ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಮಾರಕ ಕೊರೋನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಸಂಕಷ್ಟದಲ್ಲಿರುವ ಬಡವರ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಮೂರು ತಿಂಗಳು ಉಚಿತ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದೆ.
ಉಜ್ವಲಾ ಯೋಜನೆಯ ಅಡಿಯಲ್ಲಿ ಗ್ಯಾಸ್ ಸಂಪರ್ಕ ಪಡೆದುಕೊಂಡಿರುವ ಫಲಾನುಭವಿಗಳಿಗೆ ಉಚಿತ ಅಡುಗೆ ಅನಿಲ ವಿತರಣೆ ಮಾಡಲಿದ್ದು, ಈ ಕುರಿತಂತೆ ರಾಜ್ಯ ಸಚಿವ ಸಂಪುಟ ನಿರ್ಧಾರ ಕೈಗೊಂಡಿದೆ.
ರಾಜ್ಯ ಸರ್ಕಾರ ರೂ 27.52 ಕೋಟಿ ಭರಿಸಲಿದ್ದು, ಸುಮಾರು 1 ಲಕ್ಷ ಫಲಾನುಭವಿಗಳಿಗೆ ಇದರ ಪ್ರಯೋಜನ ಸಿಗಲಿದೆ.
Get in Touch With Us info@kalpa.news Whatsapp: 9481252093

















