No Result
View All Result
English Articles

Record Budget: Chief Minister Must Fulfill Hometown Demands, Urges Dr. Shushrutha Gowda

by ಕಲ್ಪ ನ್ಯೂಸ್
March 2, 2026
0

Kalpa Media House  |  Mysuru | BJP leader and noted neurologist Dr. Shushrutha Gowda has urged Chief Minister Siddaramaiah to...

Read moreDetails
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
From Complex Revisions to Robotic Spine Care: Narayana Health City Marks 10,000 Surgery Milestone

From Complex Revisions to Robotic Spine Care: Narayana Health City Marks 10,000 Surgery Milestone

February 24, 2026
  • Advertise With Us
  • Grievances
  • About Us
  • Contact Us
Wednesday, March 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯಲ್ಲಿ ಸೇವೆಗಳ ಭಾಗಶಃ ನಿರ್ಬಂಧಕ್ಕೆ ಚಿಂತನೆ: ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
March 23, 2020
in ಶಿವಮೊಗ್ಗ
0
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿ ಹಾಗೂ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅಗತ್ಯ ವಸ್ತುಗಳ ಸೇವೆಯನ್ನು ಹೊರತುಪಡಿಸಿ ಇತರ ಎಲ್ಲಾ ಸೇವೆಗಳನ್ನು ಭಾಗಶಃ ನಿರ್ಬಂಧಿಸಲು ಕ್ರಮ ಕೈಗೊಳ್ಳಲಾಗುವುದು ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ತಿಳಿಸಿದರು.

ಸೋಮವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಹಾಲು, ತರಕಾರಿ, ಔಷಧಿ, ದಿನಸಿ ವಸ್ತುಗಳು ಸೇರಿದಂತೆ ಅಗತ್ಯ ಸೇವೆಗಳ ಅಂಗಡಿ ಮುಂಗಟ್ಟುಗಳನ್ನು ಮಾತ್ರ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ಗಂಟೆಯವರೆಗೆ ತೆರೆಯಲು ಅವಕಾಶ ಮಾಡಲಾಗುವುದು. ಇನ್ನಿತರ ಉತ್ಪಾದನಾ ವಸ್ತುಗಳ ಮಳಿಗೆಗಳನ್ನು ಮಾರ್ಚ್ 31ರವರೆಗೆ ಮುಚ್ಚಲು ಸೂಚಿಸಲಾಗುವುದು. ರಾತ್ರಿ 8ಗಂಟೆಯಿಂದ ಬೆಳಿಗ್ಗೆ 7ಗಂಟೆಯವರೆಗೆ ಬಸ್ ಸೇವೆಯನ್ನು ನಿರ್ಬಂಧಿಸಲಾಗುವುದು. ಸಾರ್ವಜನಿಕರು ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮನೆಯಿಂದ ಹೊರಬರಬೇಕು ಎಂದು ಅವರು ಈ ಸಂದರ್ಭದಲ್ಲಿ ಮನವಿ ಮಾಡಿದರು.

ಕಾರ್ಯಪಡೆ ರಚನೆ
ಕರೋನಾ ವೈರಸ್ ಹರಡುವಿಕೆಯನ್ನು ತಡೆಯಲು ಜಿಲ್ಲೆಯಲ್ಲಿ ಎರಡು ಕಾರ್ಯಪಡೆಗಳನ್ನು ರಚಿಸಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳು, ಚಿಕಿತ್ಸೆ ಪ್ರಕ್ರಿಯೆ ಇತ್ಯಾದಿಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಕಾರ್ಯಪಡೆ ರಚಿಸಲಾಗಿದೆ. ಇದೇ ರೀತಿ ಜಿಲ್ಲಾಡಳಿತಕ್ಕೆ ವೈದ್ಯಕೀಯ ಸಲಹೆಗಳು ಮತ್ತು ನೆರವು ಒದಗಿಸಲು ಖಾಸಗಿ ಆಸ್ಪತ್ರೆಗಳ ಹಿರಿಯ ವೈದ್ಯರನ್ನು ಒಳಗೊಂಡ ಮೆಡಿಕಲ್ ಕಾರ್ಯಪಡೆ ರಚಿಸಲಾಗಿದೆ. ಈ ಕಾರ್ಯಪಡೆ ಪ್ರತಿ ದಿನ ಬೆಳಿಗ್ಗೆ 10 ಗಂಟೆಗೆ ಸಭೆ ಸೇರಿ ಕಾರ್ಯ ಯೋಜನೆ ರೂಪಿಸಲಿದೆ ಎಂದರು.

ಖಾಸಗಿ ಆಸ್ಪತ್ರೆ ಸೌಲಭ್ಯ ಬಳಕೆ
ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯವಿರುವ ವೆಂಟಿಲೇಟರ್ ಸೇರಿದಂತೆ ಎಲ್ಲಾ ವೈದ್ಯಕೀಯ ಸೇವೆಗಳ ವಿವರಗಳನ್ನು ಪಡೆಯಲಾಗಿದ್ದು, ಅಗತ್ಯ ಬಿದ್ದರೆ ಈ ಸೌಲಭ್ಯಗಳನ್ನು ಬಳಸಿಕೊಳ್ಳುವ ಕುರಿತು ಸೂಚನೆ ನೀಡಲಾಗಿದೆ. ಅಗತ್ಯ ಬಿದ್ದರೆ ಖಾಸಗಿ ವೈದ್ಯರ ಸೇವೆಯನ್ನು ಪಡೆಯಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.

ಕೀಟ ನಾಶಕ ಸಿಂಪಡಿಸುವಿಕೆ
ನಗರ ವ್ಯಾಪ್ತಿಯಲ್ಲಿ ಕೀಟನಾಶಕ ಸಿಂಪಡಿಸುವಿಕೆ ಕಾರ್ಯವನ್ನು ನಿರಂತರವಾಗಿ ಮಾಡಬೇಕು. ಬಸ್ ನಿಲ್ದಾಣ, ಬಸ್‍ಗಳಿಗೆ ಸಹ ಕೀಟನಾಶಕ ಸಿಂಪಡಿಸುವಿಕೆ ಪ್ರತಿದಿನ ಮಾಡಲು ಸೂಚನೆ ನೀಡಲಾಗಿದೆ. ಹೂ ಹಣ್ಣು ಸೇರಿದಂತೆ ಎಲ್ಲಾ ಮಾರುಕಟ್ಟೆಗಳಿಗೆ ನಿಗದಿಪಡಿಸಲಾದ ವ್ಯವಹಾರ ಅವಧಿ ಮುಗಿದ ಬಳಿಕ ಸಂಪೂರ್ಣವಾಗಿ ಕೀಟನಾಶಕ ಸಿಂಪಡಿಸುವ ಕಾರ್ಯ ಕೈಗೊಳ್ಳಬೇಕು. ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ದೊಡ್ಡ ಗ್ರಾಮ ಪಂಚಾಯತ್‍ಗಳ ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯವನ್ನು ನಿರಂತರವಾಗಿ ಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.

ಲಾಡ್ಜ್‍ಗಳಿಗೆ ಸೂಚನೆ
ತಮ್ಮಲ್ಲಿಗೆ ಬರುವ ಪ್ರತಿಯೊಬ್ಬರ ಪ್ರಯಾಣ ಇತಿಹಾಸ ಸೇರಿದಂತೆ ಸಮಗ್ರ ವಿವರಗಳನ್ನು ಪಡೆದ ಬಳಿಕ ಮಾತ್ರ ಕೋಣೆ ಒದಗಿಸುವಂತೆ ಎಲ್ಲಾ ಲಾಡ್ಜ್ ಮಾಲಕರಿಗೆ ಸೂಚನೆ ನೀಡಲಾಗಿದೆ. ವಿದೇಶಗಳಿಂದ ಅಥವಾ ಕರೋನಾ ಪೀಡಿತ ಜಿಲ್ಲೆಗಳಿಂದ ಆಗಮಿಸುವವರ ವಿವರಗಳನ್ನು ಸ್ಥಳೀಯ ಆಡಳಿತಕ್ಕೆ ತಕ್ಷಣ ನೀಡಲು ತಿಳಿಸಲಾಗಿದೆ. ಪ್ರತಿಯೊಬ್ಬರು ನೀಡಿರುವ ಮಾಹಿತಿಯನ್ನು ಪರಿಶೀಲಿಸಲಾಗುವುದು ಎಂದು ಅವರು ಹೇಳಿದರು.

ಹಬ್ಬ ಸರಳವಾಗಿ ಆಚರಿಸಿ
ಯುಗಾದಿ ಹಬ್ಬವನ್ನು ಪ್ರತಿಯೊಬ್ಬರೂ ಸರಳವಾಗಿ ಆಚರಿಸುವ ಮೂಲಕ ಕರೋನಾ ವಿರುದ್ಧದ ಹೋರಾಟದಲ್ಲಿ ಕೈ ಜೋಡಿಸಬೇಕು ಎಂದು ಅವರು ಮನವಿ ಮಾಡಿದರು.

ಎಲ್ಲಾ ಪ್ರಮುಖ ಸಂಘ ಸಂಸ್ಥೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಲಾಗಿದ್ದು, ಕರೋನಾ ತಡೆಗಟ್ಟಲು ಎಲ್ಲರೂ ಸಹಕರಿಸುವ ಭರವಸೆ ನೀಡಿದ್ದಾರೆ.

ಭಿಕ್ಷುಕರ ಪುನರ್ವಸತಿ
ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಭಿಕ್ಷುಕರನ್ನು ಸಮಾಜ ಕಲ್ಯಾಣ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ಸೇರಿಸುವಂತೆ ಸೂಚನೆ ನೀಡಲಾಗಿದೆ ಎಂದರು.

