No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ವಿಜಯನಗರ

ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 12, 2026
in ವಿಜಯನಗರ
0
ಫೆ.13ರ ನಾಳೆಯಿಂದ ಮೂರು ದಿನ ಹಂಪಿ ಉತ್ಸವ | ತಾರಾ ಮೆರುಗು | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ವಿಜಯನಗರ  |

ಐತಿಹಾಸಿಕ ವಿಜಯನಗರ ಸಾಮ್ರಾಜ್ಯದ ರಾಜಧಾನಿಯಾಗಿದ್ದ ಹಂಪಿಯಲ್ಲಿ ಫೆಬ್ರವರಿ 13, 14 ಮತ್ತು 15ರಂದು ‘ಹಂಪಿ ಉತ್ಸವ–2026’ ಅದ್ದೂರಿಯಾಗಿ ಜರುಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಬಾರಿಯ ಉತ್ಸವದ ಸಿದ್ಧತೆಗಳು ಹಾಗೂ ವಿಶೇಷತೆಗಳ ಕುರಿತು ವಿವರವಾದ ಮಾಹಿತಿ ನೀಡಿದರು.

ಫೆಬ್ರವರಿ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಸಾಂಸ್ಕೃತಿಕ ವೈಭವಕ್ಕೆ ಚಾಲನೆ ನೀಡಲಿದ್ದಾರೆ. ಉದ್ಘಾಟನೆಯ ದಿನದಂದು ಮುಖ್ಯಮಂತ್ರಿಗಳು ಹಂಪಿಯಲ್ಲೇ ವಾಸ್ತವ್ಯ ಹೂಡಲಿದ್ದು, ಮರುದಿನ ಹಾವೇರಿಯಲ್ಲಿ ನಡೆಯಲಿರುವ ಕಾರ್ಯಕ್ರಮಕ್ಕೆ ತೆರಳಲಿದ್ದಾರೆ ಎಂದು ತಿಳಿಸಿದರು.

ಹಂಪಿ ಉತ್ಸವದ ಅಂಗವಾಗಿ ಆರು ವೇದಿಕೆಗಳಲ್ಲಿ ಸಾಂಸ್ಕೃತಿಕ ಸೌರಭ ನಡೆಯಲಿದೆ. ಉತ್ಸವಕ್ಕಾಗಿ ಎಂ.ಪಿ. ಪ್ರಕಾಶ್ ವೇದಿಕೆ, ಶ್ರೀಕೃಷ್ಣದೇವರಾಯ (ಎದುರು ಬಸವಣ್ಣ) ವೇದಿಕೆ, ಸಾಸಿವೆಕಾಳು ಗಣಪ ವೇದಿಕೆ, ವಿದ್ಯಾರಣ್ಯ (ಮಹನಾವಮಿ ದಿಬ್ಬ) ವೇದಿಕೆ ಹಾಗೂ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ವೇದಿಕೆ ಸೇರಿದಂತೆ ಒಟ್ಟು ಆರು ಬೃಹತ್ ವೇದಿಕೆಗಳನ್ನು ಸಿದ್ಧಪಡಿಸಲಾಗಿದೆ ಎಂದರು.
ಎಂ.ಪಿ. ಪ್ರಕಾಶ್ ವೇದಿಕೆ ಪ್ರಧಾನ ವೇದಿಕೆಯಾಗಿದ್ದು, ಇಲ್ಲಿ 50,000 ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈ ಬಾರಿ 8 ರಿಂದ 10 ಲಕ್ಷ ಜನರು ಸೇರುವ ನಿರೀಕ್ಷೆಯಿದ್ದು, 15 ಸಾವಿರ ಆಸನಗಳನ್ನು ಕಾಯ್ದಿರಿಸಲಾಗಿದೆ ಎಂದರು.

ತಾರಾ ಮೆರುಗು
ಈ ಬಾರಿಯ ಉತ್ಸವದಲ್ಲಿ ಸ್ಯಾಂಡಲ್‌ವುಡ್‌ನ ಖ್ಯಾತ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಪ್ರಮುಖವಾಗಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ಅಶ್ವಿನಿ ಪುನೀತ್ ರಾಜ್‌ಕುಮಾರ್, ಗೋಲ್ಡನ್ ಸ್ಟಾರ್ ಗಣೇಶ್, ರಕ್ಷಿತ್ ಶೆಟ್ಟಿ, ರಚಿತಾ ರಾಮ್, ಡಾಲಿ ಧನಂಜಯ್ ಮತ್ತು ಬಿಗ್ ಬಾಸ್ ವಿಜೇತ ಗಿಲ್ಲಿನಟ ಭಾಗವಹಿಸುವುದು ಖಚಿತವಾಗಿದೆ ಎಂದು ತಿಳಿಸಿದರು.

ವಿಶೇಷ ಆಕರ್ಷಣೆಯ ವಿದ್ಯುತ್ ದೀಪಾಲಂಕಾರ
ಹಂಪಿ ಹಾಗೂ ಸುತ್ತಮುತ್ತಲಿನ ಸುಮಾರು 50 ಕಿಲೋಮೀಟರ್ ವ್ಯಾಪ್ತಿಯಲ್ಲಿ ವಿಶೇಷ ಲೈಟಿಂಗ್ ವ್ಯವಸ್ಥೆ ಮಾಡಲಾಗಿದೆ. ಇಡೀ ಹಂಪಿ ವಿದ್ಯುತ್ ದೀಪಗಳಿಂದ ಝಗಮಗಿಸುತ್ತಿದೆ.

ಹಂಪಿ ಉತ್ಸವವನ್ನು ವಿಜೃಂಭಣೆಯಿಂದ ಆಚರಿಸುವ ನಿಟ್ಟಿನಲ್ಲಿ ಯಾವುದೇ ಅಹಿತಕರ ಘಟನೆಗಳು ಉಂಟಾಗದಂತೆ ಭದ್ರತಾ ದೃಷ್ಟಿಯಿಂದ ಸುಮಾರು 2,000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರಲ್ಲಿ ಒಬ್ಬ ಎಸ್‌ಪಿ, 8 ಅಡಿಷನಲ್ ಎಸ್‌ಪಿ, 15 ಡಿವೈಎಸ್‌ಪಿ ಹಾಗೂ 61 ಇನ್ಸ್ಪೆಕ್ಟರ್‌ಗಳು ಒಳಗೊಂಡಿದ್ದಾರೆ.ಧ್ವನಿ ಮತ್ತು ಬೆಳಕು ಕಾರ್ಯಕ್ರಮ
ಹಕ್ಕ-ಬುಕ್ಕರ ಇತಿಹಾಸವನ್ನು ಸಾರುವ ವಿಶೇಷ ಧ್ವನಿ ಮತ್ತು ಬೆಳಕು ಕಾರ್ಯಕ್ರಮ ಆಯೋಜಿಸಲಾಗಿದೆ. ಉತ್ಸವ ಮುಗಿದ ಬಳಿಕವೂ ಈ ಕಾರ್ಯಕ್ರಮ 7 ದಿನಗಳ ಕಾಲ ಮುಂದುವರಿಯಲಿದೆ ಎಂದು ತಿಳಿಸಿದರು.

ಉಚಿತ ಊಟದ ವ್ಯವಸ್ಥೆ
ಭಕ್ತಾದಿಗಳು ಮತ್ತು ಸಾರ್ವಜನಿಕರಿಗಾಗಿ ಕೃಷ್ಣ ದೇವಸ್ಥಾನದ ಬಳಿ ಸರ್ಕಾರದಿಂದ ಉಚಿತ ಊಟ ಮತ್ತು ತಿಂಡಿ ವ್ಯವಸ್ಥೆ ಮಾಡಲಾಗಿದೆ.  ಉತ್ಸವಕ್ಕಾಗಿ ಸುಮಾರು 14 ರಿಂದ 15 ಕೋಟಿ ರೂಪಾಯಿ ಬಜೆಟ್ ಮೀಸಲಿಡಲಾಗಿದೆ ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಸಿಇಓ ನೋಂಗ್ಜಾಯ್ ಮಹ್ಮದ್ ಅಲಿ ಅಕ್ರಂ ಷಾ, ಎಸ್‌ಪಿ ಜಾಹ್ನವಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

ವಿಜಯನಗರ ಬೈಕ್ ರ‍್ಯಾಲಿ
ಉತ್ಸವದ ಅಂಗವಾಗಿ ಇಂದು ಬೈಕ್ ರ‍್ಯಾಲಿಗೆ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ಅವರು ಸ್ವತಃ ಬೈಕ್‌ನಲ್ಲಿ ಪಾಲ್ಗೊಂಡು ಅಧಿಕೃತ ಚಾಲನೆ ನೀಡಿದರು.
ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಈ ರ‍್ಯಾಲಿಯಲ್ಲಿ ಸುಮಾರು 150ಕ್ಕೂ ಹೆಚ್ಚು ಬೈಕ್‌ಗಳು ಭಾಗವಹಿಸಿತು. ಜಿಲ್ಲಾಧಿಕಾರಿಗಳ ಕಚೇರಿಯಿಂದ ಆರಂಭವಾದ ರ‍್ಯಾಲಿ ನಗರದ ಪ್ರಮುಖ ವೃತ್ತಗಳಲ್ಲಿ ಸಂಚರಿಸಿ, ಅನಂತಶಯನಗುಡಿ, ಕೊಂಡನಾಯಕನಹಳ್ಳಿ, ಮಲಪನಗುಡಿ, ಗಾಳೆಮ್ಮನಗುಡಿ ಹಾಗೂ ಕಡ್ಡಿರಾಂಪುರ ಮಾರ್ಗವಾಗಿ ಹಂಪಿಯ ಶ್ರೀ ವಿರೂಪಾಕ್ಷ ದೇಗುಲದವರೆಗೆ ಯಶಸ್ವಿಯಾಗಿ ತಲುಪಿತು.

ರ‍್ಯಾಲಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಪಂಚಾಯತ್ ಸಿಇಒ ನೋಂಗ್ಜಾಯ್ ಮುಹಮ್ಮದ್‌ ಅಲಿ ಅಕ್ರಮ್ ಷಾ ಸೇರಿದಂತೆ ವಿವಿಧ ಇಲಾಖೆ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ಸ್ಥಳೀಯ ಕಲಾವಿದರಿಗೆ ಆದ್ಯತೆ
ಸ್ಥಳೀಯ ಕಲಾವಿದರ ಪಟ್ಟಿಯನ್ನೂ ಇದೇ ದಿನ ಬಿಡುಗಡೆ ಮಾಡಲಾಗಿದ್ದು, ಅವರಿಗೆ ಉತ್ಸವದ 6 ವೇದಿಕೆಗಳಲ್ಲಿ ಹೆಚ್ಚಿನ ಪ್ರೋತ್ಸಾಹ ನೀಡಿ ಕಾರ್ಯಕ್ರಮ ನೀಡಲು ಅವಕಾಶ ಕಲ್ಪಿಸಲಾಗಿದೆ.

(ವರದಿ: ಮುರುಳೀಧರ್ ನಾಡಿಗೇರ್)

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

 

Tags: Hampi Utsv 2026Kannada News WebsiteLatest News KannadaSri KrishnadevarayaVidyaranyaಎಂ.ಪಿ. ಪ್ರಕಾಶ್ಗೋಲ್ಡನ್ ಸ್ಟಾರ್ ಗಣೇಶ್ಪುನೀತ್ ರಾಜ್‌ಕುಮಾರ್ಮಹನಾವಮಿ ದಿಬ್ಬಲೈಟಿಂಗ್ವಿಜಯನಗರವಿದ್ಯಾರಣ್ಯಶಿವರಾಜ್ ಕುಮಾರ್ಶ್ರೀಕೃಷ್ಣದೇವರಾಯಹಂಪಿ ಉತ್ಸವ
Share207Tweet129Send
Previous Post

ಶಿವಮೊಗ್ಗ | ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನ, ಯುವಕ ಸಾವು!

Next Post

ಹಾಸನ-ಸೋಲಾಪುರ ಎಕ್ಸ್’ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Mysore – Shivamogga Express Big Update on this Date | Must Read

ಹಾಸನ-ಸೋಲಾಪುರ ಎಕ್ಸ್'ಪ್ರೆಸ್ ರೈಲಿನ ಟೈಮಿಂಗ್ ಬದಲು | ಇಲ್ಲಿದೆ ಡೀಟೇಲ್ಸ್

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL