ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಹೊಸಮನೆ ಬಡಾವಣೆಯಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಇಡಿಯ ಬಡಾವಣೆಯ ನಾಗರಿಕರಿಗೆ ರ್ಯಾಪಿಡ್ ಟೆಸ್ಟ್ ಮಾಡಲಾಗುತ್ತಿದೆ.
ಮಹಾನಗರಪಾಲಿಕೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಶ್ರೀರಾಮನಗರ ಇವರ ಸಹಯೋಗದೊಂದಿಗೆ ಹೊಸಮನೆ ಬಡಾವಣೆಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಪ್ರಾಥಮಿಕ ಆರೋಗ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಂದ ಇಂದಿನಿಂದ ಮೂರು ದಿನಗಳ ಕಾಲ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆವರೆಗೆ ಕೊರೋನಾ ಟೆಸ್ಟ್ ನಡೆಸಲಾಗುವುದು.
ಈ ಕುರಿತಂತೆ ಮಾತನಾಡಿರುವ ಪಾಲಿಕೆ ಸದಸ್ಯೆ ರೇಖಾ ರಂಗನಾಥ್, ಬಡಾವಣೆಯಲ್ಲಿ ಕೆಮ್ಮು, ಶೀತ, ಜ್ವರ ಲಕ್ಷಣಗಳು ಇರುವಂತಹ ನಾಗರಿಕರು ಕೊರೋನಾ ಟೆಸ್ಟ್ ಮಾಡಿಸುವ ಮುಖಾಂತರ ಆರೋಗ್ಯ ಜಾಗೃತಿ ವಹಿಸಬೇಕು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ನಗರ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಶ್ರೀಧರ್ ರವರು, ಯುವ ಮುಖಂಡರಾದ ಕೆ. ರಂಗನಾಥ್ ಪ್ರಾಥಮಿಕ ಆರೋಗ್ಯ ಮಹಿಳಾ ಸಹಾಯಕಿ ವಿಜಯ ಮತ್ತು ಸಿಬ್ಬಂದಿಗಳು ಹಾಗೂ ಬಡಾವಣೆಯ ನಾಗರಿಕರು ಉಪಸ್ಥಿತರಿದ್ದರು.
Get In Touch With Us info@kalpa.news Whatsapp: 9481252093






Discussion about this post