ಹಕ್ಕಿ ಜ್ವರ
ನೆರೆಯ ಜಿಲ್ಲೆಯಲ್ಲಿ ಹಕ್ಕಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೋಳಿ ಮಾಂಸ ಮತ್ತು ಮೊಟ್ಟೆ ಮಾರಾಟದ ಮೇಲೆ ನಿರ್ಬಂಧ ವಿಧಿಸಲಾಗಿದೆ.

ಕೆಎಫ್‍ಡಿ ನಿಯಂತ್ರಣದಲ್ಲಿದೆ
ಮಂಗನ ಕಾಯಿಲೆ ನಿಯಂತ್ರಣದಲ್ಲಿದ್ದು, ನಿರಂತರ ನಿಗಾ ವಹಿಸಲಾಗಿದೆ. ಸೋಂಕು ಪೀಡಿತರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದರು.

ಚೆಕ್‍ಪೋಸ್ಟ್
ಮಂಗಳೂರಿನಲ್ಲಿ ಕರೋನಾ ಪಾಸಿಟಿವ್ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಆಗಮಿಸುವ ವಾಹನಗಳನ್ನು ಹಾಗೂ ದಾವಣಗೆರೆಯಲ್ಲಿ ಕೋಳಿ ಜ್ವರ ಪ್ರಕರಣ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ತಪಾಸಣೆ ನಡೆಸಲು ಗಡಿಭಾಗದಲ್ಲಿ ಚೆಕ್‍ಪೋಸ್ಟ್ ತೆರೆಯಲಾಗುವುದು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಾಂತರಾಜು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ ಮತ್ತಿತರರು ಉಪಸ್ಥಿತರಿದ್ದರು.

Get in Touch With Us info@kalpa.news Whatsapp: 9481252093

Tags: CoronaUpdatesInIndiacoronavirus updatesCovid_19indiahospitalMalnadNewsShivamoggaUgadi Festivalಆಸ್ಪತ್ರೆಕೊರೋನಾ ವೈರಸ್ದಾವಣಗೆರೆಮಂಗನ ಕಾಯಿಲೆಯುಗಾದಿ ಹಬ್ಬ
Share215Tweet123Send
Previous Post

ಕೊರೋನಾ ಹಿನ್ನೆಲೆ: ಶಿವಮೊಗ್ಗ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಕಂಟ್ರೋಲ್ ರೂಂ

Next Post

ಕೊನೆಯದಾಗಿ ಎಚ್ಚರಿಕೆ ನೀಡುತ್ತಿದ್ದೇನೆ, ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ: ಸಿಎಂ ಬಿಎಸ್’ವೈ ಖಡಕ್ ವಾರ್ನಿಂಗ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡ, ಪರಿಣಾಮ ಎದುರಿಸುತ್ತೀರಿ: ಕೈ ನಾಯಕರಿಗೆ ಸಿಎಂ ಬಿಎಸ್’ವೈ ಎಚ್ಚರಿಕೆ

ಕೊನೆಯದಾಗಿ ಎಚ್ಚರಿಕೆ ನೀಡುತ್ತಿದ್ದೇನೆ, ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ: ಸಿಎಂ ಬಿಎಸ್’ವೈ ಖಡಕ್ ವಾರ್ನಿಂಗ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

ಈ ದಿನಗಳು ಹುಬ್ಬಳ್ಳಿ-ವಿಜಯಪುರ-ಹುಬ್ಬಳ್ಳಿ ಡೆಮು ರೈಲು ಸಂಚಾರ ಭಾಗಶಃ ರದ್ದು

March 3, 2026
ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

ಮಾ.7ರಿಂದ 10 ಸಹ್ಯಾದ್ರಿ ನಾಟಕೋತ್ಸವ | ಜೋಕುಮಾರಸ್ವಾಮಿ ಪ್ರದರ್ಶನದೊಂದಿಗೆ ಚಾಲನೆ

March 3, 2026
‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

‘ಶಾಖಾಹಾರಿ’ ಸಿನಿಮಾಗೆ ಪ್ರತಿಷ್ಠಿತ ಫಿಲ್ಮ್‌ಫೇರ್ ಅವಾರ್ಡ್

March 3, 2026
ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

ಪುತ್ತೂರಿನ ಆಗಸದ ಕೆಳ ಎತ್ತರದಲ್ಲಿ ಹಾರಾಡಿದ ಸಣ್ಣ ವಿಮಾನ | ಭಯ ಪಡುವ ಅಗತ್ಯವಿಲ್ಲ

March 3, 2026
ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

ಮಾ.3ರಂದು ಈಡಿಗರ ಬಾಲಕರ ವಿದ್ಯಾರ್ಥಿ ನಿಲಯ ಕಟ್ಟಡ ಶಂಕುಸ್ಥಾಪನಾ ಸಮಾರಂಭ

March 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL