ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು, ಸರ್ಕಾರದ ಪತನಕ್ಕೆ ಕಾರಣವಾದ ಶಾಸಕರಲ್ಲಿ ಮೂವರನ್ನು ಅನರ್ಹಗೊಳಿಸಿದ ವಿಧಾನಸಭಾ ಸ್ಪೀಕರ್ ರಮೇಶ್ ಕುಮಾರ್ ಆದೇಶಿಸಿದ್ದಾರೆ.
ಈ ಕುರಿತಂತೆ ಪತ್ರಿಕಾಗೋಷ್ಠಿಯಲ್ಲಿ ಇಂದು ಸಂಜೆ ಮಾತನಾಡಿರುವ ಅವರು, ಕಾಂಗ್ರೆಸ್ ಶಾಸಕರಾದ ಆರ್. ಶಂಕರ್, ರಮೇಶ್ ಜಾರಕಿಹೊಳಿ ಹಾಗೂ ಮಹೇಶ್ ಕುಮಟಳ್ಳಿ ಅವರನ್ನು ವಿಧಾನಸಭಾ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ. ಈ ಮೂವರು ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆಯಡಿ ಅನರ್ಹಗೊಳಿಸುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ನೀಡಿದ ದೂರಿನ ಆಧಾರದ ಅನರ್ಹಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.
2023 ಮೇ ತಿಂಗಳವರೆಗೆ ಈ ಮೂವರ ಅನರ್ಹತೆ ಊರ್ಜಿತದಲ್ಲಿರುತ್ತದೆ ಎಂದು ಸ್ಪೀಕರ್ ಮಾಹಿತಿ ನೀಡಿದ್ದಾರೆ.
Discussion about this post