್ತುತಿಸಲ್ಪಟ್ಟ ಈ ವಿಷ್ಣುಸಹಸ್ರನಾಮದ ಪಾರಾಯಣದಿಂದ ಎಲ್ಲ ಪುರುಷಾರ್ಥಗಳೂ ಸಿದ್ಧಿಯಾಗುತ್ತವೆ.

ಜಪಗಳಲ್ಲಿ ಸರ್ವಶ್ರೇಷ್ಠ
ವಿಷ್ಣುಸಹಸ್ರನಾಮದಲ್ಲಿ ‘ಧರ್ಮರಾಜ ಕಿಂ ಜಪನ್ ಮುಚ್ಯತೇ ಜಂತುಃ ಜನ್ಮ ಸಂಸಾರಬಂಧನಾತ್’ ಎಂದು ಕೇಳಿದ ಪ್ರಶ್ನೆಗೆ ಜಪಗಳಲ್ಲಿ ವಿಷ್ಣುಸಹಸ್ರನಾಮ ಜಪಶ್ರೇಷ್ಠ ಎಂದು ಭೀಷ್ಮರು ಉತ್ತರಿಸಿದ್ದಾರೆ. ವಿಷ್ಣುಸಹಸ್ರನಾಮ ಪಾರಾಯಣ ಮಾಡುವಾಗ ನಾಮಮಂತ್ರ ತರಂಗಗಳು ಪರಿಸರ ಶುದ್ಧಿಮಾಡಿ, ಅಪೂರ್ವ ಸನ್ನಿಧಾನ ನಿರ್ಮಾಣ ಮಾಡುತ್ತವೆ.

ಹನ್ನೊಂದರ ಮಹತ್ವ
ಧರ್ಮ, ಭಕ್ತಿ, ಜ್ಞಾನ, ಪ್ರಜ್ಞೆ, ಮೇಧಾಶಕ್ತಿ, ಧೃತಿ, ಸ್ಥಿತಿ, ಬಲ, ಶ್ರವಣ, ಮನನ, ಶೀಲ, ವಿನಯ, ವಿದ್ಯೆ, ನೆಮ್ಮದಿ, ಮನಶ್ಶಾಂತಿ ಇವಿಷ್ಟು ವಿಷ್ಣುಸಹಸ್ರನಾಮದ ಚಕ್ರದಿಂದ ಎಂದರೆ ಹನ್ನೊಂದು ದಿನ ಪ್ರತಿದಿನ 11 ಬಾರಿ ಪಾರಾಯಣ ಮಾಡುವುದರಿಂದ ಲಭ್ಯವಾಗುತ್ತವೆ. ಹನ್ನೊಂದು ಚಕ್ರ ಮುಗಿಸಿದವರಿಗೆ ಪುನರ್ಜನ್ಮ ಇಲ್ಲ. ವಿಷ್ಣುಸಹಸ್ರನಾಮ ಇದು, ಪವಿತ್ರಕ್ಕೆ ಪವಿತ್ರ, ಮಂಗಳಕ್ಕೆ ಮಂಗಳ, ಇದನ್ನು ಪಾರಾಯಣ ಮಾಡುವವರ ಮನೆ, ಮನ ಪಾವನವಾಗುತ್ತದೆ.

ವಿಷ್ಣು ಸಹಸ್ರನಾಮ ಚಕ್ರ
ಯಾರು ವಿಷ್ಣುಸಹಸ್ರನಾಮ ಹೇಳುವರೋ, ಕೇಳುವರೋ ಅಂತಹವರಿಗೆ ಇಹದಲ್ಲಿ, ಪರದಲ್ಲಿ ಎಂದಿಗೂ ಅಶುಭ, ಅಮಂಗಳವೆನ್ನುವುದೇ ಇಲ್ಲ. ಇದರ ಪಾರಾಯಣದಿಂದ ಯಶಸ್ಸು, ಶ್ರೇಯಸ್ಸು, ಲಭ್ಯ. ಎಲ್ಲ ತಾಪತ್ರಯ, ಭಯಗಳೂ ನಿವಾರಣೆಯಾಗುತ್ತವೆ. ಆರೋಗ್ಯ, ಕಾಂತಿ, ಬಲ, ಸೌಂದರ್ಯ, ಹೆಚ್ಚುತ್ತದೆ. ಅಂತಃಕರಣ ಶುದ್ಧವಾಗುತ್ತದೆ.

ಶ್ರದ್ಧೆ ಭಕ್ತಿಯಿಂದ ವಿಷ್ಣು ಸಹಸ್ರನಾಮಚಕ್ರ ಪೂರೈಸಿದವರು ಸುಖ, ಕ್ಷಮೆ, ಸಂಪತ್ತು, ಧೈರ್ಯ, ಸ್ಮೃತಿ, ಕೀರ್ತಿಗಳನ್ನು ಹೊಂದುತ್ತಾರೆ. ಶೀಘ್ರದಲ್ಲಿ ಎಲ್ಲ ನೋವು, ಸಂಕಟಗಳಿಂದ ಪಾರಾಗುತ್ತಾರೆ. ಶಾಂತಿ, ಸಮಾಧಾನ, ಧ್ಯಾನ, ನೆಮ್ಮದಿ, ದಯೆ, ತ್ಯಾಗ ಪ್ರೇಮ ಅವರಿಗೆ ಲಭಿಸುತ್ತವೆ. ವಿಷ್ಣುಸಹಸ್ರನಾಮ ಸರ್ವಶಾಸ್ತ್ರಗಳ ಸಾರ, ಸಾರೋದ್ಧಾರ. ಒಂದೊಂದು ನಾಮಕ್ಕೂ ನೂರು ನೂರು ಅರ್ಥಗಳು. ಭಗವಂತನ ಸಾವಿರ ರೂಪಗಳ ಸಾವಿರನಾಮಗಳೇ ವಿಷ್ಣುಸಹಸ್ರನಾಮ. ಅದು ಬೃಹತೀಸಹಸ್ರದ ಸಾರ.

ಮೈ ರೋಮಾಂಚನಗೊಳ್ಳುವ ಈ ಸಣ್ಣ ಕತೆಯನ್ನೊಮ್ಮೆ ಪೂರ್ತಿ ಓದಿ.. ಭೀಷ್ಮರು ಹೇಳಿದ ಆ ಮಂತ್ರ ಇಲ್ಲಿದೆ ನೋಡಿ..

ಮನುಷ್ಯನ ಆಯಸ್ಸು ನೂರು ವರ್ಷ.ಈ ನೂರು ವರ್ಷಗಳಲ್ಲಿ 36 ಸಾವಿರ ಹಗಲು ಮತ್ತು 36 ಸಾವಿರ ರಾತ್ರಿಗಳಿವೆ. ಮನುಷ್ಯ ದೇಹ 72 ಸಾವಿರ ನಾಡಿಗಳಿಂದಾಗಿದೆ. ಈ ನಾಡಿಗಳಲ್ಲಿ 36 ಸಾವಿರ ನಾಡಿಗಳು ಎಡ ಭಾಗದಲ್ಲೂ ಮತ್ತು 36 ಸಾವಿರ ನಾಡಿಗಳು ನಮ್ಮಬಲಭಾಗಲ್ಲೂ ಇರುತ್ತವೆ. ಈ ನಾಡಿಗಳಲ್ಲಿ ರಕ್ತ ಸಂಚಾರ ಸರಿಯಾಗಿ ಆದರೆ ಮನುಷ್ಯನಿಗೆ ಯಾವುದೇ ರೋಗ ಬರಲಾರದು.

ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ..

ವಿಷ್ಣುಸಹಸ್ರನಾಮವನ್ನು ಪಠಿಸುವುದರಿಂದ ನಾವು ಬ್ರಹತೀಸಹಸ್ರದ 72 ಸಾವಿರ ಅಕ್ಷರಗಳನ್ನು ಜಪಿಸಿದಂತಾಗುತ್ತದೆ. ಇದರಿಂದ ನಮ್ಮ 72 ಸಾವಿರ ನಾಡಿಗಳಲ್ಲಿ ಪೂರ್ಣಪ್ರಮಾಣದ ರಕ್ತ ಸಂಚಾರವಾಗುತ್ತದೆ. ಆದ್ದರಿಂದ ವಿಷ್ಣುಸಹಸ್ರನಾಮ ಭವರೋಗ ಪರಿಹಾರಕ. ಆದರೆ ಅರ್ಥ ತಿಳಿದು ಹೃದಯತುಂಬಿ ಭಕ್ತಿಯಿಂದ ಪಾರಾಯಣ ಮಾಡುವುದು ಮುಖ್ಯ.

ವೇದಗಳಿಗೆ ಕನಿಷ್ಠ 3 ಅರ್ಥಗಳಿವೆ, ಮಹಾಭಾರತ ಶ್ಲೋಕಗಳಿಗೆ ಕನಿಷ್ಠ 10 ಅರ್ಥಗಳಿದ್ದರೆ, ಶ್ರೀ ವಿಷ್ಣು ಸಹಸ್ರನಾಮದ ಪ್ರತೀ ನಾಮಕ್ಕೆ ಕನಿಷ್ಠ ನೂರು ಅರ್ಥಗಳಿವೆ. ಈ ಕಾರಣಕ್ಕಾಗಿಯೇ ಪ್ರಾಚೀನರು ಭಗವದ್ಗೀತೆ ಮತ್ತು ಶ್ರೀ ವಿಷ್ಣುಸಹಸ್ರನಾಮವನ್ನು ಅತ್ಯಮೂಲ್ಯ ಗ್ರಂಥವಾಗಿ ಪರಿಗಣಿಸಿದ್ದಾರೆ. ವೇದಗಳ ಸಾರವಾದ ಬ್ರಹತೀಸಹಸ್ರದಲ್ಲಿ ಒಂದು ಸಾವಿರ ಮಂತ್ರಗಳಿವೆ, ಹಾಗೂ ಈ ಒಂದು ಸಾವಿರ ಮಂತ್ರದಲ್ಲಿ 72 ,000 ಅಕ್ಷರಗಳಿವೆ. ಈ ಒಂದು ಸಾವಿರ ಮಂತ್ರಗಳ ಸಾರವನ್ನು ಒಂದು ಸಾವಿರ ನಾಮಗಳ ರೂಪದಲ್ಲಿ ವೇದವ್ಯಾಸರು ನಮಗೆ ಕರುಣಿಸಿದ್ದಾರೆ.

ಶರಪಂಜರದ ಮೇಲೆ ಮಲಗಿದ್ದ ಭೀಷ್ಮರನ್ನು ಧರ್ಮರಾಜ ಕೇಳುತ್ತಾನೆ ‘ಇಡೀ ಜಗತ್ತಿನ ದೈವ ? ಯಾರ ಸ್ತುತಿ, ಕೀರ್ತನೆ, ಅರ್ಚನೆಯಿಂದ ನಮಗೆ ಶ್ರೇಯಸ್ಸಾಗುತ್ತದೆ ? ಸಮಸ್ತ ಧರ್ಮಗಳಲ್ಲಿ ಶ್ರೇಷ್ಠ ಧರ್ಮ ಯಾವುದು? ಯಾರ ಜಪ ಮಾಡುವುದರಿಂದ ಸಮಸ್ತ ಪಾಪ ಜನನ-ಮರಣಗಳ ಚಕ್ರದಿಂದ ಮುಕ್ತರಾಗಬಹುದು’? ಈ ಎಲ್ಲ ಪ್ರಶ್ನೆಗಳಿಗೂ ಭೀಷ್ಮಾಚಾರ್ಯರು ಶ್ರೀ ವಿಷ್ಣು ಸಹಸ್ರನಾಮವೆಂದು ಒಂದೇ ಉತ್ತರ ಹೇಳುತ್ತಾರೆ. ಅದಕ್ಕೆ ತಮ್ಮ ಜೀವನದ ಪ್ರಸಂಗವೊಂದನ್ನು ಈ ರೀತಿಯಾಗಿ ವಿವರಿಸುತ್ತಾರೆ.

ನಿಮ್ಮನ್ನು ನಾಶಮಾಡಲೆಂದೇ ದುರ್ಯೋಧನನು ಅರಗಿನ ಅರಮನೆಯಲ್ಲಿ ಅವರು ಉಳಿಯುವಂತೆ ಮಾಡಿ ರಾತ್ರಿಯಲ್ಲಿ ಅದಕ್ಕೆ ಬೆಂಕಿ ಇಡಿಸಿದ್ದ. ಆದರೆ ವಿದುರನ ದೂರದೃಷ್ಟಿ ನಿಮ್ಮನ್ನೇನೋ ಮೃತ್ಯುದವಡೆಯಿಂದ ಪಾರಾಗಿಸಿತ್ತು. ನಿಮಗೆ ಏನು ಆಗಿಲ್ಲವೆಂದು

ತಿಳಿದು ಎಲ್ಲಕ್ಕಿಂತ ಹೆಚ್ಚು ಸಂತೋಷವಾಗಿದ್ದು ನನಗೆ ಸಂತೋಷವಿರಲಿ ದುಃಖವಿರಲಿ ಅದನ್ನು ತಾಯಿ ಗಂಗಾ ಮಾತೆಯೊಡನೆ ಹಂಚಿಕೊಳ್ಳುವುದು ನನಗೆ ಅತ್ಯಂತ ಖುಷಿಯ ಸಂಗತಿಯಾಗಿತ್ತು.

ಹೀಗೇ ಒಂದು ಮುಂಜಾನೆ ಕೈಯಲ್ಲೊಂದು ಊರುಗೋಲು ಹಿಡಿದು ತಾಯಿ ಮಡಿಲೆಡೆಗೆ ಸಾಗುತ್ತಿದ್ದ ನನಗೆ ಮನಸಿನ ತುಂಬಾ ನೀವುಗಳೆ ಆವರಿಸಿಬಿಟ್ಟಿದ್ದಿರಿ . ನೀವು ಅನುಭವಿಸಿದ ಕಷ್ಟಕ್ಕೆ ಮರುಗುತ್ತ ಹೆಜ್ಜೆಹಾಕುತ್ತಿದ್ದ ನಾನು ಊರಿ ನಡೆಯುತ್ತಿದ್ದ ಕೋಲಿನ ತುದಿಗೆ ಆಕಸ್ಮಿಕವಾಗಿ ಓತಿಕ್ಯಾತವೊಂದು ಸಿಲುಕಿ ನರಳಿತು..

ತನ್ನ ಆಲೋಚನಾಸರಣಿಗೆ ಭಂಗವಾಗಿದ್ದಕ್ಕೆ ಗೊಣಗಿದ ನಾನು ಕೋಲಿಗೆ ಸಿಲುಕಿದ ಆ ಓತಿಕ್ಯಾತವನ್ನು ಬೀಸಿ ಎಸೆದು ಮುಂದೆ ನಡೆದರು. ಮುಳ್ಳುಪೊದೆಯ ಮೇಲೆ ಬಿದ್ದ ಅದು ರೋದಿಸುತ್ತ, ‘ಅಯ್ಯಾ! ಮಹಾನುಭಾವರೇ, ಸ್ವಲ್ಪ ನಿಲ್ಲಿ. ನನ್ನನ್ನು ಬೀಸಿ ಎಸೆದು ಸಂಬಂಧವೇ ಇಲ್ಲದಂತೆ ಹೋಗುತ್ತಿದ್ದೀರಲ್ಲ, ಇದು ಸರಿಯೇ?’ ಎಂದಾಗ ನಾನು ‘ಇದರಲ್ಲಿ ನನ್ನದೇನು ತಪ್ಪಿದೆ? ನನ್ನ ಕೋಲಿಗೆ ಸಿಲುಕಿದ್ದು ನೀನೇ ತಾನೆ?!’ಎಂದಾಗ ‘ಹೌದು! ಸಿಲುಕಿದ್ದು ನಾನೇ. ಆದರೆ ನರಳುತ್ತಿದ್ದ ನನ್ನ ಸ್ಥಿತಿಯನ್ನು ನೋಡಿಯೂ ಮುಳ್ಳಿನ ಪೊದೆಯ ಮೇಲೆ ಎಸೆದಿರಲ್ಲ, ಇದು ನೀವು ತಿಳಿದೂ ಮಾಡಿದ ತಪ್ಪಲ್ಲವೇ? ಹಾಗಾಗಿ ನೀವೂ ನಿಮ್ಮ ಅಂತ್ಯಕಾಲಕ್ಕೆ ಶರಶಯ್ಯೆಯಲ್ಲಿ ನನ್ನಂತೆ ನರಳಿ ಸಾಯುವಂತಾಗಲಿ’ ಎಂದು ಶಪಿಸಿತು. ನನಗೆ ಆಗ ನನ್ನ ತಪ್ಪಿನ ಅರಿವಾಗಿತ್ತು. ಕ್ಷಮೆ ಬೇಡುತ್ತ ಆ ಮುಳ್ಳಿನ ಬೇಲಿಯಿಂದ ಓತಿಕ್ಯಾತವನ್ನು ಮೇಲೆತ್ತಿ ಕಾಪಾಡಲು ಧಾವಿಸಿದರು. ಆದರೆ ಕಾಲ ಮಿಂಚಿತ್ತು. ರಕ್ತಸ್ರಾವಗೊಂಡ ಅದು ಅದಾಗಲೇ ಪ್ರಾಣ ಬಿಟ್ಟಿತು!

ಭೀಷ್ಮಾಚಾರ್ಯರಿಗೆ ವಿಷ್ಣುಸಹಸ್ರನಾಮದ ಶಕ್ತಿ ಸ್ವಯಂ ವೇದ್ಯವಾಗಿತ್ತು. ಅವರು ಮೃತ್ಯುವನ್ನೂ ಸಹ ಆ ಶಕ್ತಿಯಿಂದ ದೂರ ಇಟ್ಟಿದ್ದರು. ಅಷ್ಟೇ ಅಲ್ಲ ಅವರ ಭಕ್ತಿಯ ಶಕ್ತಿಯಿಂದ ಶ್ರೀ ಕೃಷ್ಣ ಪರಮಾತ್ಮ ಅವರು ಮಲಗಿದ್ದ ಕಡೆಗೆ ಬಂದು ದರ್ಶನ, ಸ್ಪರ್ಶನ ಭಾಗ್ಯನೀಡಿದ. ಭೀಷ್ಮಾಚಾರ್ಯರು ಹೇಳುತ್ತಾರೆ. ‘ನ ವಾಸುದೇವ ಭಕ್ತಾನಾಮ್ ಅಶುಭಂ ವಿದ್ಯತೇಕ್ಪಚಿತ್’ ಇದನ್ನು ಪಾರಾಯಣ ಮಾಡುವವರು, ಪರಿಹರಿಸಲಾಗದ ಪರಿಪರಿಯ ಕಷ್ಟಗಳಿಂದ ಬಿಡುಗಡೆ ಹೊಂದುತ್ತಾರೆ. ಅಷ್ಟೇ ಅಲ್ಲ, ವಾಸುದೇವನ ಭಕ್ತರಿಗೆ ಅಶುಭವೆಂಬುದೇ ಇರುವುದಿಲ್ಲ. ಅವರಿಗೆ ಅಪಮೃತ್ಯು, ಮರಣ, ಮುಪ್ಪು ಹಾಗೂ ರೋಗಗಳ ಭಯವಿರುವುದಿಲ್ಲ ಎನ್ನುತ್ತಾರೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Dr Gururaj PoshettihalliKannada News WebsiteLatest News KannadaShriVishnuSahasranamamಆಧ್ಯಾತ್ಮಿಕ_ಲೇಖನಡಾ.ಗುರುರಾಜ ಪೋಶೆಟ್ಟಿಹಳ್ಳಿಧಾರ್ಮಿಕ_ಲೇಖನವಿಷ್ಣು ಸಹಸ್ರನಾಮ
Share210Tweet123Send
Previous Post

ಬಿಜೆಪಿಗೆ ಅಧಿಕಾರಕ್ಕಿಂತಲೂ ಸಂಘಟನೆ ಬಲಗೊಳಿಸುವುದು ಮುಖ್ಯ: ಶಾಸಕ ಅಶೋಕ್ ನಾಯ್ಕ

Next Post

ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

ಭಾರತೀಯ ಸಂಸ್ಕೃತಿ ಉಳಿಸಿಕೊಳ್ಳುವ ಪ್ರಯತ್ನವಾಗಲಿ: ಆರಾಧನಾ ಸಮಿತಿ ಅಧ್ಯಕ್ಷ ಮಧುಸೂದನ್ ಅಭಿಮತ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

ಸಂಗೀತವು ಮೋಕ್ಷ ಸಾಧನೆಗೆ ಪೂರಕ | ವಿದುಷಿ ಸತ್ಯವತಿ ಅಭಿಮತ

April 13, 2026
ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

ಶಿಕಾರಿಪುರ | ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಖಾಸಗಿ ಬಸ್ | ಹೇಗಾಯ್ತು ಘಟನೆ?

April 13, 2026
ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

ವೈಚಾರಿಕ‌ ದೀವಿಗೆ ಬೆಳಗಲು ಕುವೆಂಪು ಅವರ ಸಾಹಿತ್ಯದ ಕೊಡುಗೆ ಅಪಾರ: ಎ.ಎನ್. ರಾಮಚಂದ್ರ

April 13, 2026
ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಸಂಗೀತ ಲೋಕದ ಧ್ರುವತಾರೆ, ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ವಿರೋಧಿಸಿ ಏ.16ರಂದು ಬೃಹತ್ ರ್‍ಯಾಲಿ

April 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL